Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಗುರುವಾರ, ಶುಕ್ರವಾರ ಕರೆಂಟ್‌ ಕಟ್‌

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದಂತೆ ಕಾಮಗಾರಿ ನಡೆಯುವಂತಹ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹಾಗೆಯೇ ಮುಂದಿನ ಎರಡು ದಿನ ಅಂದರೆ ಡಿಸೆಂಬರ್ 19 ಮತ್ತು 20ರಂದು ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್‌ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಸಂಪೂರ್ಣ ವಿವರ ಇಲ್ಲಿದೆ ಕಣ್ಣಾಡಿಸಿ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆ ಡಿಸೆಂಬರ್‌ 19 ರಂದು 66/11ಕೆ.ವಿ ಎಲ್.ಆರ್.ಬಂಡೆ ಕೇಂದ್ರದಲ್ಲಿನ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅದೇ ರೀತಿ 66/11ಕೆವಿ ಮಾನ್ಯತಾ ಉಪಕೇಂದ್ರದಿಂದ ಶೋಭಾ ಸಿಟಿ ಉಪಕೇಂದ್ರದ ವರೆಗಿನ ವ್ಯಾಪ್ತಿಯ ಪ್ರದೇಶಗಳಲ್ಲಿ ಗುರುವಾರ ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

Power Cut in Bengaluru s These Areas on December 19 and 20 Know details

ಅಷ್ಟೇ ಅಲ್ಲದದೆ, ಡಿಸೆಂಬರ್ 20ರಂದು 66/11 ಕೆವಿ ರಾಜನಕುಂಟೆ ಸಬ್‌ಸ್ಟೇಷನ್‌ನ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಡಿಸೆಂಬರ್ 19ರಂದು ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣ ಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ ಭಾಗದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

ಎಂ.ಎಸ್.ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಹಾಗೂ ಇಲ್ಲಿನ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮಾನ್ಯತಾ ಕಾಫಿ ಬೋರ್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ನಿವಾಸ, ಶ್ರೀ ಭಾಗ್ಯ ಶ್ರೀ ಲೇಔಟ್ ಮತ್ತು ರಾಚೇನಹಳ್ಳಿ ಐಬ್ರೋಕ್ಸ್ ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್ ಮಂತ್ರಿ ಲಿಥೋಸ್‌, ಶೋಭಾ ಸಿಟಿ ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ನಗರ್ ವೆಂಕಟ್ ಪ್ಯಾರಡೈಸ್ ನಗರ.

ಪೊಲೀಸ್ ಕ್ವಾರ್ಟರ್ಸ್, ಆರ್ ಕೆ ಹೆಗಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿವೈಎಂ, ಸ್ಲಂ ಬೋರ್ಡ್ ಮತ್ತು ಬೆಂಚ್ ರಾಯಲ್ ವುಡ್ ನಗರ. ಲೇಔಟ್ ಥಣಿಸಂದ್ರ, ಆರ್ ಕೆ ಹೆಗ್ಡೆ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.

ಡಿಸೆಂಬರ್ 20ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+