ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಗಲೂರು ಬಳಿ ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಟೆಕ್ಕಿ ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ಜೂನ್ 1: ಕಾರಿನೊಳಗೇ ಬೆಂಕಿ ಹಚ್ಚಿಕೊಂಡು ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಶಯ ಪೀಡಿತ ಟೆಕ್ಕಿ ಪತಿಗೆ ಬುದ್ಧಿಕಲಿಸಲು ಪತ್ನಿ ಮಾಡಿದ್ದೇನು? ಸಂಶಯ ಪೀಡಿತ ಟೆಕ್ಕಿ ಪತಿಗೆ ಬುದ್ಧಿಕಲಿಸಲು ಪತ್ನಿ ಮಾಡಿದ್ದೇನು?

ಫ್ರೇಜರ್ ಟೌನ್ ನಿವಾಸಿ ಕಾರ್ತಿಕ್ ಶೆಟ್ಟಿ(34) ಮೃತ ಟೆಕ್ಕಿ, ಮೂಲತಃ ತಮಿಳುನಾಡಿನ ಕಾರ್ತಿಕ್ ಶೆಟ್ಟಿ ಹಲವು ವರ್ಷಗಳಿಂದ ಕುಟುಂಬ ಸಮೇತ ನಗರದಲ್ಲಿ ನೆಲೆಸಿದ್ದರು. ಕಾರ್ತಿಕ್ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ತಮ್ಮ ಕಾರಿನಲ್ಲಿ ತೆರೆಳಿದ್ದರು. ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ, ಕರೆ ಮಾಡಿದರೂ ಸ್ವಿಚ್ಡ್ ಆಫ್ ಎಂದು ಬರುತ್ತಿತ್ತು. ಇದರಿಂದ ಆತಂಕಗೊಂಡ ಆತನ ಪೋಷಕರು ಫ್ರೇಜರ್ ಟೌನ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

Police recovered a techie partially burnt body from his car

ನಾಲ್ಕು ವರ್ಷಗಳ ಹಿಂದೆ ಕಾರ್ತಿಕ್‌ಗೆ ವಿವಾಹವಾಗಿದ್ದು, ಎರಡು ವರ್ಷದ ಮಗು ಇದೆ. ಕಾರ್ತಿಕ್ ಮಾನ್ಯತಾ ಟೆಕ್‌ಪಾರ್ಕ್ ನಲ್ಲಿರುವ ಸಾಫ್ಟ್‌ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದರು.

ಬಾಗಲೂರಿನ ನಿರ್ಜನ ಪ್ರದೇಶವೊಂದರಲ್ಲಿ ಸ್ವಿಫ್ಟ್ ಕಾರೊಂದು ನಿಂತಿರುವ ಬಗ್ಗೆ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಾಗಲೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬನ ಮೃತದೇಹವಿರುವುದು ಪತ್ತೆಯಾಗಿದೆ. ಪರಿಶೀಲನೆ ನಡೆಸಿದಾಗ ಕಾರ್ತಿಕ್ ಎಂಬುದೇ ಸ್ಪಷ್ಟವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ತಿಕ್ ಖಿನ್ನತೆಗೆ ಒಳಗಾಗಿದ್ದರು, ಗುರುವಾರ ಕಚೇರಿಗೆ ತೆರಳದೆ ಹೊಸಹಳ್ಳಿಯ ನಿರ್ಜನ ಪ್ರದೇಶಕ್ಕೆ ಬಂದಿದ್ದಾರೆ. ಕಾರಿನ ಗ್ಲಾಸು ಹಾಕಿಕೊಂಡು ಎರಡು ಲೀಟರ್ ಪ್ಲಾಸ್ಟಿಕ್ ಬಾಟಲಿಯಲ್ಲಿ ತಂದಿದ್ದ ಪೆಟ್ರೋಲ್‌ನ್ನು ಮೈ ಮೇಲೆ ಸುರಿದುಕೊಂಂಡು ಬೆಂಕಿ ಹೆಚ್ಚಿಕೊಂಡಿದ್ದಾರೆ.

English summary
Police on Friday afternoon recovered a software engineer's partially burnt body fro his car near Bagalur of Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X