Bengaluru Power Cut: ಬೆಂಗಳೂರಿನಲ್ಲಿ ಸೆಪ್ಟೆಂಬರ್ 15ರಿಂದ 29ರ ವರೆಗೆ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಸೆಪ್ಟೆಂಬರ್ 15ರಿಂದ 29ರ ವರೆಗೆ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಈ ಭಾಗಗಳಲ್ಲಿ ಸೆಪ್ಟೆಂಬರ್ 15ರಿಂದ 29ರ ವರೆಗೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ವಿದ್ಯತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಹೆಬ್ಬಾಳ ವಿಭಾಗದ ಸಿ-8 ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. 66/11 ಕೆವಿ ಸಹಕಾರನಗರದ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ.
66/11 ಕೆವಿ ಸಹಕಾರ ನಗರ ಕೆಪಿಟಿಸಿಎಲ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆ ಹೆಬ್ಬಾಳ ವಿಭಾಗದ ಸಿ -8 ಉಪವಿಭಾಗದ ಹಲವಾರು ಪ್ರದೇಶಗಳಲ್ಲಿ ಸೆಪ್ಟೆಂಬರ್ 15 ರಿಂದ 29ರ ವರೆಗೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬ್ಯಾಟರಾಯನಪುರ ಜಕ್ಕೂರು ಲೇಔಟ್, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯೂಎಎಲ್ ಲೇಔಟ್.
ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, MCECHS ಲೇಔಟ್, MC PHS ಲೇಔಟ್, ಸೂರ್ಯೋದಯ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್‌ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆಯೋ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ಗೆ ಸಂಬಂಧಿತ ಉಪಕರಣ (ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್, ಬ್ಯಾಟರಿ ಇತ್ಯಾದಿ) ಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಒಳಿತು ಎಂದು ಸಲಹೆ ನೀಡಿದೆ. ಹಿಂದಿನಿಂದಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದಗಲೆಲ್ಲಾ ಈ ಸೂಚನೆಯನ್ನು ನೀಡುತ್ತಲೇ ಬಂದಿದೆ. ಜೊತೆಗೆ ಇದಕ್ಕೆ ಗ್ರಾಹಕರು ಸಹಕರಿಸಬೇಕು. ಹೆಚ್ಚಿನ ಮಾಹಿತಿಹಾಗಿ ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಬಹುದು ಎಂದು ತಿಳಿಸುತ್ತಲೇ ಬಂದಿದೆ.












Click it and Unblock the Notifications