ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ಸಂಸದೆ ಸುಮಲತಾ ಬೆಂಗಳೂರು ನಿವಾಸಕ್ಕೆ ಪೊಲೀಸರ ಬಿಗಿ ಭದ್ರತೆ

|
Google Oneindia Kannada News

ಬೆಂಗಳೂರು, ಜುಲೈ 10: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಬೆಂಗಳೂರು ನಿವಾಸಕ್ಕೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ.

Recommended Video

Sumalatha Vs HD Kumarswamy | ಅಂಬರೀಶ್ ಸ್ಮಾರಕಕ್ಕೆ ಅನುದಾನ ಕೊಟ್ಟಿದ್ದು ಯಾರು? | Oneindia Kannada

40ಕ್ಕೂ ಹೆಚ್ಚು ಪೊಲೀಸರು, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಿರ್ದೇಶಕ ರಾಕ್‌ಲೈನ್ ವೆಂಕಟೇಶ್ ಅವರ ಮನೆ ಬಳಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ಸುಮಲತಾ ಅವರ ನಿವಾಸಕ್ಕೆ ಭದ್ರತೆ ಕಲ್ಪಿಸಿದ್ದಾರೆ.

ಕೈ ಕಟ್ಟಿ ನಿಂತ ಫೋಟೋ ವೈರಲ್; ಎಚ್‌ಡಿಕೆ ಹೇಳಿದ್ದೇನು?ಕೈ ಕಟ್ಟಿ ನಿಂತ ಫೋಟೋ ವೈರಲ್; ಎಚ್‌ಡಿಕೆ ಹೇಳಿದ್ದೇನು?

ಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ನಡುವೆ ಹಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ.

Police Security Increased To Sumalathas Bengaluru House

ಸುಮಲತಾ ವಿರುದ್ಧ ಮಾತನಾಡಿದ ಕುಮಾರಸ್ವಾಮಿ ಮೇಲೆ ಗಂಭೀರ ಆರೋಪ ಮಾಡಿದ್ದ ರಾಕ್​ಲೈನ್​ ವೆಂಕಟೇಶ್, ತಮ್ಮ ಮತ್ತು ಸುಮಲತಾ ಅಂಬರೀಶ್ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದು ಹೇಳಿದ್ದರು.

ಹೆಚ್​ ಡಿ ಕುಮಾರಸ್ವಾಮಿ ಅವರು ಆಡಿಯೋ ವಿಡಿಯೋ ಬಾಂಬ್ ಎಂದು ಬೆದರಿಕೆ ಹಾಕುವುದು ಹೊಸದಲ್ಲ ಎಂದಿದ್ದ ರಾಕ್‌ಲೈನ್ ವೆಂಕಟೇಶ್, ಚುನಾವಣೆ ವೇಳೆ ಚುನಾವಣಾ ಪ್ರಚಾರಕ್ಕಾಗಿ ನಾವೆಲ್ಲರೂ ಹೋಟೆಲ್‌ನಲ್ಲಿದ್ದೆವು.

ಆಗ ನಾನು ಮತ್ತು ಸುಮಲತಾ ಹೋಟೆಲ್‌ಗೆ ತೆರಳುತ್ತಿದ್ದ ದೃಶ್ಯಗಳನ್ನು ಹೋಟೆಲ್‌ನ ಸಿಸಿ ಕ್ಯಾಮರಾದಿಂದ ಪಡೆದು ಆ ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು.ಅದಕ್ಕೆ ಅಶ್ಲೀಲ ಚಿತ್ರ ಸೇರಿಸಿ ದುರ್ಬಳಕೆಗೆ ಪ್ಲ್ಯಾನ್ ಮಾಡಿದ್ರು. ಅವರ ಚಾನಲ್‌ನಲ್ಲಿದ್ದ ಅಂಬರೀಶ್ ಅಭಿಮಾನಿಯೇ ಇದನ್ನು ನನಗೆ ಹೇಳಿದ್ದರು ಎಂದು ರಾಕ್‌ಲೈನ್ ವೆಂಕಟೇಶ್ ಆರೋಪಿಸಿದ್ದರು.

ಈ ವಿಚಾರದಿಂದ ಕುಪಿತರಾದ ಕುಮಾರಸ್ವಾಮಿ ಅಭಿಮಾನಿಗಳು ರಾಕ್​ಲೈನ್ ನಿವಾಸಕ್ಕೆ ಮುತ್ತಿಗೆ ಹಾಕಿ, ಕ್ಷಮೆ ಕೇಳುವಂತೆ ಬಿಗಿಪಟ್ಟು ಹಿಡಿದಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಮೊದಲೇ ಮುನ್ಸೂಚನೆ ಇದ್ದ ಕಾರಣ ರಾಕ್​ಲೈನ್ ವೆಂಕಟೇಶ್ ನಿವಾಸಕ್ಕೆ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು.

ರಾಕ್​ಲೈನ್ ನಿವಾಸದ ಎದುರು ಒಂದು ಕೆಎಸ್​ಆರ್​ಪಿ ತುಕಡಿ ನಿಯೋಜಿಸಿ, ರಾಕ್​ಲೈನ್ ನಿವಾಸಕ್ಕೆ ತೆರಳುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿದ್ದರು.

English summary
Police Security Increased To Sumalatha's Bengaluru House After JDS Workers Attacked Rockline Venkatesh House.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X