ಹೊಸ ವರ್ಷಾಚರಣೆ : ಎಂಜಿ ರಸ್ತೆಯಲ್ಲಿ ವಿಶೇಷ ಪೊಲೀಸ್ ಗಸ್ತು
ಬೆಂಗಳೂರು, ಡಿ. 23: ಎಂ.ಜಿ. ಬೆಂಗಳೂರು ಕೇಂದ್ರ ವಿಭಾಗದ ವಿವಿಧ ರಸ್ತೆಗಳು ನಗರದಲ್ಲಿಯೇ ಅತ್ಯಂತ ಪ್ರತಿಷ್ಠಿತ ಪ್ರದೇಶಗಳು. ಹಣವಂತರೇ ಹೆಚ್ಚಾಗಿ ಕಂಡುಬರುವ ಈ ಪ್ರದೇಶದಲ್ಲಿ ಮಧ್ಯರಾತ್ರಿಯವರೆಗೂ ಮಹಿಳೆಯರು ಸಂಚರಿಸುವುದು ಕಂಡುಬರುತ್ತದೆ. ಆದ್ದರಿಂದ ಈ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷೆಗಾಗಿ ಪೊಲೀಸರು ಸಂಜೆ 7ರಿಂದ ರಾತ್ರಿ 11 ಗಂಟೆಯವರೆಗೆ ವಿಶೇಷ ಗಸ್ತು ತಿರುಗಲು ನಿರ್ಧರಿಸಿದ್ದಾರೆ.

ಈ ಕುರಿತು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ ಪೊಲೀಸರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಎಂ.ಜಿ. ರಸ್ತೆ, ಕಾಮರಾಜ ರಸ್ತೆ, ಬ್ರಿಗೇಡ್ ರಸ್ತೆ ಮುಂತಾದ ಪ್ರದೇಶಗಳಲ್ಲಿ ವಿಶೇಷ ಗಸ್ತು ಜಾರಿಗೊಳಿಸಲಾಗಿದೆ.
ಹೊಸ ವರ್ಷಾಚರಣೆ ನಿಮಿತ್ತ ಈ ಪ್ರದೇಶಗಳಲ್ಲಿ ಹೆಚ್ಚಿನ ಸಂಭ್ರಮಾಚರಣೆಗಳು ನಡೆಯುತ್ತವೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಿಶೇಷ ಗಸ್ತು ಕೈಗೊಳ್ಳಲಾಗಿದೆ ಎಂದು ಸಂದೀಪ ಪಾಟೀಲ ತಿಳಿಸಿದ್ದಾರೆ.












Click it and Unblock the Notifications