• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾದಕ ದ್ರವ್ಯ ಜಾಲ ಪತ್ತೆಗೆ ಸಾರ್ವಜನಿಕರ ನೆರವು ಕೋರಿದ ಪೊಲೀಸ್

|

ಬೆಂಗಳೂರು, ಜನವರಿ 23: ಬೆಂಗಳೂರಲ್ಲಿ ಮಾದಕದ್ರವ್ಯ ಮಾರಾಟ, ಸೇವನೆ ಹೆಚ್ಚಾಗುತ್ತಿದೆ, ಯುಜನತೆ ಇದಕ್ಕೆ ದಾಸರಾಗುತ್ತಾ ಸಮಾಜದ ಸ್ವಾಸ್ತ್ಯ ಹಾಳಾಗುತ್ತಿರುವ ಕಾರ ಇಂತಹ ಜಾಲವನ್ನು ಪತ್ತೆಹಚ್ಚಲು ಬೆಂಗಳೂರು ಸಿಟಿ ಪೊಲೀಸರು ಸಹಾಯವಾಣಿಯನ್ನು ಆರಂಭಿಸಿದ್ದಾರೆ.

ಮಾದಕದ್ರವ್ಯ ಜಾಲ ಪತ್ತೆಯಾದಲ್ಲಿ 1908ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಸಹಕರಿಸಿ ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದೆ. ಅದರಲ್ಲಿ ಮುಖ್ಯವಾಗಿ ನಗರ ಪ್ರದೇಶದ ಯುವಕರು ಇಂತಹ ದುಶ್ಚಟಗಳಿಗೆ ಹೆಚ್ಚಾಗಿ ಬಲಿಯಾಗುತ್ತಿರುವುದು ಕಂಡುಬರುತ್ತದೆ.

ಡ್ರಗ್ಸ್ ಗೆ ನೋ, ಬದುಕಿಗೆ ಯೆಸ್ ಹೇಳಿ ಅಂತಾರೆ ಬೆಂಗಳೂರು ಪೊಲೀಸರು

ಮಾದಕ ದ್ರವ್ಯ ಬಳಕೆ ಅಪಾಯಕಾರಿಯಾಗಿದ್ದು, ಇದು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗೆ ದೂಡುವ ಜೊತೆಗೆ ಮನುಷ್ಯರನ್ನು ಅಧೀರರನ್ನಾಗಿಸುತ್ತದೆ. ಮಾದಕ ವಸ್ತುಗಳ ಬಳಕೆ ಸಂಪೂರ್ಣ ನಿರ್ಮೂಲನೆ ಮಾಡಿ, ಸಮಾಜದಲ್ಲಿ ಒಳ್ಳೆಯ ವಾತಾವರಣ ಸೃಷಿಸಬೇಕಾಗಿರುವುದು ಎಲ್ಲರ ಕರ್ತವ್ಯ.

ಇಂದಿನ ಕೆಲ ಯುವಜನತೆ, ಮಕ್ಕಳು ಮಾದಕ ವ್ಯಸನಿಗಳಾಗುತ್ತಿದ್ದು, ತಮ್ಮ ಸುಂದರ ಜೀವನವನ್ನೇ ಬಲಿಕೊಡುತ್ತಿದ್ದಾರೆ. ಇದರಿಂದ ಅವರ ಇಡೀ ಕುಟುಂಬ ಕೂಡ ನೋವಿನಲ್ಲಿ ನರಳುವಂತೆ ಮಾಡುತ್ತಿದ್ದಾರೆ. ಈ ಬಗ್ಗೆ ಬೃಹತ್ಡ್ ಮಟ್ಟದಲ್ಲಿ ಜಾಗೃತಿ ಮೂಡಿಸುವ ಆಂದೋಲನವಾಗಬೇಕು. ಯಾರೂ ಕೂಡ ಮಾದಕ ವ್ಯಸನಿಗಳಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Police seeks public help to identify drug mafia,Call 1908 to share any information on drug peddling. The informant’s identities will be kept confidential.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more