Nimhans: ನಿಮ್ಹಾನ್ಸ್‌ಗೆ ಪಾಲಿಟ್ರಾಮಾ ಕೇಂದ್ರ: ಕೇಂದ್ರದಿಂದ ಭರ್ಜರಿ ಗುಡ್‌ನ್ಯೂಸ್!
Nimhans: ನಿಮ್ಹಾನ್ಸ್‌ಗೆ ಸಂಬಂಧಿಸಿದಂತೆ ಕನ್ನಡಿಗರ ಬಹುದಿನಗಳ ಕನಸು ಈಗ ನನಸಾಗಿದೆ. ಈ ಸಂಬಂಧ ಸಂಸದ ಡಾ. ಸಿ ಎನ್ ಮಂಜುನಾಥ್ ಅವರು ಟ್ವೀಟ್‌ನ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ. ದೇಶದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ನಿಮ್ಹಾನ್ಸ್ ಸಹ ಒಂದಾಗಿದೆ. ಬೆಂಗಳೂರಿನಲ್ಲಿರುವ ಈ ಆಸ್ಪತ್ರೆಗೆ ದೇಶ - ವಿದೇಶಗಳಿಂದ ಜನ ಚಿಕಿತ್ಸೆಗೆ ಬರುತ್ತಿದ್ದಾರೆ. ಅಭಿವೃದ್ಧಿಯಾದಂತೆ ಈ ಆಸ್ಪತ್ರೆಯ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಇದೀಗ ಕನ್ನಡಿಗರ ಬಹುದಿನಗಳ ಕನಸು ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ಮಂಜುನಾಥ್ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಪದವಿ ಮತ್ತು 300 ಹಾಸಿಗೆ ಸಾಮರ್ಥ್ಯದ "Poly trauma centre" ಸ್ಥಾಪನೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಂಜುನಾಥ್ ಅವರು, ವೈಯುಕ್ತಿಕವಾಗಿ ಕೇಂದ್ರ ಸರ್ಕಾರದ ಈ ನಿರ್ಧಾರ ಅತ್ಯಂತ ಸಂತಸ ತರಿಸಿದೆ ಎಂದಿದ್ದಾರೆ.

ಈ ಮೂಲಕ ಅನೇಕ ವರ್ಷಗಳ ಕನ್ನಡಿಗರ ಬೇಡಿಕೆ ಈಡೇರಿದಂತಾಗಿದೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಹಣಕಾಸು ಸಚಿವರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದ ಮೂಲಕ ಮತ್ತು ವೈಯುಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದೆ ಎಂದಿದ್ದಾರೆ.
ನಮ್ಮ ದೇಶದಲ್ಲಿ ಶೇ 15% ರಷ್ಟು ಸಾವುಗಳು ರಸ್ತೆ ಅಪಘಾತದಿಂದ ಸಂಭವಿಸುತ್ತಿವೆ ಮತ್ತು ಶೇ30ರಷ್ಟು ರಸ್ತೆ ಅಪಘಾತಗಳಲ್ಲಿ ಬಹುಗಾಯಗಳಿಗೆ( multiple injuries) ಒಳಗಾಗುತ್ತಾರೆ. ಈ ಹಿನ್ನಲೆ ಗಾಯಗೊಂಡವರಿಗೆ ಆದಷ್ಟು ತ್ವರಿತವಾಗಿ (golden hour) ಒಂದೇ ಸೂರಿನಡಿ ಚಿಕಿತ್ಸೆ ಒದಗಿಸುವ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕದ ಜನತೆಗೆ ವಿಶೇಷವಾಗಿ ಬೆಂಗಳೂರಿಗರಿಗೆ "Poly trauma centre" ಸ್ಥಾಪನೆ ಅತ್ಯಂತ ಸಹಕಾರಿಯಾಗಲಿದೆ. ಜಯಪ್ರಕಾಶ್ ನಾರಾಯಣ್ "Poly trauma centre" ನಂತರದಲ್ಲಿ ದೇಶದಲ್ಲಿಯೇ ಎರಡನೇ "Poly trauma centre" ಇದಾಗಲಿದೆ. ಇದರ ಜೊತೆಗೆ ಸ್ನಾತಕೋತ್ತರ ಪದವಿ ಘಟಕವನ್ನು ಸ್ಥಾಪಿಸುವುದರಿಂದ ಆಘಾತ ಚಿಕಿತ್ಸಾ ವಿಭಾಗದಲ್ಲಿ ತಜ್ಞರಿಗೆ ನುರಿತ ತರಬೇತಿ ನೀಡುವ ಮೂಲಕ ಅವರ ಸೇವೆಯನ್ನು ದೇಶಾದ್ಯಂತ ಬಳಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ನಮ್ಮೆಲ್ಲರ ಮನವಿಗೆ ಸ್ಪಂದಿಸಿ ಬೆಂಗಳೂರಿನಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಪದವಿ ಮತ್ತು 300 ಹಾಸಿಗೆ ಸಾಮರ್ಥ್ಯದ "Poly centre" ಸ್ಥಾಪನೆಯ ಪ್ರಸ್ತಾವನೆಗೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ ನಡ್ಡಾ ಅವರಿಗೆ ಹಾಗೂ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕರ್ನಾಟಕ ಜನತೆಯ ಪರವಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications