ಬೆಂಗಳೂರಿಗರಿಗೆ ಗುಡ್‌ನ್ಯೂಸ್‌; ಅಕ್ಟೋಬರ್ ಅಂತ್ಯದೊಳಗೆ ಗುಂಡಿಮುಕ್ತ ರಸ್ತೆ ನಿರ್ಮಾಣಕ್ಕೆ ಡೆಡ್‌ಲೈನ್‌!

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳ ಸಮಸ್ಯೆಗೆ ಮುಕ್ತಿ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ. ಮಳೆಯಿಂದ ಹದಗೆಟ್ಟಿರುವ ರಸ್ತೆಗಳನ್ನು ಪರಿಶೀಲಿಸಿ, ಎಲ್ಲಾ ಆರ್ಟೀರಿಯಲ್‌ ಹಾಗೂ ಸಬ್‌ ಆರ್ಟೀರಿಯಲ್‌ ರಸ್ತೆಗಳಲ್ಲಿನ ಗುಂಡಿಗಳನ್ನು ಅಕ್ಟೋಬರ್‌ 2026ರ ಅಂತ್ಯದೊಳಗೆ ಗುಣಮಟ್ಟ ಕಾಯ್ದುಕೊಂಡು ಮುಚ್ಚುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ಇಂಜಿನಿಯರ್‌ಗಳಿಗೆ ಸೂಚನೆ ನೀಡಲಾಗಿದೆ .

ಅಕ್ಟೋಬರ್-2026 ತಿಂಗಳ ಒಳಗಾಗಿ ಎಲ್ಲಾ ರಸ್ತೆ ಗುಂಡಿಗಳನ್ನು ಗುಣಮಟ್ಟ ಕಾಯ್ದುಕೊಂಡು ಮುಚ್ಚಿ ಗುಂಡಿಮುಕ್ತ ರಸ್ತೆಗಳನ್ನು ನಿರ್ಮಿಸುವಂತೆ ಸೂಚಿಸಿದ್ದು, ಅಗತ್ಯವಿರುವ ಕಡೆಗಳಲ್ಲಿ ಜೆಟ್ ಪ್ಯಾಚರ್ ಯಂತ್ರ ಬಳಸಿ ಗುಣಮಟ್ಟದ ರೀತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ, ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡುವಂತೆ ನಿರ್ದೇಶಿಸಿದರು.

Potholes Deadline Bengaluru Central City Corporation Body Sets October Deadline to Fill All Road Potholes

ಸಹಾಯ ದೂರುಗಳಿಗೆ ತ್ವರಿತ ಪರಿಹಾರ ಕಲ್ಪಿಸಿ

ಸಹಾಯ ಪೋರ್ಟಲ್ ನಲ್ಲಿ ದಾಖಲಾಗುವ ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ, ಪರಿಶೀಲನೆ ನಡೆಸಿ, ಸಮಸ್ಯೆಯ ಸ್ವರೂಪಕ್ಕೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಂಡು ನಿಗದಿತ ಅವಧಿಯೊಳಗೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ದೂರುಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ನಿರಂತರವಾಗಿ ಮೇಲ್ವಿಚಾರಣೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ವೈಯಕ್ತಿಕವಾಗಿ ಗಮನಹರಿಸಿ, ಬಾಕಿ ದೂರುಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಯಿತು.

ಅನಾಥ ವಾಹನಗಳನ್ನು ತ್ವರಿತವಾಗಿ ತೆರವುಗೊಳಿಸಿ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಸುದಾರರಿಲ್ಲದ ಆನಾಥ ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ 7 ದಿನಗಳ ನೋಟಿಸ್ ಅವಧಿ ಪೂರ್ಣಗೊಂಡ ನಂತರ ಪೊಲೀಸ್ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಂವಹನ ಸಾಧಿಸಿ ಟೋಯಿಂಗ್ ವ್ಯವಸ್ಥೆ ಮೂಲಕ ತ್ವರಿತವಾಗಿ ವಾಹನಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕ ಸಂಚಾರಕ್ಕೆ ಹಾಗೂ ರಸ್ತೆ ಬಳಕೆಗೆ ಅಡ್ಡಿಯಾಗುವ ಯಾವುದೇ ವಾರಸುದಾರರಿಲ್ಲದ ಅನಾಥ ವಾಹನಗಳು ನಗರದಲ್ಲಿ ಉಳಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಟ್ರಾಫಿಕ ಜಂಕ್ಷನ್ ಗಳ ಸುಧಾರಣೆಗೆ ಸಮನ್ವಯದೊಂದಿಗೆ ಕ್ರಮ

ನಗರದ ಪ್ರಮುಖ ಟ್ರಾಫಿಕ್ ಜಂಕ್ಷನ್ ಗಳ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಂಚಾರ ದಟ್ಟಣೆ ಕಡಿಮೆ ಮಾಡಿ, ವಾಹನ ಹಾಗೂ ಪಾದಚಾರಿಗಳ ಸಂಚಾರವನ್ನು ಸುಗಮಗೊಳಿಸುವ ಉದ್ದೇಶದಿಂದ ಸಂಚಾರ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಭೆಗಳನ್ನು ನಡೆಸಿ, ಅಗತ್ಯವಿರುವ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವುದರ ಜೊತೆಗೆ, ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹಾಗೂ ಪ್ರತಿ ಕಾಮಗಾರಿಗೆ ಗುಣಮಟ್ಟದ ಪರಿಶೀಲನೆ ಕಡ್ಡಾಯವಾಗಿ ನಡೆಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮಾನ್ಯ ಆಯುಕ್ತರಾದ ಜಗದೀಶ್.ಜಿ ರವರು ಇಂಜಿನೀಯರಿಂಗ್ ವಿಭಾಗದ ಅಧಿಕಾರಿಗಳಿಗೆ ಹಾಗೂ ಗುಣ ನಿಯಂತ್ರಣ ವಿಭಾಗದ ಇಂಜಿನೀಯರ್ ಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

CMIDP ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಕಾಮಗಾರಿ (CMIDP) ಹಾಗೂ ವಿಶೇಷ ಮೂಲಭೂತ ಸೌಕರ್ಯ ಕಲ್ಪಿಸುವ (SIP) ಸಂಬಂಧಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಲು ಹಾಗೂ ಕೈಗೊಳ್ಳುವ ಪ್ರತಿ ಕಾಮಗಾರಿಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಪ್ರತಿ ವಾರ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು

ರಸ್ತೆ ಡಾಂಬರೀಕರಣ ಕೈಗೊಳ್ಳಲು ಸೂಚನೆ

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಆ ರಸ್ತೆಯಲ್ಲಿ ಕೈಗೊಳ್ಳಲಾಗುತ್ತಿರುವ ಇನ್ನಿತರೆ ಸಿವಿಲ್ ಕಾಮಗಾರಿಗಳು ಸಂಪೂರ್ಣವಾಗಿ ಪೂರ್ಣಗೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇನ್ನಿತರೆ ಸಿವಿಲ್ ಕಾಮಗಾರಿಗಳು ಬಾಕಿ ಇರುವಾಗ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳುವುದರಿಂದ ಕೈಗೊಳ್ಳುವ ರಸ್ತಗೆ ಕಾಮಗಾರಿ ಹಾಳಾಗುವುದರಿಂದ ಹಾಗೂ ಈ ರೀತಿ ರಸ್ತೆ ಹಾಳಾಗುವುದರಿಂದ ಪುನಃ ಈ ರಸ್ತೆ ಕಾಮಗಾರಿ ಕೈಗೊಳ್ಳಬೇಕಾಗುತ್ತದೆ.

ಇದರಿಂದ ಅನಗತ್ಯ ಸಾರ್ವಜನಿಕ ಹಣ ದುಂದು ವೆಚ್ಚವಾಗುವುದರ ಜೊತೆಗೆ ಸಾರ್ವಜನಿಕ ಸಂಚಾರ ಸೇರಿದಂತೆ ಇನ್ನಿತರೆ ಅನಾನುಕೂಲತೆಗಳು ಉಂಟಾಗುವುದರಿಂದ ರಸ್ತೆ ಡಾಂಬರೀಕರಣ ಕೈಗೊಳ್ಳುವ ಮುಂಚೆ ಮೊದಲು ಆ ರಸ್ತೆಯಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಲು ಉದ್ದೇಶಿರುವ ಇತರೆ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಂಡ ನಂತರ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರತಿಯೊಂದು ಕಾಮಗಾರಿಯಲ್ಲೂ ಗುಣಮಟ್ಟದ ಪರಿಶೀಲನೆ ಕಡ್ಡಾಯ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳುವ ರಸ್ತೆ ಕಾಮಗಾರಿ, ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ, ಕಟ್ಟಡ ಕಾಮಗಾರಿ, ಇನ್ನಿತರೆ ನಿರ್ವಹಣಾ ಕಾಮಗಾರಿ ಸೇರಿದಂತೆ ಪ್ರತಿಯೊಂದು ಕಾಮಗಾರಿಯಲ್ಲೂ ಗುಣಮಟ್ಟದ ಪರಿಶೀಲನೆಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಬೇಕು. ಗುಣಮಟ್ಟ ನಿಯಂತ್ರಣ ವಿಭಾಗದ ತಂಡವು ಕೈಗೊಳ್ಳುವ ಎಲ್ಲಾ ಕಾಮಗಾರಿಗಳನ್ನು ನಿರಂತರವಾಗಿ ಪರಿಶೀಲಿಸಿ, ಗುಣಮಟ್ಟದಲ್ಲಿ ಕಂಡುಬರುವ ಲೋಪದೋಷಗಳ ಕುರಿತು ಸಮಗ್ರ ವರದಿಯನ್ನು ಸಲ್ಲಿಸಲು ಗುಣನಿಯಂತ್ರಣ ವಿಭಾಗದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Potholes Deadline: ಇಂಜಿನಿಯರ್ ಗಳ ಖುದ್ದು ಮೇಲ್ವಿಚಾರಣೆ ಕಡ್ಡಾಯ

ಯಾವುದೇ ಕಾಮಗಾರಿ ಆರಂಭಿಸುವ ಮುನ್ನ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುಣಮಟ್ಟ ನಿಯಂತ್ರಣ ತಂಡಕ್ಕೆ ಮುಂಚಿತವಾಗಿ ಮಾಹಿತಿ ನೀಡಿ, ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಅಗತ್ಯ ಅವಕಾಶ ಕಲ್ಪಿಸಬೇಕು. ಕಾಮಗಾರಿಗಳಲ್ಲಿ ನಿರ್ಮಾಣ ಕೌಶಲ್ಯ ಹಾಗೂ ಕಾರ್ಯನೈಪುಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ, ಸಂಬಂಧಿಸಿದ ಎಲ್ಲಾ ಇಂಜಿನೀಯರ್ ಗಳು ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಖುದ್ದು ಹಾಜರಿದ್ದು, ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ ಮೇಲ್ವಿಚಾರಣೆ ನಡೆಸಬೇಕು ಗುಣಮಟ್ಟ ಹಾಗೂ ಪ್ರಮಾಣ ಎರಡರಲ್ಲೂ ಶೇ.100ರಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಭಿಯಂತರರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಆಯುಕ್ತರು ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+