• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಲ್ಲ ಪಕ್ಷಗಳಲ್ಲಿ ಭುಗಿಲೆದ್ದ ಬಿಬಿಎಂಪಿ ಟಿಕೆಟ್ ಗೊಂದಲ

|

ಬೆಂಗಳೂರು, ಆಗಸ್ಟ್.8: ಎಲ್ಲ ರಾಜಕೀಯ ಪಕ್ಷಗಳಲ್ಲಿ ಬಿಬಿಎಂಪಿ ಚುನಾವಣೆ ಟಿಕೆಟ್ ಹಂಚಿಕೆ ಗೊಂದಲ ಉಂಟಾಗಿದೆ. ಸ್ಥಳೀಯ ಮಟ್ಟದಲ್ಲಿ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗದೇ ಭಿನ್ನಮತ ನಿರ್ಮಾಣವಾಗಿದೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಬಿಬಿಎಂಪಿ ಚುನಾವಣೆಯನ್ನು ಗಂಭಿರವಾಗಿ ತೆಗೆದುಕೊಂಡು ಪ್ರಭಾವ ಬಳಸಿ ಟಿಕೆಟ್ ನೀಡಿ ಪಕ್ಷ ಸೋತರೇ ಸೋಲಿಗೆ ಟಿಕೆಟ್ ನೀಡಿದವರೆ ಕಾರಣರಾಗುತ್ತಾರೆ. ಪಕ್ಷ ಗೆಲ್ಲುವುದು ಮುಖ್ಯವೇ ಹೊರತು ನಮ್ಮ ಪ್ರತಿಷ್ಠ ಅಲ್ಲ ಖಡಕ್ ಎಚ್ಚರಿಕೆ ನೀಡಿದ್ದಾರೆ.[ಬಿಜೆಪಿ ಪಟ್ಟಿ ನೋಡಿ]

ಕಾಂಗ್ರೆಸ್ ಒಂದು ವಾರದಿಂದ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿದೆ. 198 ಸ್ಥಾನಗಳಿಗೆ 850ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಅರ್ಜಿ ಬಂದಿದ್ದು, ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ಅಂತಿಮ ಪಟ್ಟಿ ಸಿದ್ಧಮಾಡುವ ಜವಾಬ್ದಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮೇಲೆ ಬಿದ್ದಿದೆ.

ಟಿಕೆಟ್ ಗೊಂದಲ ಪ್ರತಿಭಟನೆಗಳಿಗೂ ಕಾರಣವಾಗಿದೆ. ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಕಾರ್ಪೊರೇಟರ್‌ಗಳಿಗೆ ಟಿಕೆಟ್ ನೀಡಬಾರದೆಂದು ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ನಿವಾಸದ ಎದರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಈಗಾಗಲೇ 92 ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿರುವ ಬಿಜೆಪಿಯಲ್ಲಿ ಭಿನ್ನಮತ ಇದೀಗ ಭಿನ್ನಮತ ಸ್ಫೋಟಗೊಂಡಿದೆ. ಕೆಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು ಆರ್ಎಸ್ ಎಸ್ ನಾಯಕರು ಮಧ್ಯ ಪ್ರವೇಶ ಮಾಡಿದ್ದಾರೆ.

ಅತ್ತ ಆಮ್ ಆದ್ಮಿ ಪಾರ್ಟಿ ಯ ಬೆಂಬಲ ಪಡೆಯಲು ಜೆಡಿಎಸ್ ಚಿಂತನೆ ನಡೆಸುತ್ತಿದೆ. ಆದರೆ ಇಲ್ಲಿವರೆಗೆ ಯಾವ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮ ಮಾಡಿಲ್ಲ. ಬಿ ಫಾರ್ಮ್ ವಿತರಣೆಯಾಗಿಲ್ಲ. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 10 ಕೊನೆಯ ದಿನವಾಗಿದ್ದು, ನಾಳೆ ಎಲ್ಲ ಪಕ್ಷದವರು ಬಿ ಫಾರಂ ಕೊಡಲೇಬೇಕಾಗಿದೆ. ಹಾಗಾಗಿ ಭಾನುವಾರದ ರಾಜಕೀಯ ಬೆಳವಣಿಗೆಗಳು ಎಲ್ಲ ಪಕ್ಷಗಳ ಭವಿಷ್ಯ ನಿರ್ಧಾರ ಮಾಡಲಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Public campaigning by political parties and candidates for elections to the Bruhat Bangalore Mahanagara Palike council, scheduled on August 22, is set to pick up pace in the days ahead, with the leaders of all major political parties gearing up to garner a majority of the 198 seats of which half has been reserved for women for the first time. All Political partis facing tough challenge in BBMP TicketDistribution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more