ಬಿಬಿಎಂಪಿ ಬ್ಯಾನ್ ಗೆ ಬೆಲೆ ಇಲ್ಲ: ಪಿಒಪಿ ಗಣಪನ ಹಾವಳಿ ನಿಂತಿಲ್ಲ!
ಬೆಂಗಳೂರು, ಆಗಸ್ಟ್ 30: ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶನ ಮೂರ್ತಿಯನ್ನು ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿ ಪಿಒಪಿ ಗಣೇಶನನ್ನು ನಿಷೇಧಿಸಲು ಹರಸಾಹಸಪಡುತ್ತಿದೆ.
ಮೊದಲ ಎರಡು ವರ್ಷ ಈಗಾಗಲೇ ಸಾವಿರಾರು ಮೂರ್ತಿಗಳನ್ನು ತಯಾರಿಸಿದ್ದೇವೆ ಏಕಾಏಕಿ ನಿಷೇಧ ಮಾಡಿದರೆ ಈ ವೆಚ್ಚವನ್ನು ಭರಿಸುವವರು ಯಾರು ಎಂದು ಮೂರ್ತಿ ತಯಾರಕರು ಪ್ರಶ್ನಿಸಿದ್ದರು ಆದರೆ ಈ ಈ ವರ್ಷ ಪಿಒಪಿ ಗಣೇಶನನ್ನು ಸಂಪೂರ್ಣವಾಗಿ ಬ್ಯಾನ್ ಮಾಡಿದೆ.
ಆದರೂ ಪಿಒಪಿ ಗಣೇಶನ ಹಾವಳಿ ನಿಲ್ಲುತ್ತಿಲ್ಲ. ನಗರದೆಲ್ಲೆಡೆ ಜನರು ಕೂಡ ಪಿಒಪಿ ಗಣೇಶ ಬೇಕು ಎಂದೇ ಬೇಡಿಕೆ ಇಡುತ್ತಿದ್ದಾರೆ. ಬೆಂಗಳೂರಿಗೆ ಮಹಾರಾಷ್ಟ್ರ, ಹೈದರಾಬಾದ್ ನಿಂದ ಪಿಓಪಿ ಗಣಪತಿ ಆಮದಾಗುತ್ತಿದೆ. ಈಗಾಗಲೇ ಆರ್‌ವಿ ರಸ್ತೆಯಲ್ಲಿ 853 ಪಿಒಪಿ ಗಣೇಶ ಮೂರ್ತಿಯನ್ನು ಬಿಬಿಎಂಪಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ವಶಪಡಿಸಿಕೊಂಡಿದೆ.

ಪಿಒಪಿ ಮೂರ್ತಿಗಳನ್ನು ಇಟ್ಟುಕೊಳ್ಳಲು ಜಾಗವಿಲ್ಲ ಹಾಗಾಗಿ ಇಲ್ಲಿ ಇರಿಸಿಕೊಳ್ಳಲಾಗುತ್ತಿದೆ ಮಾರಾಟ ಮಾಡುತ್ತಿಲ್ಲ ಎಂದು ಮೂರ್ತಿ ತಯಾರಕರು ಕಾರಣ ಹೇಳುತ್ತಿದ್ದಾರೆ. ಪಿಒಪಿ ಗಣೇಶನ ಮೂರ್ತಿಯನ್ನು ನಿಷೇಧಿಸಲಾಗಿದೆ ಎನ್ನುವ ಫಲಕಗಳೊಂದಿಗೆ ಗಣೇಶನನ್ನು ಇರಿಸಲಾಗಿದೆ.
ವಿಲ್ಸನ್ ಗಾರ್ಡನ್, ಶಾಂತಿನಗರ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ, ಮಲ್ಲೇಶ್ವರದಲ್ಲಿ ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಇಡಲಾಗಿದೆ. ಜಯನಗರ ಶಾಸಕಿ ಸೌಮ್ಯ ರೆಡ್ಡಿ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪರಿಸರ ಸ್ನೇಹಿ ಮೂರ್ತಿ ಬಳಕೆಗೆ ಒತ್ತು ನೀಡುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಈ ಬಾರಿ 5 ಸಾವಿರ ಮೂರ್ತಿಗಳನ್ನು ಉಚಿತವಾಗಿ ಜನರಿಗೆ ವಿತರಿಸಲಿದ್ದಾರೆ.
ಜನರು ಮಣ್ಣಿನ ಮೂರ್ತಿ ಬಿಟ್ಟು ಈಗಲೂ ಪಿಒಇಪಿ ಗಣೇಶನನ್ನೇ ಕೇಳುತ್ತಿದ್ದಾರೆ, ಪಿಒಪಿ ಮೂರ್ತಿಗಳನ್ನು ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ, ಬಳಿಕ ಪಿಒಪಿ ಗಣೇಶನಿಗೆ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದ ಮಣ್ಣಿನ ಮೂರ್ತಿ ಮಾರಾಟ ಮಾಡುತ್ತಿರುವವರಿಗೆ ನಷ್ಟವಾಗುತ್ತಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications