Bank Janardhan: ಹಿರಿಯ ಕಲಾವಿದ 'ಬ್ಯಾಂಕ್ ಜನಾರ್ಧನ್' ನಿಧನಕ್ಕೆ ಗಣ್ಯರ ಸಂತಾಪ, ಕಂಬನಿ..
ಬೆಂಗಳೂರು, ಏಪ್ರಿಲ್ 14: ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ಎಲ್ಲರನ್ನು ನಗಿಸುತ್ತಾ ಬಂದ ಹಿರಿಯ ಕಲಾವಿದ, ಹಾಸ್ಯ ನಟ, ಪೋಷಕ ನಟ ಬ್ಯಾಂಕ್ ಜನಾರ್ಧನ್ (Bank Janardhan) ಅವರು ವಯೋಸಹಜ ಕಾಯಿಲೆಯಿಂದಾಗಿ 77ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನಿಧನರಾದರು. ಅವರ ಅಗಲಿಕೆಗೆ ಕುಟುಂಬ ಮಾತ್ರವಲ್ಲದೇ, ಇಡೀ ಚಿತ್ರರಂಗ, ಆಪ್ತರು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಕಂಪನಿ ಮಿಡಿದಿದ್ದಾರೆ. ''ಕನ್ನಡ ಚಿತ್ರರಂಗದ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ ಅವರು ನಿಧನ ಹೊಂದಿರುವ ಸುದ್ದಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಾಸ್ಯ ನಟರಾಗಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಂತಾಗಿದೆ.

ಕನ್ನಡ ಚಿತ್ರರಂಗದ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ ಅವರು ನಿಧನ ಹೊಂದಿರುವ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ದುಃಖವಾಗಿದೆ.
— Basavaraj S Bommai (@BSBommai) April 14, 2025
ಹಾಸ್ಯ ನಟರಾಗಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಂತಾಗಿದೆ.
ಅವರ ಅಗಲಿಕೆಯ ದುಃಖವನ್ನು ಅವರ… pic.twitter.com/4cmwhWhKQv
ಅವರ ಅಗಲಿಕೆಯ ದುಃಖವನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಮೃತರ ಆತ್ಮಕಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ನಿಧನಕ್ಕೆ ಕಾರಣವೇನು?
ಕಳೆದ ಕೆಲವು ತಿಂಗಳುಗಳಿಂದ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿತ್ತು. ಆದಾದ ಬಳಿಕ ಅವರು ನಿರಂತರವಾಗಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಅಲ್ಲದೇ ಅವರು ಆರ್ಥಿಕವಾಗಿ ಕುಗ್ಗಿದ್ದರು ಎಂದು ಮಾಹಿತಿ ಇದೆ. ತಿವ್ರ ಅನರೋಗ್ಯ ಉಂಟಾಗಿ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.
ಕೇಂದ್ರ ಸಚಿವರ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಟರು, ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅನೇಕ ವೈವಿದ್ಯಮಯ ಪಾತ್ರಗಳಲ್ಲಿ ನಟಿಸಿದ್ಧ ಶ್ರೀ ಬ್ಯಾಂಕ್ ಜನಾರ್ಧನ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಚಿತ್ರರಂಗದಲ್ಲಿ ತಮ್ಮ ಅಭಿನಯದಿಂದ ಪ್ರೇಕ್ಷಕರಲ್ಲಿ ಕಚಗುಳಿಯ ಕಡಲನ್ನೇ ಉಕ್ಕಿಸುತ್ತಿದ್ದ ಜನಾರ್ಧನ್ ಅವರು, ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಆ ಪಾತ್ರದ ಮೂಲಕ ಎಲ್ಲರನ್ನೂ ಸಮ್ಮೋಹನಗೊಳಿಸುತ್ತಿದ್ದರು. ಅವರ ನಿಧನ ನಮ್ಮ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ.
ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಚಿವ ಶಿವರಾಜ ತಂಗಡಗಿ ಶೋಕ
ಕನ್ನಡ ದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. 500ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪೋಷಕ ಪಾತ್ರಧಾರಿಯಾಗಿ, ಹಾಸ್ಯ ಕಲಾವಿದರಾಗಿ ನಟಿಸಿ ಹೆಸರು ಮಾಡಿದ್ದ ಬ್ಯಾಂಕ್ ಜನಾರ್ಧನ್ ಅವರು ಕನ್ನಡ ರಂಗಭೂಮಿಯಲ್ಲೂ ತಮ್ಮ ಮನೋಜ್ಞ ಅಭಿನಯದಿಂದ ಜನಪ್ರಿಯ ರಾಗಿದ್ದರು.
ಅವರ ಪಾತ್ರಗಳು ಸದಾ ನೆನಪಿನಲ್ಲಿ ಉಳಿಯುವಂತಹದ್ದು. ಶ್, ತರ್ಲೆ ನನ್ಮಗ, ಗಣೇಶನ ಮದುವೆ ,ಗಣೇಶ ಸುಬ್ರಮಣ್ಯ ಹೀಗೆ ಅನೇಕ ಚಲನಚಿತ್ರಗಳ ಅವರ ಪಾತ್ರಗಳು ಚಲನಚಿತ್ರ ಪ್ರೇಮಿಗಳ ಮನಸ್ಸಿನಲ್ಲಿ ಅಚ್ಚಳಿಯದ ಛಾಪು ಮೂಡಿಸಿದೆ. ಪಾಪಾ ಪಾಂಡು ಸೇರಿದಂತೆ ಅನೇಕ ಟಿ ವಿ ಧಾರವಾಹಿಗಳಲ್ಲಿಯೂ ನಟಿಸಿದ್ದ ಬ್ಯಾಂಕ್ ಜನಾರ್ಧನ್ ಕನ್ನಡ ಕಲಾ ಜಗತ್ತು ಕಂಡ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರು.
ಅವರ ನಿಧನದಿಂದ ಕನ್ನಡದ ಕಲಾ ಜಗತ್ತು ಒಬ್ಬ ಮನೋಘ್ನ ಕಲಾವಿದ ನನ್ನ ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ಮತ್ತು ಅವರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಎಂಬಿ ಪಾಟೀಲ್ ಸಂತಾಪ
ಕನ್ನಡ ಚಲನಚಿತ್ರರಂಗದ ಹಿರಿಯ ಕಲಾವಿದರಾದ ಬ್ಯಾಂಕ್ ಜನಾರ್ಧನ್ ಅವರು ವಿಧಿವಶರಾಗಿದ್ದು ಕಂಬನಿ ಮಿಡಿಯುತ್ತೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ತಿಳಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿ, ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ಪರಮಾತ್ಮ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ: ಬಿಜೆಪಿ ರಾಜ್ಯಾಧ್ಯಕ್ಷ
ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಸಂತಾಪ ಕೋರುವೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಂಗಭೂಮಿಯಲ್ಲಿ ತೊಡಗಿಸಿಕೊಂಡು ನೂರಾರು ಚಲನಚಿತ್ರಗಳು, ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೇ ಹಾಸ್ಯ ನಟರಾಗಿ ತಮ್ಮದೇ ಆದ ಛಾಪು ಮೂಡಿಸಿ ಕನ್ನಡಿಗರ ಮನೆಮಾತಾಗಿದ್ದ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಮೃತರ ಕುಟುಂಬ ವರ್ಗದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂ ಶಾಂತಿ ಎಂದು ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.
ಜನಾರ್ಧನ್ ಅವರ ಒಡನಾಟ ನೆನೆದ ನಟ ಜಗ್ಗೇಶ್..
ಆತ್ಮೀಯ ಗೆಳೆಯ ಜನಾರ್ದನ ಹೋಗಿ ಬಾ..ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು.ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಬಿಜೆಪಿ ಸಂಸದ , ನಟ ನವರಸ ನಾಯಕ ಜಗ್ಗೇಶ್ ಅವರು ಮೃತ ಬ್ಯಾಂಕ್ ಜನಾರ್ಧನ್ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications