ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು
ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಬಂಧನವಾಗಿ ಸಂಪೂರ್ಣ ಒಂದು ವಾರ ಕಳೆದಿದ್ದು ಕಳೆದ ಎಂಟು ದಿನಗಳಿಂದ ನಟ ಪೊಲೀಸ್ ಠಾಣೆಯಲ್ಲಿದ್ದಾರೆ. ವಿವಿಧ ರೀತಿಯಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಪ್ರಕರಣ ಸಂಬಂಧ ಮಾಡಬಹುದಾದ ಎಲ್ಲಾ ಆರೋಗ್ಯ ತಪಾಸಣೆಯನ್ನು ಆರೋಪಿಗಳಿಗೆ ಮಾಡಿಸಲಾಗುತ್ತಿದೆ.
ಸದ್ಯ ಆರೋಗ್ಯ ತಪಾಸಣೆಯನ್ನು ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ನಟ ದರ್ಶನ್ ಅವರು ತಲೆಗೆ ಹಾಕಿದ್ದ ವಿಗ್ ಅನ್ನು ಪೊಲೀಸರು ತೆಗೆಸಿದ್ದಾರೆ ಎನ್ನಲಾಗಿದೆ.

ಕಳೆದ ಒಂಬತ್ತು ದಿನಗಳಿಂದ ಪೊಲೀಸರ ಕಸ್ಟಡಿಯಲ್ಲಿರುವ ಎಲ್ಲಾ ಆರೋಪಿಗಳನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರು ಪಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಎ-೧ ಆರೋಪಿ ಪವಿತ್ರಾ ಗೌಡ, ಎ-೨ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರೋಗ್ಯ ತಪಾಸಣೆಗೆ ಕರೆದುಕೊಂಡು ಹೋಗಲಾಗಿದೆ. ಈ ವೇಳೆ ಉಳಿದ ಆರೋಪಿಗಳಂತೆ ದರ್ಶನ್ ಕೂದಲಿನ ಮಾದರಿ ಸಂಗ್ರಹಿಸಲು ಪೊಲೀಸರು ದರ್ಶನ್ ಧರಿಸಿದ್ದ ವಿಗ್‌ಅನ್ನು ತೆಗೆಸಿದ್ದಾರೆ ಎಂದು ವರದಿಯಾಗಿದೆ.
ಆರೋಪಿ ದರ್ಶನ್ ಅವರ ರಕ್ತ ಹಾಗೂ ಕೂದಲಿನ ಸ್ಯಾಂಪಲ್‌ಅನ್ನು ಪೊಲೀಸರು ಪಡೆದಿದ್ದು, ಪ್ರಕರಣ ಸಂಬಂಧ ಆರೋಪಿಗಳ ಡಿಎನ್ಎ ಪರೀಕ್ಷೆಗೆ ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ದಿನದಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.












Click it and Unblock the Notifications