Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಶುಕ್ರವಾರ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಡಿಸೆಂಬರ್ 27ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಎಲ್ಲಲ್ಲಿ ಕರೆಂಟ್ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಸ್ಕಾಂನಿಂದ ಬೆಂಗಳೂರಿನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಶುಕ್ರವಾರ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ವಿದ್ಯುತ್ ವ್ಯತ್ಯಯ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದು, ಸುಬ್ರಮಣ್ಯಪುರ ನಿರ್ವಹಣಾ ಕಾಮಗಾರಿ ನಿಮಿತ್ತ ಶುಕ್ರವಾರ (ಡಿಸೆಂಬರ್ 27) ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ ಎಂದು ತಿಳಿಸಿದ್ದಾರೆ.

ಎಲ್ಲೆಲ್ಲಿ ಕರೆಂಟ್ ಕಟ್?: ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದರ್ಶ್ ಅಪಾರ್ಟ್‌ಮೆಂಟ್ 1 & 2, ಮಂತ್ರಿ ಟ್ರಾನ್ಕ್ವಿಲ್ ಅಪಾರ್ಟ್‌ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ ಸಂದ್ರ ಇಂಡಸ್ಟ್ರಿಯಲ್ ಏರಿಯಾ, ಅಗರ ಮತ್ತು ಸುತ್ತಮುತ್ತಲ ಪ್ರದೇಶಗಳು, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ಯಾದಳಾಂ ನಗರ, ಮಾರುತಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ತಿಳಿಸಿದೆ.
ಈಗಾಗಲೇ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಂಗಳವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದರು. ಡಿಸೆಂಬರ್ 24ರಂದು 66/11 ಕೆವಿ ಬ್ಯಾಟರಾಯನಪುರ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ಡಿಸೆಂಬರ್ 24ರ ಬೆಳಗ್ಗೆ 11ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದ್ದರು.
L&T ಅಪಾರ್ಟ್‌ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಶನ್, L&T ಅಪಾರ್ಟ್‌ಮೆಂಟ್, ಸೆಂಚುರಿ ಅಪಾರ್ಟ್‌ಮೆಂಟ್ ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರನಗರ ಜಿ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್ ಎಂವಿ ಲೇಔಟ್, ಪಾರ್ಕ್, ತೀಂಡ್ಲು ಗ್ರಾಮ ಬಡಾವಣೆ ಸಪ್ತಗಿರಿ ಲೇಔಟ್, ಜ್ಞಾನೇಶ್ವರಿ ಲೇಔಟ್, ಗುರುದರ್ಶನ ಲೇಔಟ್, ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ವೃತ್ತ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಹೇಳಿದ್ದರು.












Click it and Unblock the Notifications