ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶನಿವಾರದೊಳಗೆ ಗುಂಡಿ ಮುಕ್ತ ಬೆಂಗಳೂರು: ಡಿಸಿಎಂ ತಾಕೀತು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 25: ಶನಿವಾರದೊಳಗಾಗಿ ಗುಂಡಿ ಮುಕ್ತ ಬೆಂಗಳೂರು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‌ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ವೈಟ್‌ಟಾಪಿಂಗ್, ರಸ್ತೆಗುಂಡಿ, ಕಸ ನಿರ್ವಹಣೆ ಕುರಿತು ವಿಕಾಸಸೌಧದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಆಡಳಿತದ ಬಗ್ಗೆ ಹೈಕೋರ್ಟ್‌ ನ್ಯಾಯಾದೀಶರು ಲೋಪದೋಷವನ್ನು ಎತ್ತಿಹಿಡಿದು, ಕಟುವಾಗಿ ಸೂಚನೆ ನೀಡಿದ್ದಾರೆ‌.

ಬೆಂಗಳೂರಿನ 23 ರಸ್ತೆಗಳು ಸ್ಮಾರ್ಟ್ ಆಗಲಿವೆ, ಕಾಯ್ತಾ ಇರಿ!ಬೆಂಗಳೂರಿನ 23 ರಸ್ತೆಗಳು ಸ್ಮಾರ್ಟ್ ಆಗಲಿವೆ, ಕಾಯ್ತಾ ಇರಿ!

ಇಂತಿಷ್ಟು ದಿನದಲ್ಲಿ‌ ರಸ್ತೆ ಗುಂಡಿ ಮುಚ್ಚಲು ಗಡುವು ನೀಡಿದ್ದು, ಈ ಸಂಬಂಧ ಶನಿವಾರ ವಿಚಾರಣೆ ಬರಲಿದೆ. ಅಷ್ಟರೊಳಗೆ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಎಂಟು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿದ್ದು, ಇದರ ದಾಖಲೆಗಳನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿಯು ಪ್ರಕಟಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

Pothole free Bengaluru: DCM sets deadline to officials

ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಕುಮಾರಬಾಣ ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಕುಮಾರಬಾಣ

ನಗರದ ಪ್ರತಿ ಬೀದಿಯ ರಸ್ತೆ ಗುಂಡಿ ಮುಚ್ಚಿರುವ ಮಾಹಿತಿ ಹಾಕಲಾಗುತ್ತದೆ. ಇದೇ ದಾಖಲೆಯನ್ನು ಹೈಕೋರ್ಟ್‌ಗೂ ಸಲ್ಲಿಸಲಾಗುವುದು.‌ ಈ ದಾಖಲೆ ತಪ್ತಪ್ಪಿದ್ದರೆ ಆಯಾ ವಲಯ ಜಂಟಿ ಆಯುಕ್ತರಿಗೆ ನೇರ ಕರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು. ಅಕ್ಟೋಬರ್ 27ರ ಒಳಗಾಗಿ ಬೆಂಗಳೂರಿನಲ್ಲಿರುವ ಎಲ್ಲಾ ರಸ್ತೆ ಗುಂಡಿಗಳನ್ನು ಭರ್ತಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

English summary
Deputy chief minister Dr.G. Parameshwara has set deadline to BBMP officials to make Bengaluru roads as pothole free before Saturday and the same information should be updated in website for the public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X