Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಡಿಸೆಂಬರ್ 27, 28ರಂದು ಇರೋದಿಲ್ಲ ಕರೆಂಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕರೆಂಟ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಡಿಸೆಂಬರ್ 27, 28ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಡಿಸೆಂಬರ್ 27, 28ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಯಾವಾಗ ಹಾಗೂ ಸಮಯಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.

ಶನಿವಾರ ಎಲ್ಲೆಲ್ಲಿ ಕರೆಂಟ್ ಕಟ್?: 220/66/11 kV ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆ ಈ ಕೆಳಕಂಡ ಪ್ರದೇಶಗಳಲ್ಲಿ ಡಿಸೆಂಬರ್ 27ರ ಶನಿವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಅಲ್ಲದೆ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 1ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಕ್ರಾಸ್, ಸ್ಲಮ್ ರಸ್ತೆ, ಅನು ಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಜನರಲ್ ಮೆಟಲ್ ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, ವೈಷ್ಣವಿ ಮಾಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಗೃಹಲಕ್ಷ್ಮಿ ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ ಹಾಗೂ ಸುತ್ತಮುತ್ತಲಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.
ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡಾವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ, ಪೀಣ್ಯ 4 ನೇ ಹಂತ, 4ನೇ ಮುಖ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಾಹಿತಿ ನೀಡಿದೆ.
ಎರಡು ದಿನ ವಿದ್ಯುತ್ ವ್ಯತ್ಯಯ: ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಈ ಕೆಳಗೆ ನೀಡಲಾಗಿರವ ಪ್ರದೇಶಗಳಲ್ಲಿ ಡಿಸೆಂಬರ್ 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಕೆಎಂಎಫ್ ಪಶುಸಂಗೋಪನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಅಲ್ಲದೆ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ.
ಬೆಸ್ಕಾಂ ಸಲಹೆ ಏನು?: ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಚಿತವಾಗಿ ಚಾರ್ಜಿಂಗ್ ಸಾಧನಗಳನ್ನು ಜಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದೆ.












Click it and Unblock the Notifications