Get Updates
Get notified of breaking news, exclusive insights, and must-see stories!

Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಡಿಸೆಂಬರ್ 13ರ ಶನಿವಾರ ಸಂಜೆ 5 ಗಂಟೆಯವರೆಗೂ ಕರೆಂಟ್‌ ಕಟ್‌

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಡಿಸೆಂಬರ್ 13ರ ಶನಿವಾರ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎಂದು ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಡಿಸೆಂಬರ್ 13ರ ಶನಿವಾರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Power Cut in Bengaluru s These Areas on December 13 Know details

ಶನಿವಾರ ಎಲ್ಲೆಲ್ಲಿ ವಿದ್ಯುತ್ ಕಡಿತ?: ಇಂದು (ಡಿಸೆಂಬರ್ 13) ಅತ್ತೂರು ಮತ್ತು ಯಲಹಂಕ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಬೆಳಗ್ಗೆ 11ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಯಲಹಂಕ ಎಂಯುಎಸ್‌ಎಸ್‌, ಕೆಎಂಎಫ್, ಮದರ್ ಡೈರಿ, ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್‌ಇಎಸ್‌ ರಸ್ತೆ, ಸಿಎಂ ಎನ್‌ಕ್ಲೇವ್, ಮಾತೃ ಲೇಔಟ್, ಸೋಮೇಶ್ವರನಗರ, ಕನಕನಗರ, ಜುಡಿಸಿಯಲ್‌ ಲೇಔಟ್, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಬಿಬಿಎಂಪಿ ರಸ್ತೆ (ಓಲ್ಡ್ ಟೌನ್ ಮತ್ತು ಕೋಡಿ ರಸ್ತೆ), ಕಾರೆ, ಆರ್‌ಎಂಝೆಡ್‌ ಮಾಲ್, ಆರ್‌ಎಂಝೆಡ್‌ ರೆಸಿಡೆನ್ಸಿಯಲ್‌, ಪುರವಂಕರ ಅಪಾರ್ಟ್‌ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ.

ಯಾವೆಲ್ಲಾ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಮೊಬೈಲ್‌ ಫೋನ್‌, ಲ್ಯಾಪ್‌ಟ್ಯಾಪ್‌, ಬ್ಯಾಟರಿ ಸೇರಿದಂತೆ ಚಾರ್ಜಿಂಗ್‌ ಸಂಬಂಧಪಟ್ಟ ಸಾಧನಗಳನ್ನು ಚಾರ್ಜ್‌ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದೆ. ಅಲ್ಲದೆ, ಗ್ರಾಹಕರು ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಅಂತಲೂ ತಿಳಿಸಿದೆ.

ಡೆಸೆಂಬರ್ 12ರಂದು ಕರೆಂಟ್‌ ಕಟ್‌: ತುರ್ತು ಕಾಮಗಾರಿ ಹಿನ್ನೆಲೆ ಡಿಸೆಂಬರ್ 12 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವಯವರೆಗೆ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿತ್ತು. ಕೋರಮಂಗಲ ವಿಭಾಗದ ದೇವರಬೀಸನಹಳ್ಳಿ ಮತ್ತು ಆಡುಗೋಡಿ ಸಬ್‌ಸ್ಟೇಷನ್‌ಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ತಿಳಿಸಿತ್ತು.

ದೇವರಬೀಸನಹಳ್ಳಿ, ಬೆಳ್ಳಂದೂರು, ಆರ್‌ಎಂಝಡ್, ಎಕ್ಸೋಸ್ಪೇಸ್ ಇಕೋವರ್ಲ್ಡ್, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್‌ಪೋರ್ಟ್ ಕಚೇರಿ, ಶೋಭಾ ಅಪಾರ್ಟ್‌ಮೆಂಟ್, ಹೊರ ವರ್ತುಲ ರಸ್ತೆ, 5ನೇ ಕೈಗಾರಿಕಾ ಬಡಾವಣೆ, ಕೋರಮಂಗಲ, ಮಡಿವಾಳ ವೆಂಕಟೇಶ್ವರ ಲೇಔಟ್, ಚಿಕ್ಕ ಆಡುಗೋಡಿ, ಜೋಗಿ ಕಾಲೋನಿ, ಸೇಂಟ್ ಜಾನ್ಸ್‌ ಸಿಬ್ಬಂದಿ ಕ್ವಾರ್ಟರ್ಸ್, ಆಡುಗೋಡಿ 7 ಮತ್ತು 8ನೇ ಬ್ಲಾಕ್, ಸಿಎಆರ್ ಪೊಲೀಸ್ ಕ್ವಾರ್ಟರ್ಸ್.

ಆಡುಗೋಡಿ ಮುಖ್ಯ ರಸ್ತೆ, ಸೇಂಟ್ ಜಾನ್ಸ್ ಆಸ್ಪತ್ರೆ, ಮಡಿವಾಳ, ಮಾರುತಿ ನಗರ, ಡಾಲರ್ಸ್ ಕಾಲೋನಿ, 100 ಅಡಿ ರಿಂಗ್ ರಸ್ತೆ, ಒರಾಕಲ್ ಕಂಪನಿ, ಬನ್ನೇರುಘಟ್ಟ ರಸ್ತೆ (ಬಿಜಿ ರಸ್ತೆ), ಕೆಎಚ್‌ಬಿ ಕಾಲೋನಿ, ಕೋರಮಂಗಲ ಕೈಗಾರಿಕಾ ಪ್ರದೇಶ (5 ನೇ ಬ್ಲಾಕ್), ಎಂಐಸಿಒ (3 ನೇ, 4 ನೇ, 5 ನೇ ಮತ್ತು 6 ನೇ ಬ್ಲಾಕ್‌ಗಳು), ಭುವನಪ್ಪ ಕಾವೇರಿ ಲೇಔಟ್, ಕೃಷ್ಣ ನಗರ ಕೈಗಾರಿಕಾ ಲೇಔಟ್‌, ಎಸ್‌ಜಿ ಪಾಳ್ಯ, ಧವನ್ ಜ್ಯುವೆಲರಿ (2 ನೇ ಬ್ಲಾಕ್), ಮಡಿವಾಳ ಸಂತೆ, ಸಿದ್ಧಾರ್ಥ ಕಾಲೋನಿ, ಹ್ಯಾಪಿ ಮೈಂಡ್ ಕಂಪನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು ಎಂದು ತಿಳಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+