• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಬೆಂಗಳೂರಲ್ಲಿ ಯಾರೂ ಕೆಮ್ಮುವ ಹಾಗಿಲ್ಲ!

|
   Section 144 imposed on Bengaluru due to CAA protest | BANGALORE | SECTION 144 | ONEINDIA KANNADA

   ಬೆಂಗಳೂರು, ಡಿಸೆಂಬರ್.19: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕರ್ನಾಟಕದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಹಲವು ಸಂಘಟನೆಗಳು, ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ಆದರೆ, ಬೆಂಗಳೂರಿನಲ್ಲಿ ಮೂರು ದಿನ ಯಾರೂ ಕೆಮ್ಮಂಗಿಲ್ಲ.

   ಹೌದು, ರಾಜ್ಯ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಘೋಷಿಸಲಾಗಿದೆ. ಡಿಸೆಂಬರ್.19ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್.21 ರಾತ್ರಿ 12 ಗಂಟೆವರೆಗೂ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

   ರಾಜ್ಯಾದ್ಯಂತ 3 ದಿನ ನಿಷೇಧಾಜ್ಞೆ: ಡಿಜಿಪಿಗೆ ಸಿಎಂ ಕೊಟ್ಟ ಸಂದೇಶವೇನು?

   ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದರಿಂದ ಮುಂದಿನ ಮೂರು ದಿನಗಳ ಕಾಲ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಪ್ರತಿಭಟನೆ ನಡೆಸುವಂತಿಲ್ಲ. ಮೌನ ಪ್ರತಿಭಟನೆಯನ್ನೂ ಮಾಡುವ ಹಾಗಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವವರು ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

   ಸಿಲಿಕಾನ್ ಸಿಟಿಯಲ್ಲಿ ಬಿಗಿ ಪೊಲೀಸ್ ಭದ್ರತೆ

   ಸಿಲಿಕಾನ್ ಸಿಟಿಯಲ್ಲಿ ಬಿಗಿ ಪೊಲೀಸ್ ಭದ್ರತೆ

   ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಟೌನ್ ಹಾಲ್ ನಲ್ಲಿ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ರಾಜಕೀಯ ಪಕ್ಷಗಳು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಟೌನ್ ಹಾಲ್ ಬಳಿ ಖಾಕಿ ಕಾವಲು ಹಾಕಲಾಗಿದೆ. ನೂರಾರು ಮಂದಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ.

   ನಿಷೇಧಾಜ್ಞೆ ಹಿನ್ನೆಲೆ ಪೊಲೀಸರ ರಜೆ ರದ್ದು

   ನಿಷೇಧಾಜ್ಞೆ ಹಿನ್ನೆಲೆ ಪೊಲೀಸರ ರಜೆ ರದ್ದು

   ಬೆಂಗಳೂರು ಅಷ್ಟೇ ಅಲ್ಲದೇ, ರಾಜ್ಯಾದ್ಯಂತ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಕೆಲವು ಸಂಘಟನೆಗಳು ಕರೆ ಕೊಟ್ಟಿವೆ. ಹೀಗಾಗಿ ಕರ್ನಾಟಕ ರಾಜ್ಯ ಪೊಲೀಸರಿಗೆ ನೀಡಿದ್ದ ರಜೆಯನ್ನು ರದ್ದುಗೊಳಿಸಲಾಗಿದೆ. ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

   ನಿಷೇಧಾಜ್ಞೆ ಹೇರಿದ ಬೆಂಗಳೂರು ಪೊಲೀಸರಿಗೆ ನೆಟ್ಟಿಗರ ತರಹೇವಾರಿ ಪ್ರಶ್ನೆಗಳು

   ನಗರದಲ್ಲಿ ಎಂದಿನಂತೆ ಬಿಎಂಟಿಸಿ ಬಸ್ ಸಂಚಾರ

   ನಗರದಲ್ಲಿ ಎಂದಿನಂತೆ ಬಿಎಂಟಿಸಿ ಬಸ್ ಸಂಚಾರ

   ಸಿಲಿಕಾನ್ ಸಿಟಿಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಘೋಷಿಸಿದ್ದು, ಇದರ ನಡುವೆ ಇಂದು ನಗರದಲ್ಲಿ ಬಿಎಂಟಿಸಿ ಬಸ್ ಗಳ ಸಂಚಾರ ಎಂದಿನಂತೆ ಸುಗಮವಾಗಿತ್ತು. ರಾಜ್ಯ ರಾಜಧಾನಿಯಲ್ಲಿ ಕೆಎಸ್ಆರ್ ಟಿಸಿ ಬಸ್ ಗಳು ಕೂಡಾ ಎಂದಿನಂತೆ ಸಂಚಾರ ನಡೆಸಿದವು. ಮೆಟ್ರೋ ಸಂಚಾರಕ್ಕೂ ಕೂಡಾ ಯಾವುದೇ ಅಡೆತಡೆ ಇರಲಿಲ್ಲ.

   ಎಂದಿನಂತೆ ಆರಂಭಗೊಡ ಶಾಲಾ-ಕಾಲೇಜುಗಳು

   ಎಂದಿನಂತೆ ಆರಂಭಗೊಡ ಶಾಲಾ-ಕಾಲೇಜುಗಳು

   ಇನ್ನು, ನಗರದಲ್ಲಿ ನಿಷೇಧಾಜ್ಞೆ ನಡುವೆಯೂ ಶಾಲಾ-ಕಾಲೇಜುಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ. ಅಲ್ಲದೇ ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಹೇಳಲಾಗಿದೆ. ಆದರೆ, ಪೋಷಕರು ಮಾತ್ರ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

   ಇತ್ತ ನಗರದ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದು, ಹಲವೆಡೆಗಳಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಆಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

   English summary
   Citizenship Amendment Act: Section 144 Announced In Bangalore. Police Not Allow For Any Kind Of Protests In City.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X