Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಅಕ್ಟೋಬರ್ 8-10ರ ವರೆಗೆ ವಿದ್ಯುತ್ ಕಡಿತ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಅಕ್ಟೋಬರ್ 8ರಿಂದ 10ರ ವರೆಗೆ ಮೂರು ದಿನ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಮೂರು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಕ್ಟೋಬರ್ 8ರಿಂದ 10, 2025ರ ವರೆಗೆ ವಿದ್ಯುತ್ ಕಡಿತ ಆಗಗಲಿದೆ ಎಂದು ತಿಳಿಯಿರಿ.

ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ನಗರದಾದ್ಯಂತ ವಿದ್ಯುತ್ ಸರಬರಾಜನ್ನು ಖಚಿತಪಡಿಸಿಕೊಳ್ಳಲು ವಿದ್ಯುತ್ ಕಡಿತ ಮಾಡಲಾಗುತ್ತದೆ. ನಿರ್ವಹಣಾ ಚಟುವಟಿಕೆಗಳಲ್ಲಿ ಪ್ರಸರಣ ಮಾರ್ಗಗಳನ್ನು ನವೀಕರಿಸುವುದು, ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸುವುದು ಮತ್ತು ವಿದ್ಯುತ್ ಗ್ರಿಡ್‌ಗಳ ಬಳಿ ಸಸ್ಯವರ್ಗವನ್ನು ತೆರವುಗೊಳಿಸುವುದು ಸೇರಿವೆ.
ವಿದ್ಯುತ್ ಕಡಿತದ ಪರಿಣಾಮವು ಬೆಂಗಳೂರು ದಕ್ಷಿಣ ಮತ್ತು ಪೂರ್ವ ವಿಭಾಗಗಳ ವ್ಯಾಪ್ತಿಯ ಹಲವಾರು ನೆರೆಹೊರೆಗಳ ಮೇಲೆ ಬೀರಲಿದೆ. ಹಾಗಾದ್ರೆ ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಬಿನ್ನಿಪೇಟೆ, ವಿಜಯನಗರ, ರಾಜಾಜಿನಗರ, ಬಸವನಗುಡಿ, ಜಯನಗರ, ಕೋರಮಂಗಲ, ಬಿಟಿಎಂ ಲೇಔಟ್, ಇಂದಿರಾನಗರ, ಎಚ್‌ಎಎಲ್, ವೈಟ್‌ಫೀಲ್ಡ್, ಮಾರತ್ತಹಳ್ಳಿ ಹಾಗೂ ಇಲ್ಲಿನ ಸುತ್ತಮುತ್ತಲಿ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇನ್ನು ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಕೊಳ್ಳುವುದು ಉತ್ತಮ ಎಂದು ಸೂಚಿಸಿದೆ.
ಬೆಸ್ಕಾಂ ಸಲಹೆ ಏನು?: ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್, ಬ್ಯಾಟರಿ ಸೇರಿದಂತೆ ಇನ್ನಿತರೆ ವಿದ್ಯುತ್ ಅವಲಂಬಿತ ಉಪಕರಣಗಳನ್ನು ಚಾರ್ಜ್ ಮಾಡಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದೆ. ಗ್ರಾಹಕರು ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಅಂತಲೂ ತಿಳಿಸಿದೆ.
ಮಂಗಳವಾರ ಎಲ್ಲೆಲ್ಲಿ ಕರೆಂಟ್ ಕಟ್?: ಇಂದು 66/11 ಕೆವಿ ಹೆಣ್ಣೂರು ಎಂಯುಎಸ್‍ಎಸ್ 66 ಕೆವಿ ಲೈನ್ ಬೇಗಳು, ತ್ರೈಮಾಸಿಕ ನಿರ್ವಹಣೆಗಾಗಿ ಕೆಪಿಟಿಸಿಎಲ್ ಲೈನ್ ಕ್ಲಿಯರ್ ಪಡೆದಿರುವುದರಿಂದ ವಿದ್ಯುತ್ ಕಡಿತವಾಗಲಿದೆ. ಮಂಗಳವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ 66/11 ಕೆವಿ ಹೆಣ್ಣೂರು ಎಂಯುಎಸ್‍ಎಸ್‌ನ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‍ಕ್ಲೇವ್, ಗ್ರೇಸ್ ಗಾರ್ಡನ್, ಕ್ರೈಸ್ಟ್ ಜಯಂತಿ ಕಾಲೇಜು, ಕೆ. ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‍ಶಿಪ್, ಐಶ್ವರ್ಯ ಎಲ್/ಒ, ಮಾರುತಿ ಟೌನ್‍ಶಿಪ್, ನಾಗರಗಿರಿ ಟೌನ್‍ಶಿಪ್, ಕೆ ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೊತ್ತನೂರು. ಸಿಎಸ್‍ಐ ಗೇಟ್, ಬೈರತಿ ಕ್ರಾಸ್, ಬೈರತಿ ವಿಲೇಜ್, ಗೆದ್ದಲಹಳ್ಳಿ, ಬ್ಲೆಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‍ಮೆಂಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್ ಪ್ರದೇಶಗಳಲ್ಲಿ ಕರೆಂಟ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬಿಎಚ್‌ಕೆ ಇಂಡಸ್ಟ್ರೀಸ್, ವಡ್ಡರಪಾಳ್ಯ, ದೊಡ್ಡಗುಬ್ಬಿ ಕ್ರಾಸ್, ಸಂಗಮ್ ಎನ್ಕ್ಲೇವ್, ಬೈರತಿ ಬಂಡೆ, ಮಂಜಿನಾಥ ದೇವಸ್ಥಾನ, ಪ್ರಕಾಶ್ ಗಾರ್ಡನ್, ಕ್ರಿಸ್ಟಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ತಿಳಿಸಿತ್ತು.












Click it and Unblock the Notifications