Bengaluru Power Cut: ಹೆಬ್ಬಾಳ & ಆರ್‌ಟಿ ನಗರ ಸೇರಿ 85 ಭಾಗದಲ್ಲಿ ಬುಧವಾರ ಪವರ್ ಕಟ್!
Bengaluru Power Cut: ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆಯಲ್ಲಿ ಮಹತ್ವದ ವ್ಯಾತ್ಯಾಸವಾಗಲಿದೆ ಎಂದು ಬೆಸ್ಕಾಂ ಹೇಳಿದೆ. ಒಂದಲ್ಲ ಎರಡಲ್ಲ ಬೆಂಗಳೂರಿನ ಸುಮಾರು 80ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಭಾರೀ ವ್ಯತ್ಯಾಸವಾಗಲಿದೆ ಎಂದು ಹೇಳಲಾಗಿದೆ. ಬೆಸ್ಕಾಂ ವಿದ್ಯುತ್ ಉಪ ಕೇಂದ್ರದಲ್ಲಿ ನಿರ್ವಹಣೆಯ ಕೆಲಸ ನಡೆಯುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ದಿನವಿಡೀ ವ್ಯತ್ಯಾಸವಾಗಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ಯಾವ ಭಾಗದಲ್ಲಿ ಹಾಗೂ ಯಾವಾಗ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆ ಕೇಂದ್ರದಲ್ಲಿ ಅಥವಾ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಇದೆ. ಹೀಗಾಗಿ 220/66/11 ಕೆವಿ ಹೆಬ್ಬಾಳ ಉಪಕೇಂದ್ರಕ್ಕೆ ಒಳಪಡುವ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 11ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ಭಾರೀ ವ್ಯತ್ಯಾಸವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಜುಲೈ 30 (ಬುಧವಾರ) ರಂದು ಬೆಂಗಳೂರಿನ ಆರ್‌ಟಿ ನಗರ, ಹೆಬ್ಬಾಳ ಹಾಗೂ ಸಂಜಯ ನಗರ ಸೇರಿದಂತೆ ಹಲವು ಭಾಗದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ. ಕೆಪಿಟಿಸಿಎಲ್‌ನಿಂದ ತುರ್ತು ನಿರ್ವಹಣೆಯ ತುರ್ತು ಕಾಮಗಾರಿಯ ಕಾರಣಕ್ಕೆ ವಿದ್ಯುತ್ ವ್ಯತ್ಯಾಸವಾಗುತ್ತಿದೆ ಎಂದು ಹೇಳಲಾಗಿದೆ. ಎಲ್ಲೆಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ ಎನ್ನುವ ಮಾಹಿತಿ ನೋಡೋಣ.
ವಿದ್ಯುತ್ ಪೂರೈಕೆ ವ್ಯತ್ಯಾಸವಾಗಲಿರುವ ಪ್ರದೇಶಗಳು: ಬೆಂಗಳೂರಿನ ಪ್ರಮುಖ ಪ್ರದೇಶದಲ್ಲಿ ಬುಧವಾರದಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ. ಗಂಗಾನಗರ, ಲಕ್ಷ್ಮಯ್ಯ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್, ಆರ್.ಬಿ.ಐ ಕಾಲೋನಿ, ಸಿಪಿಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ಜಡ್ಜಸ್ ಕಾಲೋನಿ, 80 ಅಡಿ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪಾರ್ಟ್ಮೆಂಟ್, ಜೈನ್ ಅಪಾರ್ಟ್ಮೆಂಟ್.
ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ #Bescom#WhatsappHelplinenumbers pic.twitter.com/fhTgcnMkRk
— Namma BESCOM | ನಮ್ಮ ಬೆಸ್ಕಾಂ (@NammaBESCOM) July 28, 2025
ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ದಿನ್ನೂರ್ ಮುಖ್ಯ ರಸ್ತೆ, ಆರ್‌ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್ಮೆಂಟ್, ಗಾಯತ್ರಿ ಅಪಾರ್ಟ್ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್. ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್ ಪ್ರದೇಶ, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ ಹಾಗೂ ವೇಣುಗೋಪಾಲ ಲೇಔಟ್ ಸೇರಿದಂತೆ ವಿವಿಧ ಭಾಗದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.












Click it and Unblock the Notifications