ವಿದ್ಯುತ್ ಕೊರತೆ : ಬೆಂಗಳೂರಲ್ಲಿ 1 ಗಂಟೆ ಲೋಡ್ ಶೆಡ್ಡಿಂಗ್?
ಬೆಂಗಳೂರು, ಅಕ್ಟೋಬರ್ 23 : ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗಿದ್ದು, ನಗರ ಪ್ರದೇಶಗಳಲ್ಲಿಯೂ ಲೋಡ್ ಶೆಡ್ಡಿಂಗ್ ಆರಂಭವಾಗುವ ನಿರೀಕ್ಷೆ ಇದೆ.
ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಬೆಂಗಳೂರು ನಗರದಲ್ಲಿಯೂ ರಾತ್ರಿ ವೇಳೆ 1 ಗಂಟೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ಬೆಸ್ಕಾಂ ಮುಂದಿದೆ. ಬುಧವಾರ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.
ಕಲ್ಲಿದ್ದಲು ಕೊರತೆಯಿಂದಾಗಿ ಸ್ಥಗಿತಗೊಂಡಿದ್ದ ರಾಯಚೂರು ಶಾಖೋತ್ಪನ್ನ ಕೇಂದ್ರದ ಎರಡು ಘಟಕಗಳು ಸೋಮವಾರ ಕಾರ್ಯಾರಂಭ ಮಾಡಿವೆ. 210 ಮತ್ತು 250 ಮೆಗಾವಾಟ್ ಸಾಮರ್ಥ್ಯದ ಎರಡು ಘಟಕಗಳು ವಿದ್ಯುತ್ ಉತ್ಪಾನೆ ಆರಂಭಿಸಿವೆ.
ರಾಯಚೂರಿನಲ್ಲಿನ 8 ಘಟಕಗಳ ಪೈಕಿ 4 ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಸಾಕಾಗುವಷ್ಟ ಅಂದರೆ ದಿನಕ್ಕೆ 10 ಸಾವಿರ ಟನ್ ಕಲ್ಲಿದ್ದಲು ಬರುತ್ತಿದೆ ಎಂದು ಆರ್‌ಟಿಪಿಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....

ಬುಧವಾರ ಸಭೆ
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಮುಖ್ಯಮಂತ್ರಿ ಮತ್ತು ಇಂಧನ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, 'ಕೇಂದ್ರ ಸರ್ಕಾರ ಸಾಕಷ್ಟ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ಮಾಡುತ್ತಿಲ್ಲ. ಹಿರಿಯ ಅಧಿಕಾರಿಗಳ ಜೊತೆ ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದೇನೆ. ಬೆಂಗಳೂರಿನಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಕುರಿತು ಬುಧವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ಲೋಡ್ ಶೆಡ್ಡಿಂಗ್
ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಲೋಡ್ ಶೆಡ್ಡಿಂಗ್ ಆರಂಭಿಸಲಾಗಿದೆ. ಪೀಕ್ ಅವರ್‌ನಲ್ಲಿ ಬೆಸ್ಕಾಂಗೆ ದಿನಕ್ಕೆ 4200 ಮೆಗಾವಾಟ್ ವಿದ್ಯುತ್ ಅಗತ್ಯವಿದೆ. ಕೆಎಸ್‌ಎಲ್‌ಡಿಸಿ 3800 ರಿಂದ 4000 ಮೆಗಾವಾಟ್ ವಿದ್ಯುತ್ ಲಭ್ಯವಿದೆ ಎಂದು ಹೇಳುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳಿದ್ದಾರೆ.

ಪಾವಗಡ ಸೋಲಾರ್ ಪಾರ್ಕ್
ಕಳೆದ ಒಂದು ವಾರದಿಂದ ಕಲ್ಲಿದ್ದಲು ಕೊರತೆಯಿಂದಾಗಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದರಿಂದಾಗಿ ವಿದ್ಯುತ್ ಕೊರತೆ ಉಂಟಾಗಿದೆ. ಪಾವಗಡ ಸೋಲಾರ್ ಪಾರ್ಕ್‌ನಲ್ಲಿ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಆದ್ದರಿಂದ, ಹೆಚ್ಚಿನ ಸಮಸ್ಯೆ ಉಂಟಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿದ್ಯುತ್ ಉತ್ಪಾದನೆ ಆರಂಭ
ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 2 ಮತ್ತು 8ನೇ ಘಟಕ ಸೋಮವಾರ ವಿದ್ಯುತ್ ಉತ್ಪಾದನೆ ಆರಂಭಿಸಿವೆ. ಬಳ್ಳಾರಿ ಶಾಖೋತ್ಪನ್ನ ಕೇಂದ್ರ ಸಹ ಉತ್ಪಾದನೆ ಆರಂಭಿಸಿದೆ. ಕಲ್ಲಿದ್ದಲು ಪೂರೈಕೆಗಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರೆದ ಪತ್ರಕ್ಕೆ ಸರ್ಕಾರ ಸ್ಪಂದಿಸಿದೆ. ಈ ವಾರದಲ್ಲಿ ಕಲ್ಲಿದ್ದಲು ಪೂರೈಕೆ ಆಗುವ ಸಾಧ್ಯತೆ ಇದ್ದು, ಕಲ್ಲಿದ್ದಲು ಬಂದರೆ ವಿದ್ಯುತ್ ಕೊರತೆ ನೀಗಲಿದೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral










Click it and Unblock the Notifications