Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಶುಕ್ರವಾರ ಕರೆಂಟ್ ಕಟ್

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಆಗಸ್ಟ್‌ 22ರಂದು ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಆಗಸ್ಟ್‌ 22ರಂದು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ವಿದ್ಯುತ್ ಕಡಿತಗೊಳ್ಳುವ ಪ್ರದೇಶದ ನಿವಾಸಿಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಸೂಚನೆಗಳನ್ನು ಕೂಡ ನೀಡಿದೆ. ಹಾಗಾದ್ರೆ ಯಾವ್ಯಾವ ಪ್ರದೇಶಗಳಲ್ಲಿ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

Power Cut in Bengaluru s These Areas on August 22 Know details

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಇಂದು (ಆಗಸ್ಟ್ 22) ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯುತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

ಮುತ್ಸಂದ್ರ, ಪ್ರಿಯರ್ದಶಿನಿ ಬಡಾವಣೆ, ಟಿ.ಬಿ.ಬಡಾವಣೆ, ಗಂಗಧರಪುರ, ರೋಜಿಪುರ, ವಿನಾಯಕನಗರ, ಬಸವೇಶ್ವರನಗರ, ಸೋಮೇಶ್ವರ ಬಡಾವಣೆ, ಕುಂಬಾರಪೇಟೆ, ಮಾರುತಿನಗರ, ಗಾಣಿಗರಪೇಟೆ, ವರ್ಜಿಪೇಟೆ, ವಡ್ಡರಪೇಟೆ, ಹಳೇಬಸ್​ ನಿಲ್ದಾಣ, ಇಸ್ಲಾಂಪುರ, ದೇವರಾಜನಗರ, ತ್ಯಾಗರಾಜನಗರ, ಕರೇನಹಳ್ಳಿ, ಶಾಂತಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಅಲ್ಲದೆ, ಕುರುಬರಹಳ್ಳಿ, ದರ್ಗಾಜೋಗಿಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ಕೊಡಿಗೇಹಳ್ಳಿ, ತಳಗವಾರ ಮಾದಗೊಂಡನಹಳ್ಳಿ, ಕೋಳುರು, ಗೊಲ್ಲಹಳ್ಳಿ, ಆಳ್ಳಾಲಸಂದ್ರ, ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್‌.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ.

ರಘುನಾಥಪುರ, ಆದಿನಾರಾಯಣ ಹೊಸಹಳ್ಳಿ ಹೀರೆಗುಡ್ಡದಹಳ್ಳಿ, ನಂದಿಮೋರಿ, ಕುರುವಿಗೆರೆ, ಕಂಚಿಗನಾಳ, ರಾಜಘಟ್ಟಾ, ದಾಸಗೊಂಡನಹಳ್ಳಿ, ಅಂಚರಹಳ್ಳಿ, ಗಂಡರಾಜಪುರ, ಹಮಾಮ್, ಬೀಡಿಕೆರೆ, ಸೊಣ್ಣಪ್ಪನಹಳ್ಳಿ, ಶಿವಪುರ, ಕೋಡಿಹಳ್ಳಿ, ಲಿಂಗನಹಳ್ಳಿ, ಕಮಲೂರು, ನಾಗಶೆಟ್ಟಹಳ್ಳಿ, ಶಿರವಾರ, ಅಣಗಲಪುರ, ನೇರಳೆಘಟ್ಟಾ, ಹೊನ್ನಾಘಟ್ಟಾ, ಕೆಸ್ತೂರು, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

ಮತ್ತೊಂದೆಡೆ ಕೆಪಿಟಿಸಿಎಲ್ ವತಿಯಿಂದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರು ಕೈಗೊಳ್ಳಲಾಗಿದೆ. ಆದ್ದರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕೆಳಗಿನ ಪ್ರದೆಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 12ನೇ ಹಂತ, 7ನೇ ಹಂತ, 11ನೇ ಹಂತ, ಆರ್​ಜಿಎ ಇನ್‌ಪ್ರಾಸ್ಟ್ರಕ್ಚರ್, 1, 2 ಮತ್ತು 9ನೇ ಎ ಹಂತ, 9ನೇ ಬಿ ಹಂತ, ಇಂಟೆಲ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಇನ್ನು ವಿದ್ಯುತ್ ಪೂರೈಕೆಯಲ್ಲಿ ಕಡಿತ ಉಂಟಾಗುವ ಪ್ರದೇಶಗಳಲ್ಲಿ ವಾಸ ಮಾಡುವ ನಿವಾಸಿಗಳು ಮೊಬೈಲ್ ಫೋನ್‌, ಲ್ಯಾಪ್‌ಟ್ಯಾಪ್‌, ಬ್ಯಾಟರಿಗ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ ಸಾಧನಗಳನ್ನ ಮುಂಚಿತವಾಗಿ ಚಾರ್ಜ್ ಮಾಡಿಕೊಳ್ಳುವುದು ಸೂಕ್ತ ಎಂದು ಮುಂಜಾಗ್ರತಾ ಕ್ರಮವಾಗಿ ಸಲಹೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+