ಪೊಲೀಸರಿಂದ ಜಪ್ತಿಯಾದ ವಾಹನ ತೆರವಾಗದಿದ್ದರೆ ಪಾಲಿಕೆ ವಶ

ಬೆಂಗಳೂರು, ಮಾರ್ಚ್ 08: ನಗರದ ಪೊಲೀಸ್ ಠಾಣೆಯಗಳ ಸುತ್ತಮುತ್ತಲ ರಸ್ತೆಗಳಲ್ಲಿ ನಿಲ್ಲಿಸಿರುವ ವಾಹನಗಳನ್ನು ಇನ್ನು 15 ದಿನಗಳಲ್ಲಿ ಪೊಲೀಸರು ತೆರವುಗೊಳಿಸಬೇಕು. ಇಲ್ಲದಿದ್ದರೆ ಆ ವಾಹನಗಳನ್ನು ಪಾಲಿಕೆ ವಶಕ್ಕೆ ಪಡೆಯುವ ಬಗ್ಗೆ ಬಿಬಿಎಂಪಿ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮೇಯರ್ ಸಂಪತ್ ರಾಜ್ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, ವಾಯು ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ನಗರದಲ್ಲಿ 20 ವರ್ಷಗಳಿಗೂ ಹಳೆಯ ವಾಹನಗಳನ್ನು ಬ್ಯಾನ್ ಮಾಡುವ ಬಗ್ಗೆ ನಗರ ಪೊಲೀಸ್ ಆಯುಕ್ತರು ಮತ್ತು ಸಾರಿಗೆ ಆಯುಕ್ತರೊಂದಿಗೆ ಸಭೆ ನಡೆಸುವುದಾಗಿ ಹೇಳಿದ್ದಾರೆ.

ಕೌನ್ಸಿಲ್ ಸಭೆಯಲ್ಲಿ ವಿರೋಧ ಪಕ್ಷ ನಾಯಕ ಪದ್ಮನಾಭರೆಡ್ಡಿ ಮಾತನಾಡಿ, ಸಂಚಾರಿ ಪೊಲೀಸರು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರು ಜಪ್ತಿ ಮಾಡುವ ವಾಹನಗಳನ್ನು ಪೊಲೀಸ್ ಠಾಣೆಗಳ ಸುತ್ತಮುತ್ತಲ ರಸ್ತೆ ಬದಿ ಹಾಗೂ ಖಾಲಿ ಜಾಗಗಳಲ್ಲಿ ನಿಲ್ಲಿಸುತ್ತಿದ್ದಾರೆ.

Police should dispose seized vehicle in 15 days: BBMP warns

ಮಲ್ಲೇಶ್ವರ ಕೆಸಿ ಜನರಲ್ ಆಸ್ಪತ್ರೆ ಬಳಿಯ ಕೆಳ ಸೇತುವೆ ಸೇರಿದಂತೆ ಹಲವು ಠಾಣೆಗಳ ಬಳಿ ಈ ರೀತಿ ಮಾಡಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಜಪ್ತಿ ವಾಹನಗಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸುವಂತೆ ಮನವಿ ಮಾಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ಮೇಯರ್, ಜಪ್ತಿ ಮಾಡಿದ ವಾಹನಗಳನ್ನು ಪೊಲೀಸರು ರಸ್ತೆ ಬದಿಯಲ್ಲೇ ತಿಂಗಳು, ವರ್ಷಗಟ್ಟಲೆ ನಿಲ್ಲಿಸುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಅಲ್ಲದೆ, ಪೌರಕಾರ್ಮಿಕರಿಂದ ಬೀದಿ ಸ್ವಚ್ಛತಾ ಕಾರ್ಯಕ್ಕೂ ಸಮಸ್ಯೆಯಾಗುತ್ತಿದೆ. ಈಗಾಗಲೇ ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಿದ್ದರೂ, ಹಲವು ಠಾಣೆಗಳಲ್ಲಿ ಜಪ್ತಿ ವಾಹನ ತೆರವಿಗೆ ಕ್ರಮ ಕೈಗೊಂಡಿಲ್ಲ. ಮುಂದಿನ 15 ದಿನಗಳಲ್ಲಿ ಜಪ್ತಿ ಮಾಡಿರುವ ವಾಹನಗಳನ್ನು ಪೊಲೀಸರು ರಸ್ತೆಗಳಿಂದ ತೆರವುಗೊಳಿಸದೇ ಹೋದರೆ ಆ ವಾಹನಗಳನ್ನು ಪಾಲಿಕೆ ವಶಕ್ಕೆ ಪಡೆದುಕೊಳ್ಳಲಾಗುತ್ತದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+