ಬಹುಕೋಟಿ ವಂಚಕ ಮನ್ಸೂರ್ ಅಲಿಖಾನ್ ಇಂದು ಬೆಂಗಳೂರಿಗೆ

ಬೆಂಗಳೂರು, ಜುಲೈ 20: ಐಎಂಎ ಜ್ಯುವೆಲ್ಸ್ ಮಾಲೀಕರ ಮನ್ಸೂರ್ ಅಲಿಖಾನ್ ನನ್ನು ಜಾರಿ ನಿದೇಶನಾಲಯ ಇಂದು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದೆ.

ದುಬೈನಿಂದ ದೆಹಲಿಗೆ ಮನ್ಸೂರ್ ಹೊರಟಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡಿದ್ದ ಎಸ್‌ಐಟಿಯು ವಿಮಾನ ನಿಲ್ದಾಣದಲ್ಲಿ ಕಾದು ಕೂತು ಆತನನ್ನು ಬಂಧಿಸಿದ್ದರು.

ಮನ್ಸೂರ್ ಖಾನ್‌ನನ್ನು ಇಡಿ ಅಧಿಕಾರಿಗಳು ಶುಕ್ರವಾರ ರಾತ್ರಿ ದೆಹಲಿ ಕೋರ್ಟ್ ಎದುರು ಹಾಜರು ಪಡಿಸಲಾಗಿತ್ತು. ಇಂದು ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದೆ.

Police may bring back IMA Founder fraud Mansoor to Bengaluru today

ಈ ವೇಳೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸುವ ಸಾಧ್ಯತೆ ಇದೆ. ಪೊಲೀಸರು ಜೊತೆಗೆ ಎಸ್‍ಐಟಿ ತಂಡ ಕೂಡ ತಮ್ಮ ವಶಕ್ಕೆ ನೀಡುವಂತೆ ಕೇಳುವ ಸಾಧ್ಯತೆ ಇದೆ.

ಐಎಂಎ ಸಂಸ್ಥೆಯು ಸಾವಿರಾರು ಜನರಿಗೆ 4000 ಸಾವಿರ ಕೋಟಿಗೂ ಅಧಿಕ ಹಣ ವಂಚನೆ ಮಾಡಿದೆ ಎನ್ನಲಾಗಿದ್ದು, ಮನ್ಸೂರ್ ಖಾನ್ ಮೇಲೆ 60000 ಕ್ಕೂ ಹೆಚ್ಚು ಪ್ರಕರಣಗಳು ಕರ್ನಾಟಕ, ಹೊರ ರಾಜ್ಯ ಸೇರಿದಂತೆ ಹೊರ ದೇಶಗಳಿಂದಲೂ ದಾಖಲಾಗಿದ್ದವು.

ಬಳ್ಳಾರಿಯ ಕಾವೇರಿ ಜಂಕ್ಷನ್ ಬಳಿ ಕಾರಿನಲ್ಲಿ ಖಾನ್‍ನನ್ನು ಇಡಿ ಅಧಿಕಾರಿಗಳು ಕರೆದುಕೊಂಡು ಬರುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಇಡಿ ವಿಶೇಷ ಕೋರ್ಟ್ ಎದುರು ಅಧಿಕಾರಿಗಳು ಮನ್ಸೂರ್ ಖಾನ್‍ನನ್ನು ಹಾಜರು ಪಡಿಸಲಿದ್ದಾರೆ.

ಜೂನ್ 8 ರಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಕುಟುಂಬ ಸದಸ್ಯರ ಸಮೇತ ಮನ್ಸೂರ್ ಖಾನ್ ಪರಾರಿ ಆಗಿದ್ದ. ಅಲ್ಲಿಂದಲೇ ವಿಡಿಯೋಗಳನ್ನು ಬಿಡುಗಡೆ ಮಾಡಿ ಕೆಲವು ಗಣ್ಯರಿಗೆ ಕೋಟ್ಯಂತ ರೂಪಾಯಿ ಲಂಚ ನೀಡಿದ್ದಾಗಿ ಹೇಳಿದ್ದ, ಇದರಲ್ಲಿ ಶಾಸಕ ರೋಷನ್ ಬೇಗ್ ಸಹ ಒಬ್ಬರು.

ಮನ್ಸೂರ್ ಖಾನ್ ಸಾವಿರಾರು ರೂಪಾಯಿ ಹಣವನ್ನು ತೆಗೆದುಕೊಂಡು ಸುಮಾರು ಒಂದು ತಿಂಗಳ ಹಿಂದೆ ಪರಾರಿಯಾಗಿದ್ದನು. ಈಗಾಗಲೇ ಮನ್ಸೂರ್ ಖಾನ್‍ನ ಸುಮಾರು 200 ಕೋಟಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಈತ ಬರುವ ಸುದ್ದಿ ಕೇಳಿ ಇಡಿ ಕೋರ್ಟ್ ಬಳಿ ಸಾವಿರಾರು ಜನರು ಬರುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಡಿ ಕೋರ್ಟ್ ಬಳಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

ರಾಜ್ಯ ಸರ್ಕಾರವು ಐಎಂಎ ಪ್ರಕರಣವನ್ನು ಎಸ್‌ಐಟಿ ವಶಕ್ಕೆ ಒಪ್ಪಿಸಿದ್ದು, ಎಸ್‌ಐಟಿಯು ಈಗಾಗಲೇ ಮನ್ಸೂರ್ ಖಾನ್‌ಗೆ ಸಂಬಂಧಿಸಿದ ಆಸ್ತಿಗಳನ್ನು ಪತ್ತೆಹಾಕಿ ಬಹುಪಾಲನ್ನು ವಶಕ್ಕೆ ಪಡೆದುಕೊಂಡಿದೆ. ಇಡಿ ಸಹ ಈ ಪ್ರಕರಣದ ತನಿಖೆ ನಡೆಸುತ್ತಿದ್ದದು, ಈ ಮೊದಲೇ ಮನ್ಸೂರ್ ಖಾನ್‌ಗೆ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಕೋರಿತ್ತು.

ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು.

ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

ವಿಡಿಯೋದಲ್ಲಿ ಈಗಾಗಲೇ ಹಲವು ಹೆಸರುಗಳನ್ನು ಬಿಚ್ಚಿಟ್ಟಿದ್ದ ಮನ್ಸೂರ್ ಖಾನ್‌ ಇದೀಗ ಭಾರತಕ್ಕೆ ಬಂದಿದ್ದು, ವಿಚಾರಣೆ ವೇಳೆ ಇನ್ನಷ್ಟು ಹೆಸರುಗಳು ಹೊರಬೀಳಲಿವೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+