Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಡಿಸೆಂಬರ್ 29ರಂದು ಇರೋದಿಲ್ಲ ಕರೆಂಟ್
Bengaluru Power Cut: ವಿದ್ಯುತ್ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕರೆಂಟ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಡಿಸೆಂಬರ್ 29ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಡಿಸೆಂಬರ್ 29ರ ಸೋಮವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಯಾವಾಗ ಹಾಗೂ ಸಮಯಗಳ ಮಾಹಿತಿ ಇಲ್ಲಿದೆ ನೋಡಿ.

ಕೆಪಿಸಿಟಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಕಾರಣ 66/11 ಕೆವಿ ರೆಮೋ ಮತ್ತು 66/11 ಕೆವಿ ಕೆ.ಎಸ್.ಟಿ ಬಂಡೇಮಠ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸೋಮವಾರ ಎಲ್ಲೆಲ್ಲಿ ಕರೆಂಟ್ ಕಟ್?: 66/11 ರೆಮೋ ವಿದ್ಯುತ್ ಕೇಂದ್ರದ ಬಾಪೂಜಿ ನಗರ, ಕವಿತಾ ಲೇಔಟ್, ರಂಗನಾಥ ಕಾಲೋನಿ, ಬ್ಯಾಟರಾಯನಪುರ ಐಯ್ಯಣ್ಣಶೆಟ್ಟಿ ಲೇಔಟ್, ಗಣಪತಿನಗರ, ಪ್ರೈಡ್ ಅಪಾರ್ಟ್ಮೆಂಟ್, ದೀಪಾಂಜಲಿ ನಗರ, ಪಟೇಲ್ ಪುಟ್ಟಯ್ಯ ಇಂಡಸ್ಟ್ರೀಯಲ್ ಏರಿಯಾ, ಬಿ.ಹೆಚ್.ಇ.ಎಲ್, ಮುತ್ತಾಚಾರಿ ಇಂಡಸ್ಟ್ರಿಯಲ್ ಏರಿಯಾ, ಜ್ಯೋತಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಗಂಗೊಂಡನಹಳ್ಳಿ, ವಿನಾಯಕ ಲೇಔಟ್, ಮೆಟ್ರೋ ಲೇಔಟ್, ನಾಯಂಡಹಳ್ಳಿ, ಬ್ಯಾಟರಾಯನಪುರ, ಮೈಸೂರು ರಸ್ತೆ, ಶೋಭಾ ಟೆಂಟ್ ರೋಡ್, ಗುಡ್ಡದಹಳ್ಳಿ ಎಕ್ಸ್ಟೆನ್ಶನ್, ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್, ಆರ್ಆರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲದೆ ಎಂದು ತಿಳಿಸಿದೆ.
66/11 ಕೆವಿಕೆಎಸ್ಟಿ ಬಂಡೇಮಠ ವಿದ್ಯುತ್ ಕೇಂದ್ರದ ನ್ಯೂ ಕೆಹೆಚ್ಬಿ ಕಾಲೋನಿ, ಬಂಡೇಮಠ, ಕೆಎಸ್ಟಿ, ಅರುಂಧತಿ ನಗರ, ಹೊಯ್ಸಳ ಸರ್ಕಲ್, ವಲಗೇರಹಳ್ಳಿ, ಚಿಕ್ಕನಹಳ್ಳಿ, ಗಾಂಧಿನಗರ, ಹುಣಸೇಮರದ ಪಾಳ್ಯ, ಬೈರೋಹಳ್ಳಿ, ಹೊಸಪಾಳ್ಯ, ಚಲ್ಲಘಟ್ಟ, ಬೆಟ್ಟನಪಾಳ್ಯ, ರಾಮೋಹಳ್ಳಿ, ಮಾಲಿಗೊಂಡನಹಳ್ಳಿ, ಗೇರುಪಾಳ್ಯ ಇಂಡಸ್ಟ್ರಿಯಲ್ ಏರಿಯಾ, ಕೊಮ್ಮಘಟ್ಟ, ಕೃಷ್ಣ ಸಾಗರ, ಮಾರಗೊಂಡನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ.
ಭಾನುವಾರ ಎಲ್ಲೆಲ್ಲಿ ಪವರ್ ಕಟ್?: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿಸೆಂಬರ್ 28ರಂದು ಬೆಳಗ್ಗೆ 9ರಿಂದ 12 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್ಮೆಂಟ್, 8ನೇ ಮೈಲಿ ರಸ್ತೆ, ರಾಮಯ್ಯ ಲೇಔಟ್, ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ವಿಜಯಲಕ್ಷ್ಮಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಅಂದಾನಪ್ಪ ಲೇಔಟ್, ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, ಹೆಸರಘಟ್ಟ ಮುಖ್ಯ ರಸ್ತೆ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್ಕ್ಲೇವ್, ಬೈರವೇಶ್ವರ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications