• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚುನಾವಣಾ ಆಯೋಗ ಕೆಂಗಣ್ಣು, 732 ಬಾರ್ ಗಳಿಗೆ ಬೀಗ

|

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಕೇವಲ ರಾಜಕಾರಣಿಗಳು ಮಾತ್ರವಲ್ಲದೆ ಜನಸಾಮಾನ್ಯರಿಗೂ ಬಿಸಿ ಮುಟ್ಟಿಸುತ್ತಿದೆ.

ಸಮಯ ಮೀರಿ ಕಾರ್ಯನಿರ್ವಹಿಸುವ 700ಕ್ಕೂ ಅಧಿಕ ಬಾರ್ ಹಾಗೂ ರೆಸ್ಟೋರೆಂಟ್ಗಳನ್ನು ಚುನಾವಣಾ ಆಯೋಗದ ನೀತಿ ಸಂಹಿತೆಯಡಿ ಬೀಗ ಜಡಿಯಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ 752 ಬಾರ್, ಪಬ್ ಗಳಲ್ಲಿ ಚಟುವಟಿಕೆಗಳು ಮಂಕಾಗಿವೆ.

ಚುನಾವಣೆ ದಿನ ಸಿನಿಮಾ, ಶಾಪಿಂಗ್ ಹೋಗುವ ಪ್ಲ್ಯಾನ್ ಇದ್ದರೆ ಮರೆತುಬಿಡಿ!

ನಿಗದಿತ ವೇಳೆಗಿಂತ ಹೆಚ್ಚಿನ ಸಮಯ ಬಾರ್, ಪಬ್ ಗಳು ಕಾರ್ಯನಿರ್ವಹಣೆ ಮಾಡಿದ ಅಥವಾ ಸಂಹಿತೆ ಉಲ್ಲಂಘಿಸಿದ ಒಟ್ಟು 752 ಬಾರ್, ಪಬ್ ಗಳನ್ನು ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಒಂದರಲ್ಲೇ ಮದ್ಯವನ್ನು ಪೂರೈಕೆ ಮಾಡುವ ಸುಮಾರು 200 ಸ್ಥಳಗಳಿಗೆ ಪರವಾನಗಿ ರದ್ದುಗೊಳಿಸುವ ನೋಟೀಸ್ ಜಾರಿಗೊಳಿಸಲಾಗಿದೆ. ನಗರದಾದ್ಯಂತ ಸುಮಾರು 2,200 ಮದ್ಯ ಪೂರೈಕೆ ಮಾಡುವ ಸ್ಥಳಗಳಿವೆ.

2014 ರ ಲೋಕಸಭಾ ಚುನಾವಣೆ ವೇಳೆ ರಾಜ್ಯಾದ್ಯಂತ ಕೇವಲ 14 ಮದ್ಯ ಪೂರೈಕೆ ಮಾಡುವ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲು ನೋಟಿಸ್ ಜಾರಿಗೊಳಿಸಲಾಗಿತ್ತು. ಇದರ ಹೊರತಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 15,000 ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಚುನಾವಣಾ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಬಾರ್, ಚಿಲ್ಲರೆ ಅಂಗಡಿಗಳು, ಪಬ್ ಗಳು ಮತ್ತು ರೆಸ್ಟೋರೆಂಟ್ ಗಳ ಮೇಲೆ ಕಣ್ಣಿಟ್ಟಿರುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಹೆಚ್ಚು ಪ್ರಮಾಣದಲ್ಲಿ ಮದ್ಯವನ್ನು ಖರೀದಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಮದ್ಯ ಹಂಚುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಲಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The weekend gone by was relatively a quieter one for people around the city as several of their favourite pubs and bars sported polite, closed for business signs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more