ಮನೆಗಳ್ಳರ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್
ಬೆಂಗಳೂರು, ಜ. 27: ಮಂಗಳವಾರ ಬೆಳ್ಳಂಬೆಳಗ್ಗೆ ವಿದ್ಯಾರಣ್ಯಪುರದಲ್ಲಿ ಕಳ್ಳರ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮನೆ ಕಳ್ಳತನಕ್ಕೆ ಯತ್ನಿಸಿದ ಇಬ್ಬರ ಮೇಲೆ ವಿದ್ಯಾರಣ್ಯಪುರ ಠಾಣೆ ಇನ್ಸ್ ಪೆಕ್ಟರ್ ಪುನೀತ್ ಗುಂಡು ಹಾರಿಸಿದ್ದಾರೆ.
ಕಳ್ಳರಾದ ಮಿಥುನ್ ಮತ್ತು ಅಖಿಲ್ ಕಾಲಿಗೆ ಗುಂಡು ತಗುಲಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಪೇದೆ ನಾಗಭೂಷಣ್ ಸಹ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.[ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ನಕಲಿ ಸಿಐಎ ಎಜೆಂಟ್]

ಆಂಧ್ರ ಪ್ರದೇಶ ಮೂಲದ ನಿವೃತ್ತ ಇಂಜಿನಿಯರ್ ಒಬ್ಬರಿಗೆ ಸೇರಿದ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಖದೀಮರು ಹಿಂಬಾಗಿಲಿನಿಂದ ಒಳನುಗ್ಗಿ ಕಳ್ಳತನ ಮಾಡಲು ಯತ್ನಿಸಿದ್ದಾರೆ. ಆದರೆ ಈ ವೇಳೆ ಮಾಹಿತಿ ಪಡೆದ ಪೊಲೀಸರು ಕಳ್ಳರನ್ನು ಹಿಡಿಯಲು ಯತ್ನಿಸಿದ್ದಾರೆ. ಕಳ್ಳರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು ಕಳ್ಳನೊಬ್ಬ ರಾಡ್ ನಿಂದ ಹಲ್ಲೆ ಮಾಡಿದ್ದಾನೆ.[ಮಂಗಳೂರು : ಗೃಹಿಣಿ ಕೊಂದಿದ್ದು ಅಕ್ಕ-ಪಕ್ಕದವರು]
ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಇನ್ಸ್ ಪೆಕ್ಟರ್ ಪುನೀತ್ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಆರೋಪಿಗಳು ಪಶ್ಚಿಮ ಬಂಗಾಳ ಮೂಲದವರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶಂಕರ್ ಭೇಟಿ ನೀಡಿದ್ದು ಆರೋಪಿಗಳ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಲಾಗುತ್ತಿದೆ.












Click it and Unblock the Notifications