ಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣನೆ- ಪ್ರವೀಣ್ ಸೂದ್
ಬೆಂಗಳೂರು, ಜೂನ್ 9: ಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಪೊಲೀಸರು ಕೊರೊನಾ ವಾರಿಯರ್ಸ್ ಆಗಿ ಹೋರಾಟ ಮಾಡುತ್ತಿದ್ದಾರೆ. ನಿರಂತರವಾಗಿ ಜನರ ರಕ್ಷಣೆಗಾಗಿ ಶ್ರಮಿಸುತ್ತಿದ್ದಾರೆ. ಆದರೆ, ಕೊರೊನಾ ನಡುವೆ ಕರ್ತವ್ಯದಲ್ಲಿ ತೊಡಗಿದ ಪೊಲೀಸರಿಗೆ ಕೊರೊನಾ ಸೋಂಕು ತಗುಲುವ ಪ್ರಕರಣಗಳು ಕಂಡು ಬರುತ್ತಿವೆ. ಸೋಂಕು ಹರಡಬಹುದು ಎಂದು ತಿಳಿದಿದ್ದರು, ಪೊಲೀಸರು ಕೆಲಸದಲ್ಲಿ ತೊಡಗಿದ್ದಾರೆ.
ಇದೀಗ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಇಲಾಖೆ ಕಡೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಪೊಲೀಸರು ಕೊರೊನಾ ಸೋಂಕು ತಗುಲಿ ಕ್ವಾರಂಟೈನ್‌ನಲ್ಲಿ ಇರಬೇಕಾದ ಪರಿಸ್ಥಿತಿ ಬಂದರೆ, ಆಗ ಅವರ ಕ್ವಾರಂಟೈನ್ ಅವಧಿಯನ್ನು ಕೆಲಸ ಅವಧಿ ಎಂದು ಪರಿಗಣನೆ ಮಾಡಲಾಗುತ್ತದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ವಿಷಯ ಹಂಚಿಕೊಂಡಿದ್ದಾರೆ. ಪೊಲೀಸರ ಆತ್ಮಸ್ಥೈರ್ಯ ಹೆಚ್ಚಿಸುವ ದೃಷ್ಟಿಯಿಂದ ಅವರಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಸೋಂಕು ತಗುಲಿ ಮಾತ್ರವಲ್ಲದೆ, ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ಬೇರೆ ರಾಜ್ಯದಿಂದ ವಾಪಸ್ ಬಂದವರು ಹೀಗೆ ಕ್ವಾರಂಟೈನ್ ಆದ ಎಲ್ಲ ಪೊಲೀಸರಿಗೆ ಇದು ಅನ್ವಯ ಆಗಲಿದೆ.












Click it and Unblock the Notifications