ಬೆಂಗಳೂರಿನ ಟ್ರಿನಿಟಿ ವೃತ್ತದಲ್ಲಿ ಪೊಲೀಸ್ ಜೀಪ್ ಪಲ್ಟಿ
ಬೆಂಗಳೂರು, ಮಾರ್ಚ್ 2: ಬೆಂಗಳೂರಿನ ಟ್ರಿನಿಟಿ ವೃತ್ತದಲ್ಲಿ ಪೊಲೀಸ್ ಜೀಪ್ ಪಲ್ಟಿ ಹೊಡೆದಿದೆ.
ಹಲಸೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಪೊಲೀಸ್ ಜೀಪ್ ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ ಹೊಡೆದಿದೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಾಲಕನಿಗೆ ನಿಯಂತ್ರಣ ತಪ್ಪಿ ಖಾಸಗಿ ಕ್ಯಾಬ್‌ವೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಎಂಜಿ ರಸ್ತೆಯ ಟ್ರಿನಿಟಿ ಸರ್ಕಲ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಜೀಪು ಮತ್ತು ಕಾರು ನಜ್ಜುಗುಜ್ಜಾಗಿದೆ.












Click it and Unblock the Notifications