Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಮಂಗಳವಾರ, ಬುಧವಾರ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಜುಲೈ 22 ಮತ್ತು 23ರಂದು ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಮಂಗಳವಾರ ಮತ್ತು ಬುಧವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ವಿದ್ಯುತ್ ಕಡಿತಗೊಳ್ಳುವ ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್, ಬ್ಯಾಟರಿ, ಲ್ಯಾಪ್ ಟಾಪ್ ಸೇರಿದಂತೆ ಇನ್ನಿತರ ವಿದ್ಯುತ್‌ನಿಂದ ಚಾರ್ಜ್ ಮಾಡಬಲ್ಲ ಉಪಕರಣಗಳನ್ನು ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 22ರ ಮಂಗಳವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಮಂಗಳವಾರ ಎಲ್ಲೆಲ್ಲಿ ಕರೆಂಟ್ ಕಟ್?: ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಮಂಜುನಾಥ್ ನಗರ.
ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್, ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, ಹಾವನೂರು ಎಕ್ಸ್ಟೆನ್, ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬುಧವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: 66/11 ಕೆ.ವಿ. ಸಹಕಾರ ನಗರ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 23ರ ಬುಧವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 2:30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾ ತಿಳಿಸಿದೆ.
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ.
ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸೂರ್ಯೋದಯ ನಗರ 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್ ರಸ್ತೆ, ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ಪೂರೈಕೆಯಲ್ಲಿ ಕಡಿತ ಉಂಟಾಗುವ ಪ್ರದೇಶಗಳಲ್ಲಿ ವಾಸ ಮಾಡುವ ನಿವಾಸಿಗಳು ಮೊಬೈಲ್ ಫೋನ್, ಲ್ಯಾಪ್‌ಟ್ಯಾಪ್, ಬ್ಯಾಟರಿಗ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ ಸಾಧನಗಳನ್ನ ಮುಂಚಿತವಾಗಿ ಚಾರ್ಜ್ ಮಾಡಿಕೊಳ್ಳಲು ಹಾಗೂ ಈ ಸಮಯದಲ್ಲಿ ವಿದ್ಯುತ್ ಉಪಕರಣಗಳನ್ನು ಅವಲಂಬಿಸುವುದನ್ನ ತಪ್ಪಿಸುವಂತೆ ಬೆಸ್ಕಾಂ ಮುಂಜಾಗ್ರತಾ ಕ್ರಮವಾಗಿ ಸೂಚನೆ ನೀಡಿದೆ.












Click it and Unblock the Notifications