Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಡಿಸೆಂಬರ್ 28 ಮತ್ತು 29ರಂದು ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕರೆಂಟ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಡಿಸೆಂಬರ್ 28 ಮತ್ತು 29ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಭಾನುವಾರ, ಸೋಮವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಯಾವಾಗ ಹಾಗೂ ಸಮಯಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ

ಎಷ್ಟು ಗಂಟೆ ಪವರ್ ಕಟ್?: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿಸೆಂಬರ್ 28 ಮತ್ತು 29ರಂದು ಬೆಳಗ್ಗೆ 9ರಿಂದ 12 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್ಮೆಂಟ್, 8ನೇ ಮೈಲಿ ರಸ್ತೆ, ರಾಮಯ್ಯ ಲೇಔಟ್, ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ವಿಜಯಲಕ್ಷ್ಮಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಅಂದಾನಪ್ಪ ಲೇಔಟ್, ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, ಹೆಸರಘಟ್ಟ ಮುಖ್ಯ ರಸ್ತೆ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್ಕ್ಲೇವ್, ಬೈರವೇಶ್ವರ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ. ಅಲ್ಲದೆ ಯಾವೆಲ್ಲಾ ಭಾಗಗಳಲ್ಲಿ ಕರೆಂಟ್ ಆಗಲಿದೆಯೋ ಆ ಪ್ರದೇಶಗಳ ನಿವಾಸಿಗಳು ಮುಂಚಿತವಾಗಿ ಚಾರ್ಜಿಂಗ್ ಸಾಧನಗಳನ್ನು ಜಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ.
ಇಂದು ಎಲ್ಲೆಲ್ಲಿ ಕರೆಂಟ್ ಕಟ್?: ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಈ ಕೆಳಗೆ ನೀಡಲಾಗಿರವ ಪ್ರದೇಶಗಳಲ್ಲಿ ಡಿಸೆಂಬರ್ 27ರ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಕೆಎಂಎಫ್ ಪಶುಸಂಗೋಪನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಅಲ್ಲದೆ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications