ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿ.4ರವರೆಗೆ ವಿದ್ಯುತ್ ಕಡಿತ

|
Google Oneindia Kannada News

ಬೆಂಗಳೂರು, ಡಿಸೆಂಬರ್ 1: ಈಗಾಗಲೇ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಶೀತಗಾಳಿಯಿಂದ ಹೈರಾಣಾಗಿರುವ ರಾಜಧಾನಿ ಬೆಂಗಳೂರು ನಗರದ ಜನರಿಗೆ ಬೆಸ್ಕಾಂ ಮತ್ತೊಂದು ಶಾಕ್ ನೀಡಿದೆ.

ಹಲವು ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ಇರುವುದರಿಂದ ಸತತ ನಾಲ್ಕು ದಿನಗಳ ಕಾಳ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ತಿಳಿಸಿದೆ. ಪವರ್​ ಕಟ್ ಸಮಸ್ಯೆಗೆ ತಕ್ಕಂತೆ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ. ಬೆಸ್ಕಾಂ ಮನವಿಗೆ ಸಹಕರಿಸಬೇಕು ಎಂದು ನಿಗಮ ಕೇಳಿಕೊಂಡಿದೆ. ವಿದ್ಯುತ್ ಸಂಪರ್ಕ ಕಡಿತಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಧಾನಿ ಬೆಂಗಳೂರಿನ ಜನರಿಗೆ ಬೆಸ್ಕಾಂ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಡಿಸೆಂಬರ್ 1ರಿಂದ ಡಿಸೆಂಬರ್ 4ರವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲು ಬೆಸ್ಕಾಂ ನಿರ್ಧಾರ ಮಾಡಿದೆ. ಹೀಗಾಗಿ ಗೃಹಿಣಿಯರು ಬೆಳಗ್ಗೆಯೇ ಅಡುಗೆ ಕೆಲಸವನ್ನು ಮುಗಿಸಿಕೊಳ್ಳುವುದು ಸೂಕ್ತ.

bengaluru power cut: bescom announces power cut in bengaluru from december 1 to december 4

ಈಗಾಗಲೇ ಕಳೆದ ಹಲವು ದಿನಗಳಿಂದ ನಿರ್ವಹಣೆ ಹಾಗೂ ಕಾಮಗಾರಿ ನೆಪದಲ್ಲಿ ಬೆಸ್ಕಾಂ ಬೆಂಗಳೂರಿನ ದಕ್ಷಿಣ ಪಶ್ಚಿಮ ಪೂರ್ವ ಹಾಗೂ ಉತ್ತರ ವಲಯದಲ್ಲಿ ವಿದ್ಯುತ್ ಸಂಪರ್ಕವನ್ನು ಆಗಾಗ ಕಡಿತ ಮಾಡುತ್ತಾ ಬಂದಿದೆ. ಈಗ ಮತ್ತೆ ನಿರ್ವಹಣೆ ಹಾಗೂ ಕಾಮಗಾರಿ ನೆಪದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲು ಬೆಸ್ಕಾಂ ಮುಂದಾಗಿದೆ.

ಡಿಸೆಂಬರ್ 1ರಿಂದ ಡಿಸೆಂಬರ್ 4ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ.

ಹೀಗಾಗಿ ಡಿಸೆಂಬರ್ ರಿಂದ ಡಿಸೆಂಬರ್ 4ರವರೆಗೆ ನೀವು ವಿದ್ಯುತ್ ಬಳಸಿಕೊಂಡು ಯಾವುದೇ ಕೆಲಸ ಮಾಡಬೇಕು ಅಂದುಕೊಂಡರೂ ಬೆಳಗ್ಗೆ ಹತ್ತು ಗಂಟೆಯ ಮುಂಚೆ ಅಥವಾ ಸಂಜೆ 5 ಗಂಟೆಯ ನಂತರ ಮಾಡಿಕೊಳ್ಳುವುದು ಸೂಕ್ತ. ಇನ್ನು ಯಾವ ದಿನ, ಯಾವ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಲಿದೆ ಎನ್ನುವ ಮಾಹಿತಿ ಕೆಳಗಿನಂತಿದೆ.

bengaluru power cut: bescom announces power cut in bengaluru from december 1 to december 4

* ಡಿಸೆಂಬರ್ 1: ವಿನಾಯಕ ಲೇಔಟ್, ನಾಗರಭಾವಿ 9ನೇ ಬ್ಲಾಕ್, ವಿದ್ಯಾಮಾನ ನಗರ, ಹೊಸಹಳ್ಳಿ, ಮಾಗಡಿ ರಸ್ತೆ, ವಿಘ್ನೇಶ್ವರ ನಗರ, ವಿನಾಯಕನಗರ, ಕುಮಾರಸ್ವಾಮಿ ಲೇಔಟ್ ಮತ್ತು ಜರಗನಹಳ್ಳಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

* ಡಿಸೆಂಬರ್ 2: ಚುಂಚಘಟ್ಟ, ಬೀರೇಶ್ವರ ನಗರ ಮತ್ತು ಕೋಣನಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ.

* ಡಿಸೆಂಬರ್ 3: ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾಮಗಾರಿಗಳ ಹಿನ್ನೆಲೆ ಇಸ್ರೋ ಲೇಔಟ್, ಕತ್ರಿಗುಪ್ಪೆ ಮುಖ್ಯರಸ್ತೆ ಮತ್ತು ಬನಶಂಕರಿ 3ನೇ ಹಂತದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಬೆಸ್ಕಾಂ ಮುಂದಾಗಿದೆ.

* ಡಿಸೆಂಬರ್ 4: ಪದ್ಮನಾಭನಗರ, ಹೊಸಕೆರೆಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.

ಸಾರ್ವಜನಿಕರ ಪರದಾಟ
ಬೆಂಗಳೂರಿನ ಜನರಿಗೆ ಪವರ್ ಕಟ್ ಸಮಸ್ಯೆ ಹೊಸದಲ್ಲ. ಕಳೆದ ಹಲವು ದಿನಗಳಿಂದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರುತ್ತಿದೆ. ಇದರಿಂದ ಜನರಿಗೆ ಕಷ್ಟವಾಗುತ್ತಿದೆ. ಬೆಸ್ಕಾಂನ ಸಾಮಾಜಿಕ ಜಾಲತಾಣಗಳಲ್ಲಂತೂ ಪೂರ್ತಿಯಾಗಿ ದಿನನಿತ್ಯ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎನ್ನುವ ಮಾಹಿತಿಯೇ ತುಂಬಿರುತ್ತದೆ.

ಅದರಲ್ಲೂ ಕೊರೊನಾ ಕಾರಣದಿಂದ ಹೆಚ್ಚಿನ ಜನರು ಮನೆಯಿಂದಲೇ ಕೆಲಸ ನಿರ್ವಹಿಸುತ್ತಿರುವವರಿಗೆ ವಿದ್ಯುತ್ ಕಡಿತ ಸಮಸ್ಯೆ ಹೆಚ್ಚಿನ ತೊಂದರೆಯಾಗುತ್ತದೆ. ಮನೆಯಲ್ಲಿ ವಿದ್ಯುತ್ ಇಲ್ಲದಿದ್ದಲ್ಲಿ ವೈಫೈ ಸಿಗುವುದಿಲ್ಲ. ಅಲ್ಲದೇ ಲ್ಯಾಪ್​ಟಾಪ್ ಸೇರಿದಂತೆ ಇತರ ವಸ್ತುಗಳನ್ನು ಹೆಚ್ಚಿನ ಸಮಯ ಬಳಸುವುದು ಕಷ್ಟಕರವಾಗುತ್ತದೆ.

Recommended Video

ಸರ್ಕಾರದ ನಿರ್ಧಾರ ಎನ್ ಗೊತ್ತಾ? | Oneindia Kannada

English summary
The Bengaluru Electricity Supply Company Limited (BESCOM) has announced that several areas in Bengaluru city will face interruptions in power supply from December 1 To December 4.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X