Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಐದು ದಿನ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕರೆಂಟ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಡಿಸೆಂಬರ್ 24ರಿಂದ ಐದು ದಿನ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಡಿಸೆಂಬರ್ 24ರಿಂದ 28ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಯಾವಾಗ ಹಾಗೂ ಸಮಯಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ನೋಡಿ.

ಬುಧವಾರ ಎಲ್ಲೆಲ್ಲಿ ಕರೆಂಟ್ ಕಟ್?: ಬೆಂಗಳೂರಿನ ವಿಜಯನಗರ, ಬಸವೇಶ್ವರ ನಗರ ಸೇರಿ ಹಲವು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಬುಧವಾರ (ಡಿಸೆಂಬರ್ 24) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ 66/11KV ವಿಜಯನಗರ ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಆರ್.ಪಿ.ಸಿ.ಲೇಔಟ್, ಬಿನ್ನಿ ಲೇಔಟ್, ಪ್ರಶಾಂತನಗರ, ಎಂ.ಸಿ.ಲೇಔಟ್, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ನಾಗರಬಾವಿ, ಸಿದ್ದಯ್ಯ ಪುರಾಣಿಕ್ ರಸ್ತೆ, ಕೆ.ಹೆಚ್.ಬಿ.ಕಾಲೋನಿ, ಮಾಗಡಿ ಮುಖ್ಯರಸ್ತೆ, ಹೆಚ್.ವಿ.ಆರ್.ಲೇಔಟ್, ದಾಸರಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದ ಎಂದು ತಿಳಿಸಿದೆ.
4 ದಿನ ಸಂಜೆ 6ರ ವರೆಗೆ ವಿದ್ಯುತ್ ಕಡಿತ: ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಡಿಸೆಂಬರ್ 25ರಿಂದ 28ರ ವರೆಗೂ ನಗರದ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
66 ಕೆವಿ ಸರ್ಜಾಪುರ-ಅತ್ತಿಬೆಲೆ ಸಿಂಗಲ್-ಸಕ್ರ್ಯೂಟ್ ಲೈನ್ ಅನ್ನು ಹೈ-ಟೆಂಪರೇಚರ್ ಲೋ-ಸಾಗ್ ಕಂಡಕ್ಟರ್‌ಗಳೊಂದಿಗೆ ಬದಲಾಯಿಸುವುದು ಮತ್ತು 220/66/11 ಕೆವಿ ಸರ್ಜಾಪುರ ನಿಲ್ದಾಣದಿಂದ ಎಚ್‍ಟಿಎಲ್‍ಎಸ್ ಬಳಸಿ ಎರಡನೇ ಸರ್ಕ್ಯೂಟ್‍ನ ಸ್ಟ್ರಿಂಗ್‍ನಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲದೆ ಎಂದು ಬೆಸ್ಕಾಂ ತಿಳಿಸಿದೆ.
66/11 ಕೆವಿ ಅತ್ತಿಬೆಲೆ ವಲಯದ ಯಡ್ವನಹಳ್ಳಿ, ಇಚ್ಚಂಗೂರು, ವಡ್ಡರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಳಗಾರನಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಟೌನ್, ಮಾಯಸಂದ್ರ, ದಾಸನಾಪುರ, ಬಲ್ಲೂರು, ಕಬಳಿಪುರ, ಚಿಕ್ಕನಹಳ್ಳಿ, ಇಂಡಿಬೆಲೆ, ಹಾರೋಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
66/11 ಕೆವಿ ಆನೇಕಲ್ ವಲಯದ ಆನೇಕಲ್ ಟೌನ್, ಕಾವಲುಹೊಸಹಳ್ಳಿ, ಗೌರೇನಹಳ್ಳಿ, ಹಲ್ದೇನಹಳ್ಳಿ, ಹೊಂಪಲಗಟ್ಟಾ, ಚೂಡೇನಹಳ್ಳಿ, ಹೊನ್ನಕಲಶಾಪುರ, ಬ್ಯಾಗಡದೇನಹಳ್ಳಿ, ಕಾಡ ಅಗ್ರಹಾರ, ಚಿಕ್ಕಹಾಗಡೆ, ದೊಡ್ಡಹಾಗಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹರಿಸಬೇಕೆಂದು ಮನವಿ ಮಾಡಿದೆ. ಅಲ್ಲದೆ, ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆಯೋ ಅಂತಹ ಭಾಗಗಳ ನಿವಾಸಿಗಳು ಮುಂಚಿತವಾಗಿ ಚಾರ್ಜಿಂಗ್ ಸಾಧನಗಳನ್ನು ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಅಂತಲೂ ಸಲಹೆ ನೀಡಿದೆ.
ಮಂಗಳವಾರ ಎಲ್ಲೆಲ್ಲಿ ವಿದ್ಯುತ್ ಸ್ಥಗಿತ?: ಕೆಪಿಟಿಸಿಎಲ್ ವತಿಯಿಂದ ಪ್ರಮುಖ ಪ್ರಸರಣ ಮಾರ್ಗಗಳು ಮತ್ತು ಉಪಕೇಂದ್ರಗಳಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳಮ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಇಂದು (ಡಿಸೆಂಬರ್ 23) ಬೆಂಗಳೂರಿನ ದಕ್ಷಿಣ, ಪಶ್ಚಿಮ ಮತ್ತು ಉತ್ತರ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications