ನೀತಿ ಸಂಹಿತೆ ಉಲ್ಲಂಘನೆ: ಪ್ರಧಾನಿ ಮೋದಿ ರೋಡ್ ಶೋ ಆಯೋಜಕರ ಮೇಲೆ ಬಿತ್ತು ಕೇಸ್

ಬೆಂಗಳೂರು, ಮೇ 26: ಕಳೆದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಮುನ್ನ ಬೆಂಗಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಸಂಬಂಧ ಇದೀಗ ರೋಡ್ ಶೋ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಸವನಗುಡಿ ವಿಧಾನಸಭಾ ಕ್ಷೇತ್ರದ (ಸಂಖ್ಯೆ 170) ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಎಲ್‌.ಎ. ಉದಯಶಂಕರ್ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಮೇ 22 ರಂದು ಬಸವನಗುಡಿ ಪೊಲೀಸರಿಗೆ ದೂರು ನೀಡಿದ್ದಾರೆ.

Poll Code Of Conduct Violation

ದೂರಿನಲ್ಲಿ ಉಲ್ಲೇಖಿಸಿರುವಂತೆ, ಮೇ 6 ರಂದು ರೋಡ್ ಶೋ ವೇಳೆ ಬಸವನಗುಡಿಯ ನೆಟ್‌ಕಲ್ಲಪ್ಪ ವೃತ್ತದ ಬಳಿಯ ವಾರ್ಡ್ (ಸಂಖ್ಯೆ 154) ಮತ್ತು ಶೇಖರ್ ಆಸ್ಪತ್ರೆ ಬಳಿ (ವಾರ್ಡ್ ಸಂಖ್ಯೆ 155) ವರೆಗೆ ಸಂಘಟಕರು ಬಿಜೆಪಿ ಚಿಹ್ನೆ ಮತ್ತು ಮೋದಿ ಭಾವಚಿತ್ರವುಳ್ಳ ಚಿತ್ರವಿರುವ 60 ಧ್ವಜಗಳು ಮತ್ತು 30 ಫ್ಲೆಕ್ಸ್ ಅಳವಡಿಸಿದ್ದರು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ರಾಜಕೀಯ ನಾಯಕರು ಅಥವಾ ಪಕ್ಷದ ಭಾವುಟಗಳಿರುವ ಫ್ಲೆಕ್ಸ್, ಬ್ಯಾನರ್ ಹಾಕುವುದರಿಂದ ನಿಯಮ ಉಲ್ಲಂಘನೆ ಆಗುತ್ತದೆ. ಅಂದು ಸಹ ಬಿಜೆಪಿ ರೋಡ್ ಶೋ ಆಯೋಜಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯದ ಅನುಮತಿ ಪಡೆದು ಉದಯಶಂಕರ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಐಪಿಸಿ ಸೆಕ್ಷನ್ 188 (ಸಾರ್ವಜನಿಕ ನೌಕರನು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ಪ್ರಕರಣ ದಾಖಲಿಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Poll Code Of Conduct Violation

ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೇ 6ರಿಂದ ಎರಡು ದಿನ 'ನಮ್ಮ ಕರ್ನಾಟಕ ಯಾತ್ರೆ' ಹೆಸರಿನಡಿ ಇಲ್ಲಿನ 18 ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಿದ್ದರು. ಒಟ್ಟು 36.6 ಕಿ.ಮೀ. ದೂರ ಬೃಹತ್‌ ರೋಡ್‌ ಶೋ ನಡೆಸಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಮೊದಲು ಒಂದೇ ದಿನ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ಆದರೆ ಸಾರ್ವನಿಕರಿಗೆ ತೊಂದರೆ ಆಗುವ ಕಾರಣ ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೋ ನಡೆಸಲಾಯಿತು. ಈ ವೇಳೆ ರಸ್ತೆಗಳಲ್ಲಿ ಸಾಗರೋತ್ತರದಲ್ಲಿ ಜನ ನಿಂತು ಪ್ರಧಾನಿಯನ್ನು ಕಣ್ತುಂಬಿಕೊಂಡರು.

ಈ ರೋಡ್ ಶೋ ಸಂಬಂಧವೇ ನಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದಕ್ಕೆ ಅಂದಿನ ವಿಪಕ್ಷ ಕಾಂಗ್ರೆಸ್ ಸೇರಿದಂತೆ ಬೆಂಗಳೂರಿನ ಕೆಲವು ನಾಗರಿಕರು ಟೀಕೆ ವ್ಯಕ್ತಪಡಿಸಿದ್ದಾರೆ. ಹೀಗೆ ರೋಡ್ ಶೋ ನಡಸುವಾಗ ಬಸವನಗುಡಿ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದ್ದು, ತಡವಾಗಿ ದೂರು ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+