• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರಕಾಶ್ ರಾಜ್ ಸ್ಪರ್ಧೆ : ಬೆಂಗಳೂರು ಸೆಂಟ್ರಲ್‌ನ ರಾಜಕೀಯ ಚಿತ್ರಣ

|

ಬೆಂಗಳೂರು, ಜನವರಿ 06 : ನಟ ಪ್ರಕಾಶ್ ರಾಜ್ 2019ರ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಈಗ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಸೆಂಟ್ರಲ್ ಬಿಜೆಪಿ ವಶದಲ್ಲಿರುವ ಕ್ಷೇತ್ರ. 2009, 2014ರ ಚುನಾವಣೆಯಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರಕಾಶ್ ರಾಜ್ ಅವರು ಈ ಬಾರಿ ಕಣಕ್ಕಿಳಿದರೆ ಕ್ಷೇತ್ರ ದೇಶದ ಗಮನ ಸೆಳೆಯಲಿದೆ.

ಲೋಕಸಭಾ ಚುನಾವಣೆಯಲ್ಲಿ ಪ್ರಕಾಶ್ ರೈ ಕಣಕ್ಕೆ, ಕ್ಷೇತ್ರ ಯಾವುದು?

ಸುಮಾರು 19 ಲಕ್ಷ ಮತದಾರರು, 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಲೋಕಸಭಾ ಕ್ಷೇತ್ರ ಬೆಂಗಳೂರು ಸೆಂಟ್ರಲ್. 5 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ರಾಜಾಜಿನಗರ, ಸಿ.ವಿ.ರಾಮನ್ ನಗರ, ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ.

ಲೋಕಸಭಾ ಚುನಾವಣೆಗೆ ಸ್ಪರ್ಧೆ: ಕ್ಷೇತ್ರ ಫೈನಲ್ ಮಾಡಿದ ಪ್ರಕಾಶ್ ರೈ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲಿವೆ. ಆದ್ದರಿಂದ, ಬೆಂಗಳೂರು ಸೆಂಟ್ರಲ್ ಕ್ಷೇತ್ರ ಯಾರಿಗೆ ಸಿಗಲಿದೆ? ಎಂಬುದನ್ನು ಕಾದು ನೋಡಬೇಕು. ಕಾಂಗ್ರೆಸ್‌ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಲಿದೆಯೇ?......

2009ರಲ್ಲಿ ರಚನೆಯಾದ ಕ್ಷೇತ್ರ

2009ರಲ್ಲಿ ರಚನೆಯಾದ ಕ್ಷೇತ್ರ

ರಾಜಾಜಿನಗರ, ಶಿವಾಜಿನಗರ, ಚಾಮರಾಜಪೇಟೆ, ಶಾಂತಿ ನಗರ, ಮಹದೇವಪುರ, ಗಾಂಧಿ ನಗರ, ಸರ್ವಜ್ಞ ನಗರ, ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ 2009ರಲ್ಲಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ ರಚನೆ ಮಾಡಲಾಯಿತು.

2009 ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕ್ಷೇತ್ರದಲ್ಲಿ ಜಯಗಳಿಸಿದೆ. ಈ ಬಾರಿ ನಟ ಪ್ರಕಾಶ್ ರಾಜ್ ಅವರು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿರುವುದರಿಂದ ಕ್ಷೇತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.

ಪಿ.ಸಿ.ಮೋಹನ್ ಸಂಸದರು

ಪಿ.ಸಿ.ಮೋಹನ್ ಸಂಸದರು

ಬೆಂಗಳೂರು ಸೆಂಟ್ರಲ್ ಕ್ಷೇತ್ರ ಬಿಜೆಪಿಯ ವಶದಲ್ಲಿದೆ. 2009ರ ಚುನಾವಣೆಯಲ್ಲಿ ಪಿ.ಸಿ.ಮೋಹನ್ ಅವರು 340162 ಮತಗಳನ್ನು ಪಡೆದು ಜಯಗಳಿಸಿದ್ದರು. 2014ರ ಚುನಾವಣೆಯಲ್ಲಿ 557130 ಮತಗಳನ್ನು ಪಡೆದು 2ನೇ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.

ಕಳೆದ ಚುನಾವಣೆ ಗೆಲುವಿನ ಅಂತರ 1,37,500 ಮತಗಳು. ಈ ಬಾರಿಯೂ ಬಿಜೆಪಿಯಿಂದ ಅವರು ಅಭ್ಯರ್ಥಿ ಆಗುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್‌ ಬೆಂಬಲ ನೀಡಲಿದೆಯೇ?

ಕಾಂಗ್ರೆಸ್‌ ಬೆಂಬಲ ನೀಡಲಿದೆಯೇ?

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಕಾಶ್ ರಾಜ್‌ಗೆ ಬೆಂಬಲ ನೀಡಲಿದೆಯೇ? ಕಾದು ನೋಡಬೇಕು. 8 ವಿಧಾನಸಭಾ ಕ್ಷೇತ್ರಗಳ ಪೈಕಿ 5ರಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ.

2009ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಎಚ್.ಟಿ.ಸಾಂಗ್ಲಿಯಾನ ಅಭ್ಯರ್ಥಿಯಾಗಿದ್ದರು. 304944 ಮತಗಳನ್ನು ಪಡೆದಿದ್ದರು. 2014ರ ಚುನಾವಣೆಯಲ್ಲಿ ರಿಜ್ವಾನ್ ಅರ್ಷದ್ ಅಭ್ಯರ್ಥಿಯಾಗಿದ್ದರು 419630 ಮತಗಳನ್ನು ಪಡೆದಿದ್ದರು.

ಸಾಂಗ್ಲಿಯಾನ ಪರ ಪ್ರಚಾರ

ಸಾಂಗ್ಲಿಯಾನ ಪರ ಪ್ರಚಾರ

ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮಾಡಿಕೊಂಡು ಈ ಬಾರಿಯ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿವೆ. ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ.

ನಿವೃತ್ತ ಐಪಿಎಸ್ ಅಧಿಕಾರಿ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಟಿ.ಸಾಂಗ್ಲಿಯಾನ ಅವರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಸಾಂಗ್ಲಿಯಾನ ಅವರಿಗೆ ಟಿಕೆಟ್ ನೀಡಬೇಕು ಎಂದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್‌ ಸೇರಿ 440017 ಮತಗಳನ್ನು ಪಡೆದಿದ್ದವು.

ಜೆಡಿಎಸ್ ಬಲವೇನು?

ಜೆಡಿಎಸ್ ಬಲವೇನು?

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಜೆಡಿಎಸ್‌ನ ಬಲವೇನು? ಎಂಬುದನ್ನು ನೋಡಬೇಕು. 2009ರ ಚುನಾವಣೆಯಲ್ಲಿ ಜಮೀರ್ ಅಹಮದ್ ಖಾನ್ ಸ್ಪರ್ಧಿಸಿದ್ದರು 162552 ಮತಗಳನ್ನು ಪಡೆದಿದ್ದರು. 2014ರ ಚುನಾವಣೆಯಲ್ಲಿ ನಂದಿನಿ ಆಳ್ವಾ ಅವರು ಕಣಕ್ಕಿಳಿದಿದ್ದರು, 20,387 ಮತಗಳನ್ನು ಪಡೆದಿದ್ದರು.

ಆಮ್‌ ಆದ್ಮಿ ಪಕ್ಷದಿಂದ ಸ್ಪರ್ಧೆ?

ಆಮ್‌ ಆದ್ಮಿ ಪಕ್ಷದಿಂದ ಸ್ಪರ್ಧೆ?

2014ರ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದಿಂದ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಇನ್ಫೋಸಿಸ್ ಮಾಜಿ ಮುಖ್ಯ ಹಣಕಾಸು ಅಧಿಕಾರಿ ವಿ.ಬಾಲಕೃಷ್ಣನ್ ಸ್ಪರ್ಧೆ ಮಾಡಿದ್ದರು. 39,869 ಮತಗಳನ್ನು ಮತ ಪಡೆದಿದ್ದರು. ಈ ಬಾರಿ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆಯೇ?.

ಬೆಂಗಳೂರು ಸೆಂಟ್ರಲ್‌ನಿಂದ ಕಣಕ್ಕೆ

ಪ್ರಕಾಶ್ ರಾಜ್ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಪ್ರಕಾಶ್ ರಾಜ್‌ ನಡೆ?

ಪ್ರಕಾಶ್ ರಾಜ್‌ ನಡೆ?

ಪ್ರಕಾಶ್ ರಾಜ್ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದೇನೆ ಎಂದು ಮಾತ್ರ ಟ್ವೀಟ್ ಮಾಡಿದ್ದಾರೆ. ಉಳಿದ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದ್ದಾರೆ. ಹಾಗಾದರೆ ಯಾವ ಅಂಶಗಳನ್ನು ಮುಂದಿಟ್ಟುಕೊಂಡು ಅವರು ಮತ ಕೇಳಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಬಿಜೆಪಿ ಅವರನ್ನು ಸೋಲಿಸಲು ತಂತ್ರ ರೂಪಿಸಲಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Actor Prakash RaJ announced that he will contest for 2019 Lok Sabha election from Bangalore Central constituency. BJP leader P.C.Mohan two time MP of the constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more