ಕಾರ್ಮಿಕರ ಮಕ್ಕಳಿಗೆ ಪಾಠ ಮಾಡುವ ಬೆಂಗಳೂರು ಪೊಲೀಸ್!

ಬೆಂಗಳೂರು, ಸೆಪ್ಟೆಂಬರ್ 04: ಬೆಂಗಳೂರು ನಗರದ ಪೊಲೀಸ್ ಇನ್ಸ್‌ಪೆಕ್ಟರ್ ಬಡ ಮಕ್ಕಳಿಗೆ ಪಾಠ ಹೇಳಿ ಕೊಡುವ ಮೂಲಕ ಮಾದರಿಯಾಗಿದ್ದಾರೆ. ಮೂರರಿಂದ 7ನೇ ತರಗತಿಯ ಮಕ್ಕಳಿಗೆ ಪಾಠ ಕೇಳಿಕೊಡುತ್ತಿದ್ದು, ಪೊಲೀಸರ ಕಾರ್ಯವನ್ನು ಜನರು ಶ್ಲಾಘಿಸಿದ್ದಾರೆ.

Recommended Video

      ದಾರಿ ತೋರಿದ ಗುರುವಿಗೆ ನಮನ | Happy teachers day | Oneindia Kannada

      ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶಾಂತಪ್ಪ ಜಡಮ್ಮನವರ್ ಬಡ ಮಕ್ಕಳಿಗೆ ಪಾಠ ಹೇಳಿ ಕೊಡುತ್ತಾರೆ. ಕರ್ತವ್ಯಕ್ಕೆ ಹೋಗುವ ಮುನ್ನ 3 ರಿಂದ ಏಳನೇ ತರಗತಿ ಮಕ್ಕಳಿಗೆ ಗಣಿತ ಹಾಗೂ ಸಾಮಾನ್ಯ ಜ್ಞಾನದ ವಿಷಯಗಳನ್ನು ಹೇಳಿ ಕೊಡುತ್ತಿದ್ದಾರೆ.

      ಬೆಂಗಳೂರಿನ ನಾಗರಬಾವಿ ವ್ಯಾಪ್ತಿಯ ವಿನಾಯಕ ನಗರದ 9ನೇ ಬ್ಲಾಕ್ ನಲ್ಲಿರುವ ಕೊಳಗೇರಿ ಪ್ರದೇಶದಲ್ಲಿ ಶಾಂತಪ್ಪ ಜಡಮ್ಮನವರ್ ಮಕ್ಕಳಿಗೆ ಪಾಠ ಹೇಳಿಕೊಡುತ್ತಾರೆ. ಈ ಪ್ರದೇಶದಲ್ಲಿ ಕಟ್ಟಡ ಕಾರ್ಮಿಕರ ಕುಟುಂಬಗಳು ಹೆಚ್ಚಾಗಿವೆ.

      Police Sub Inspector Teaching For Children In Bengaluru

      ಸುಮಾರು ಹದಿನೈದು ದಿನಗಳಿಂದ ಶಾಂತಪ್ಪ ಜಡಮ್ಮನವರ್ ಪಾಠ ಹೇಳಿಕೊಡುವ ಕಾಯಕದಲ್ಲಿ ತೊಡಗಿದ್ದಾರೆ. "ಪ್ರತಿ ದಿನ ಠಾಣೆಗೆ ಕರ್ತವ್ಯಕ್ಕೆ ಹೋಗುವ ಮುನ್ನ ಈ ಕೆಲಸ ಮುಗಿಸಿ ಹೋಗುತ್ತೇನೆ" ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹೇಳಿದ್ದಾರೆ.

      "ನಾನು ಒಬ್ಬ ಬಳ್ಳಾರಿಯ ವಲಸೆ ಕಾರ್ಮಿಕರ ಮಗ. ನನಗೆ ಈ‌ ಕಷ್ಟ ಗೊತ್ತಿದೆ. ಅದಕ್ಕಾಗಿ ಈ ಕಾರ್ಯದಲ್ಲಿ ತೊಡಗಿದ್ದೇನೆ" ಎಂದು ಶಾಂತಪ್ಪ ಜಡಮ್ಮನವರ್ ತಿಳಿಸಿದ್ದಾರೆ.

      ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಾಂತಪ್ಪ ಜಡಮ್ಮನವರ್ ಪಾಠ ಮಾಡುವ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಅವರು ಫೇಸ್‌ ಬುಕ್‌ನಲ್ಲಿಯೂ ಪೋಸ್ಟ್ ಹಾಕಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+