Poster campaign: ತೇಜಸ್ವಿ ಸೂರ್ಯ ಬೆಂಬಲಿಗರಿಂದ ಬೆಂಗಳೂರಿನ ಆಟೋ ಚಾಲಕರ ಮೇಲೆ ಹಲ್ಲೆ!
ಬೆಂಗಳೂರು ನವೆಂಬರ್ 21: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಟೀಕಿಸುವ ಪೋಸ್ಟರ್ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಆಟೋ ಚಾಲಕರ ಮೇಲೆ ಹಲ್ಲೆ ಮಾಡಲಾಗಿದೆ. ಈ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಾರ್‌ಪೂಲಿಂಗ್‌ಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ ಮತ್ತು ಹೇಳಿಕೆಯನ್ನು ಹಿಂಪೆಯುವಂತೆ ಆಗ್ರಹಿಸಿರುವ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಸದಸ್ಯರು 'ಪೋಸ್ಟರ್ ಅಭಿಯಾನ' ಆರಂಭಿಸಿದ್ದರು. ಹೀಗಾಗಿ ಬೆಂಗಳೂರಿನ ಆಟೋ ಚಾಲಕರು ತಮ್ಮ ವಾಹನಗಳ ಮೇಲೆ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು.

ಪೋಸ್ಟರ್‌ಗಳನ್ನು ತೆಗೆಯುವಂತೆ ಆಗ್ರಹಿಸಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ವೆಂಕಟೇಶ್ ಬೆಂಬಲಿಗರು ಆಟೋ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ವೆಂಕಟೇಶ್ ಅವರು ತಮ್ಮ ವಾಹನಗಳನ್ನು ಚಲಾಯಿಸದಂತೆ ಪ್ರದೇಶದ ಎಲ್ಲಾ ಆಟೋ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಪೋಸ್ಟರ್‌ಗಳನ್ನು ತೆಗೆದುಹಾಕದಿದ್ದರೆ ಮಾರಣಾಂತಿಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ವೆಂಕಟೇಶ್ ಮತ್ತು ಆತನ ಬೆಂಬಲಿಗರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಳೆದ ಗುರುವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಸದಸ್ಯರು, ಕಾರ್ ಪೂಲಿಂಗ್ ಮತ್ತು ವೈಟ್‌ಬೋರ್ಡ್ ವಾಹನ ಬಾಡಿಗೆಗೆ ಬಳಸಲು ನೀಡಿರುವ ಹೇಳಿಕೆಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಈ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.

'ಇತ್ತೀಚಿಗೆ ಬೃಹತ್ ಪ್ರತಿಭಟನೆ ನಡೆಸಿ ಕಾನೂನು ಬಾಹಿರ ಆ್ಪ್ ಸೇವೆಗಳನ್ನು ರದ್ದುಪಡಿಸಬೇಕೆಂದು ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಲಾಗಿತ್ತು. ಅದರಂತೆ ಕಾನೂನು ಬಾಹಿರ ಹಾಗೂ ಕಾರ್ಮಿಕ, ಬಡ ವಿರೋಧಿ ನೀತಿಗಳನ್ನು ಜಾರಿಗೊಳಿಸುವುದಿಲ್ಲ ಎಂದು ಸರಕಾರ ಭರವಸೆ ನೀಡಿತ್ತು. ಆದರೆ ಈ ಮಧ್ಯೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ವೈಟ್ ಬೋರ್ಡ್ ವಾಹನ ಮತ್ತು ಕಾರ್ ಪೂಲಿಂಗ್ ಅವಕಾಶ ನೀಡುವಂತೆ ಮನವಿ ಮಾಡಿರುವುದು ಖಂಡನೀಯ' ಎಂದು ಒಕ್ಕೂಟದ ಎಸ್.ನಟರಾಜ ಶರ್ಮಾ ಆಕ್ರೋಶ ಹೊರಹಾಕಿದ್ದಾರೆ.
ತೇಜಸ್ವಿ ಸೂರ್ಯ ನಡೆಯಿಂದ ವಾಣಿಜ್ಯ ಸೇವೆಗೆ ತೆರಿಗೆ ಕಟ್ಟಿ, ಪರವಾನಿಗೆ ಪಡೆದ, ಬ್ಯಾಡ್ಜ ಹೊಂದಿರುವ ಚಾಲಕರಿಗೆ ದೊಡ್ಡ ನಷ್ಟ ಆಗಲಿದೆ. ತೇಜಸ್ವಿ ಸೂರ್ಯಗೆ ಈ ಕುರಿತು ಒಂದಿಷ್ಟು ಮಾಹಿತಿ ಇಲ್ಲದೆ, ಪತ್ರ ಬರೆದಿದ್ದು ಇದರಿಂದ ಕಾನೂನು ಉಲ್ಲಂಘನೆ ಮಾಡಿ ಓಡಿಸುತ್ತಿರುವ ವಾಹನ ಮತ್ತು ಆಪ್ ಆದಾರಿತ ಕಂಪನಿಗಳಿಗೆ ಇನ್ನಷ್ಟು ಬೆಂಬಲ ಸಿಕ್ಕ ಹಾಗೆ ಆಗಿದೆ ಎಂದರು.
ಒಕ್ಕೂಟದ ಗಂಡಸಿ ಸದಾನಂದ ಸ್ವಾಮಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾರ್ಮಿಕರ ಪರ ನಿಲ್ಲಬೇಕಾಗಿದೆ. ಆದರೆ ಅವರ ನಡೆಯಿಂದ ಬಡ ಮತ್ತು ಮಧ್ಯ ವರ್ಗದ ಕಾರ್ಮಿಕರ ಆರ್ಥಿಕ ಸ್ಥಿತಿ ಹಾಳಾಗಲಿದೆ. ಹೀಗಾಘಿ ಅವರು ಈ ಕೂಡಲೇ ತಮ್ಮ ಹೇಳಿಕೆ ಮತ್ತು ಪತ್ರವನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.












Click it and Unblock the Notifications