BBMP ಶಾಲಾ ಕಾಲೆಜುಗಳಲ್ಲಿ ಶಿಕ್ಷಕರ ನೇಮಕದಲ್ಲಿ ಗೋಲ್‌ಮಾಲ್: ಕಳಪೆ ಫಲಿತಾಂಶ
ಬೆಂಗಳೂರು, ಜೂನ್ 04: ಬೆಂಗಳೂರಿನಲ್ಲಿ ಶೈಕ್ಷಣಿಕ ಸಾಲಿನಲ್ಲಿ ಕಳಪೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿದ್ದು, ಅಚ್ಚರಿಯ ಅಂಶಗಳು ಬಹಿರಂಗಗೊಂಡಿದೆ. ಬಿಬಿಎಂಪಿ ಅಧಿಕಾರಿಗಳು ಶಿಕ್ಷಣ ವ್ಯವಸ್ಥೆಯನ್ನೇ ಮಾರಿಕೊಂಡರಾ? ಎಂಬ ಹಲವು ಅನುಮಾನಗಳು ಕಾಡುತ್ತಿವೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಶಾಲಾ - ಕಾಲೇಜುಗಳಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಕಳಪೆ ಮಟ್ಟದ ಫಲಿತಾಂಶ ಹೊರ ಬಿದ್ದಿದೆ. ಈ ಸಂಬಂಧ ತನಿಖೆ ನಡೆಸಿದಾಗ ಅರ್ಹತೆ ಇಲ್ಲದವರನ್ನು ಮಕ್ಕಳಿಗೆ ಶಿಕ್ಷಣ ಹೇಳಿಕೊಡಲು ನೇಮಕ ಮಾಡಿಕೊಳ್ಳಲಾಗಿದೆ. ಈ ಕಾರಣಕ್ಕೆ ಉತ್ತಮ ಫಲಿತಾಂಶ ಬಂದಿಲ್ಲ ಎಂಬ ಮಾಹಿತಿ ತನಿಖೆಯಿಂದ ಲಭ್ಯವಾಗಿದೆ.

ಬಿಬಿಎಂಪಿ ಶಾಲಾ ಕಾಲೇಜಿನಲ್ಲಿ ಶಿಕ್ಷಕರಿಗೆ ಬೇಕಾದ ವಿದ್ಯಾರ್ಹತೆ ಇಲ್ಲದವರನ್ನೇ ಮಕ್ಕಳಿಗೆ ಶಿಕ್ಷಣ ಕಲಿಸಲು ನೇಮಿಸಲಾಗಿದೆ. ಆದ್ದರಿಂದಲೇ ಕಳಪೆ ಫಲಿತಾಂಶ ಬಂದಿದೆ ಎನ್ನಲಾಗಿದೆ. ಈ ಮೂಲಕ ಶಿಕ್ಷಕರ ನೇಮಕಾತಿಯಲ್ಲಿ ಬಾರಿ ಗೋಲ್ ಮಾಲ್ ನಡೆದಿರುವ ಅನುಮಾನ ವ್ಯಕ್ತವಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳು ಹಣದಾಸೆಗೆ ಶಿಕ್ಷಣ ವ್ಯವಸ್ಥೆಯನ್ನೇ ಮಾರಿಕೊಂಡರಾ? ಎಂಬ ಮಾತುಗಳು ಕೇಳಿ ಬಂದಿದ್ದು, ತನಿಖೆ ಮುಂದುವರೆಸುವ ಸಾಧ್ಯತೆ ಇದೆ.
ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ನೇಮಕದಲ್ಲಿ ಭಾರೀ ಅಕ್ರಮ ನಡೆದಿರುವ ಸಾಧ್ಯತೆಗಳು ದಟ್ಟವಾಗಿವೆ. ನಗರದ ಪಾಲಿಕೆ ವ್ಯಾಪ್ತಿಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಕಳಪೆ ಪರೀಕ್ಷಾ ಫಲಿತಾಂಶ ಬಂದ ಹಿನ್ನಲೆ ಬಿಬಿಎಂಪಿ ಶಾಲೆಗಳ ಸಮಗ್ರ ವರದಿ ನೀಡುವಂತೆ ಬಿಬಿಎಂಪಿ ಅಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ ಎಂದು ಟಿವಿ ನೈನ್ ವರದಿ ಮಾಡಿದೆ.
ಶಿಕ್ಷಕರ ಅರ್ಹತೆ ಇಲ್ಲದ 181 ನೇಮಕ
ಸದ್ಯ ಅಧಿಕಾರಿಗಳು ನಡೆಸಿರುವ ತನಿಖೆಯಿಂದಾಗಿ ಅನರ್ಹ ಶಿಕ್ಷಕರ ನೇಮಕ ಬೆಳಕಿಗೆ ಬಂದಿದೆ. ಶಾಲಾ ಕಾಲೇಜುಗಳಿಗೆ ನೇಮಕಗೊಂಡ ಸುಮಾರು 181 ಶಿಕ್ಷಕರಿಗೆ ಅರ್ಹತೆಯೆ ಇಲ್ಲ ಎಂಬುದು ಗೊತ್ತಾಗಿದೆ. ಇದುವೇ ಕಳೆದ ಶೈಕ್ಷಣಿಕ ಸಾಲಿನಲ್ಲಿ ಫಲಿತಾಂಶ ಕಳಪೆಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಗಾದರೆ ಅಕ್ರಮವಾಗಿ ಯಾರು ಯಾರನ್ನು ಶಿಕ್ಷಣದ ಯಾವ ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂಬ ವಿವರ ಇಲ್ಲಿದೆ.
ಬಿಬಿಎಂಪಿ ವ್ಯಾಪ್ತಿಯ ಶಾಲಾ ಕಾಲೇಜುಗಳ ಪೈಕಿ ಅರ್ಹತೆ ಇಲ್ಲದೇ 48 ಮಂದಿ ಶಿಶುವಿಹಾರ ಶಿಕ್ಷಕರನ್ನಾಗಿ, ಪೌಢ ಶಾಲಾ ಶಿಕ್ಷಕರಾಗಿ 04, ಕಂಪ್ಯೂಟರ್ ಟೀಚರ್ 29, ಪ್ರಾಥಮಿಕ ಶಾಲಾ ಶಿಕ್ಷಕರಾಗಿ 70, ಪದವಿ ಕಾಲೇಜು ಶಿಕ್ಷಕರು 17 ಮತ್ತು
ಪದವಿ ಪೂರ್ವ ಕಾಲೇಜು ಶಿಕ್ಷಕರನ್ನಾಗಿ 13 ಮಂದಿ ಅನರ್ಹರನ್ನು ನೇಮಿಸಿಕೊಳ್ಳಲಾಗಿದೆ ಎಂಬ ಮಾಹಿತಿ ತನಿಖೆಯಿಂದ ಲಭ್ಯವಾಗಿದೆ.












Click it and Unblock the Notifications