ಇಲ್ಲದ ಪರವಾನಗಿ, ನಿಲ್ಲದ ಸಂಗೀತ, 400 ಬಾರ್, ಪಬ್‌ಗಳಿಗೆ ನೋಟಿಸ್
ಬೆಂಗಳೂರು, ಜು.18: ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಹಾಗೂ ಪರವಾನಗಿ ಪಡೆಯದೆ ಸಂಗೀತ ಹಾಕುತ್ತಿರುವ ನಗರದ 400 ಕ್ಕೂ ಹೆಚ್ಚು ಬಾರ್‌ಗಳಿಗೆ ನೋಟಿಸ್ ನೀಡಿರುವುದಾಗಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸಾರ್ವಜನಿಕರ ಮನೋರಂಜನೆ ಸ್ಥಳ ನಿಯಂತ್ರಣ ಮತ್ತು ಪರವಾನಗಿ ಕುರಿತು ಬೆಂಗಳೂರು ಪೊಲೀಸರ ಆದೇಶವನ್ನು 2018ರ ಜನವರಿಯಲ್ಲಿ ಸುಪ್ರೀಂಕೋರ್ಟ್ ಎತ್ತಿಹಿಡಿದಿತ್ತು. ಅದರ ಪಾಲನೆಗಾಗಿ 400 ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ ಪರವಾನಗಿ ಪಡೆಯಬೇಕೆಂದು ತಿಳಿಸಲಾಗಿದೆ ಎಂದರು.
ಅಗ್ನಿಶಾಮಕ ಇಲಾಖೆ, ಬಿಬಿಎಂಪಿ ಸೇರಿ ವಿವಿಧ ಇಲಾಖೆಯಿಂದ 10 ಪರವಾನಗಿ ಮತ್ತು ನಿರಪೇಕ್ಷಣಾ ಪತ್ರ ಪಡೆಯಬೇಕಿದೆ. ಆದರೆ ಕೆಲವರು ಬಾರ್ ಅಂಡ್ ರೆಸ್ಟೋರೆಂಟ್ ಕಾನೂನಿನ ಅನ್ವಯ ಪರವಾನಗಿ ಪಡೆದು ಸಂಗೀತ ಹಾಕುತ್ತಾರೆ. ಇದರಿಂದ ಜನಜೀವನಕ್ಕೆ ಅಡ್ಡಿ ಉಂಟಾಗುತ್ತಿದೆ. ಇದನ್ನು ಅರಿತು ಪಬ್, ಲೈವ್ ಬ್ಯಾಂಡ್, ಬಾರ್ ಅಂಡ್ ರೆಸ್ಟೋರೆಂಟ್ ಇನ್ನಿತರೆ ಮಳಿಗೆಗಳ ಮಾಲೀಕರಿಗೆ ನೋಡಿಸ್ ನೀಡಲಾಗಿದೆ.

15 ದಿನಗಳಲ್ಲಿ ಪರವಾನಗಿ ಪಡೆದು ಸ್ಥಳೀಯ ಠಾಣೆಗೆ ಹಾಜರು ಪಡಿಸಬೇಕು. ಲೈವ್ ಬ್ಯಾಂಡ್ ಪ್ರದರ್ಶನ ಸ್ಥಗಿತಗೊಳಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು , ಅವಧಿ ಅಂತ್ಯವಾಗಿರುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಕ್ರಮವಾಗಿ ಮನೋರಂಜನಾ ಸ್ಥಳವೆಂದು ಸಂಗೀತ ಹಾಕುವವರನ್ನು ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications