Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆಗಸ್ಟ್ 23 ಮತ್ತು 24ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಆಗಸ್ಟ್ 23 ಮತ್ತು 24ರಂದು ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಆಗಸ್ಟ್ 23 ಮತ್ತು 24ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅಲ್ಲದೆ, ವಿದ್ಯುತ್ ಕಡಿತಗೊಳ್ಳುವ ಪ್ರದೇಶದ ನಿವಾಸಿಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಸೂಚನೆಗಳನ್ನು ಕೂಡ ನೀಡಿದೆ. ಹಾಗಾದ್ರೆ ಯಾವ್ಯಾವ ಪ್ರದೇಶಗಳಲ್ಲಿ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

ಇಂದು ಎಲ್ಲೆಲ್ಲಿ ಕರೆಂಟ್ ಕಟ್?: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಹೂಡಿ ಸ್ಟೇಷನ್ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಹುಡಿ ವಿಲೇಜ್, ತಿಗಳರಪಾಳ್ಯ, ಸೀತಾರಾಮಪಾಳ್ಯ, ಬಸವನಗರ, ಸೊನ್ನೆಹಳ್ಳಿ, ಎನ್‌ಜಿಎಫ್ ಕೈಗಾರಿಕಾ ಪ್ರದೇಶ, ಶಿವರಾಜ್ ಫ್ಯಾಕ್ಟರಿ, ಇಎಸ್ಐ ರಸ್ತೆ, ವಿಎಸ್ಎನ್ಎಲ್ ಡೇಟಾ ಸೆಂಟರ್, ಪುರವ ಪಾರ್ಕ್ ವಿಲಾಸ್, ಶಿವಗಂಗಾ ಲೇಔಟ್, ಅನುಗ್ರಹ ಲೇಔಟ್, ಚಿನ್ನಪ್ಪ ಲೇಔಟ್, ಔಟರ್ ರಿಂಗ್ ರಸ್ತೆ, ರಾಮಕೃಷ್ಣ ರೆಡ್ಡಿ ಲೇಔಟ್, ಗರುಡಾಚಾರ್ ಪಾಳ್ಯ, ಲಕ್ಷ್ಮೀ ಸಾಗರ, ಮಹೇಶ್ವರಮ್ಮ ದೇವಾಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಭಾನುವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾ ಮಾಹಿತಿ ನೀಡಿದೆ.
ಹೆಚ್.ಎಂ.ಟಿ ರಸ್ತೆ, ಆಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಂಟಿಐ, ಬರ‍್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಅಲ್ಲದೆ, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭಿರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಬಡಾವಣೆ, ಬೈರವೇಶ್ವರ ನಗರ, ಇಎಸ್ಐಸಿ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲದೆ ಎಂದು ತಿಳಿಸಿದೆ.
ಇನ್ನು ನೆಲಗೆದರನಹಳ್ಳಿ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕೆಂಪಯ್ಯ ಗಾರ್ಡನ್, ತಿಗಳರಪಾಳ್ಯ ಮುಖ್ಯ ರಸ್ತೆ, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ನೆಲಿಕಾಗಡರನಹಳ್ಳಿ, ಹೆಚ್ ಎಂ ಟಿ ಲೇಔಟ್, ಶಿವಪುರ, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಳ್ಮಾರ್ ಲೇಔಟ್, ವಿನಾಯಕನಗರ, 8ನೇ ಮೈಲ್ ರಸ್ತೆ, ಜಾಲಹಳ್ಳಿ ಕ್ರಾಸ್, ಕೆ.ಎಲ್.ಎ.ಪಿ.ಎಲ್. ಆಂಟಿಬಯೋಟಿಕ್ಸ್ ಪ್ರೈವೇಟ್ ಲಿಮಿಟೆಡ್, ರುಕ್ಮಿಣಿನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಇನ್ನು ವಿದ್ಯುತ್ ಸಂಬಂಧಿಸಿದ ಉಪಕರಣಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವಂತೆ ಸೂಚನೆಯನ್ನು ಕೂಡ ನೀಡಿದೆ.












Click it and Unblock the Notifications