Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆಗಸ್ಟ್‌ 17ರಂದು ಕರೆಂಟ್ ಕಟ್

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಆಗಸ್ಟ್‌ 17ರಂದು ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಆಗಸ್ಟ್‌ 17ರಂದು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ವಿದ್ಯುತ್ ಕಡಿತಗೊಳ್ಳುವ ಪ್ರದೇಶದ ನಿವಾಸಿಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಸೂಚನೆಗಳನ್ನು ಕೂಡ ನೀಡಿದೆ. ಹಾಗಾದ್ರೆ ಯಾವ್ಯಾವ ಪ್ರದೇಶಗಳಲ್ಲಿ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

Power Cut in Bengaluru s These Areas on August 17 Know details

ಭಾನುವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ 220/66/11 kV ಎಸ್.ಆರ್.ಎಸ್. ಪೀಣ್ಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಆಗಸ್ಟ್‌ 17ರ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಸು ಬೆಸ್ಕಾಂ ತಿಳಿಸಿದೆ.

ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ.ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿ ನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ರ‍್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4ನೇ ಹಂತ, 4ನೇ ಮುಖ್ಯ, 8ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

66/11 ಕೆವಿ ಪ್ಲಾಟಿನಂ ಸಿಟಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆಗಸ್ಟ್‌ 17ರ ಭಾನುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ರಿಲಯನ್ಸ್ ಇಂಡಸ್ಟ್ರೀಸ್, ಕರ‍್ಲೋನ್, ಸಿಕೆಎ, ಅಲಿಸ್ಡಾ, ಟಾಟಾ ಅಕೆವಲ್, ಕರ‍್ಲೆ, ಪ್ರೊಫೆಷನಲ್-ಕ್ಲೋಥಿಂಗ್, ರಾಘವೇಂದ್ರ ಲೇಔಟ್.

ಆರ್‌ಎನ್‌ಎಸ್ ಮೋಟಾರ್, ಮುನೇಶ್ವರ ನಗರ, ವೈಷ್ಣವಿ ನಕ್ಷತ್ರ ಅಪಾರ್ಟ್‌ಮೆಂಟ್, ಲೆಫ್ಟಿನೆಂಟ್ ಕರ‍್ಲೆ, ಎಚ್‌ಎಂಟಿ ರಸ್ತೆ, ಪ್ಲಾಟಿನಂ ಸಿಟಿ ಅಪಾರ್ಟ್‌ಮೆಂಟ್, ಬಿಎಫ್‌ಡಬ್ಲ್ಯೂ, ಜಲ ಸೌಧ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಇನ್ನು ವಿದ್ಯುತ್ ಪೂರೈಕೆಯಲ್ಲಿ ಕಡಿತ ಉಂಟಾಗುವ ಪ್ರದೇಶಗಳಲ್ಲಿ ವಾಸ ಮಾಡುವ ನಿವಾಸಿಗಳು ಮೊಬೈಲ್ ಫೋನ್‌, ಲ್ಯಾಪ್‌ಟ್ಯಾಪ್‌, ಬ್ಯಾಟರಿಗ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ ಸಾಧನಗಳನ್ನ ಮುಂಚಿತವಾಗಿ ಚಾರ್ಜ್ ಮಾಡಿಕೊಳ್ಳಲು ಬೆಸ್ಕಾಂ ಮುಂಜಾಗ್ರತಾ ಕ್ರಮವಾಗಿ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+