Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಡಿಸೆಂಬರ್ 30ರ ಮಂಗಳವಾರ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕರೆಂಟ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ 2025ರ ವರ್ಷಾಂತ್ಯದಲ್ಲಿ ಬೆಂಗಳೂರಿನ ಹಲವು ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ 66/11ಕೆ.ವಿ ರೆಮಕೊ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ 30ರ ಮಂಗಳವಾರ ನಗರದ ಹಲವೆಡೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಎಲ್ಲೆಲ್ಲಿ ಕರೆಂಟ್ ಕಟ್?: ಮೈಸೂರ್ ರಸ್ತೆ 7ನೇ ಕ್ರಾಸ್, ಶಾಮಣ್ಣಾ ಗಾರ್ಡನ್, ಮಂಜುನಾಥನಗರ, ಪೈಪ್‌ಲೈನ್ ರಸ್ತೆ, ಸಂತೋಷ್ ಟೆಂಟ್ ಪ್ರದೇಶ, ಅನಂತ ರಾಮಯ್ಯ ಕಾಂಪೌಂಡ್, ಕುವೆಂಪು ನಗರ, 6ನೇ ಕ್ರಾಸ್ ಮೈಸೂರು ರಸ್ತೆ, 4ನೇ ಕ್ರಾಸ್ ಮೈಸೂರು ರಸ್ತೆ, ಗುಡ್ಡದಹಳ್ಳಿ ಹಾಗೂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದೆ.
ಬೆಸ್ಕಾಂ ಸಲಹೆ ಏನು?: ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆಯೋ ಅಂತಹ ಭಾಗಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್, ಲ್ಯಾಪ್‌ಟ್ಯಾಪ್, ಬ್ಯಾಟರಿ ಸೇರಿದಂತೆ ಇನ್ನಿತರೆ ಚಾರ್ಜಿಂಜ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹ ನೀಡಿದೆ. ಈ ಸಲಹೆಯನ್ನು ನೀಡುತ್ತಿರುವುದು ಇದೇ ಮೊದಲೇನಲ್ಲ. ಯಾವಾಗೆಲ್ಲ ಕರೆಂಟ್ ಕಡಿತವಾಗಲಿದೆಯೋ ಅಂತಹ ಸಂದರ್ಭಗಳಲ್ಲಿ ಒಂದು ದಿನದ ಮುಂಚಿತವಾಗಿ ತಿಳಿಸುತ್ತಲೇ ಬಂದಿದೆ.
ಸೋಮವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: 66/11 ಕೆವಿ ಮತ್ತಿಕೆರೆ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಮಲ್ಲೇಶ್ವರಂ ವಿಭಾಗದ ಸಿ-6 ಉಪ ವಿಭಾಗದ ಹಲವು ಪ್ರದೇಶಗಳಲ್ಲಿ ಡಿಸೆಂಬರ್ 29ರ ಸೋಮವಾರ ಬೆಳಗ್ಗೆ 10ರಿ೦ದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಆರ್.ಕೆ.ಉದ್ಯಾನ, ಸಂಜೀವಪ್ಪ ಕಾಲೋನಿ, ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್‌ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆಪಿ ಪಾರ್ಕ್, ಅಕ್ಕಿಯಪ್ಪ ಉದ್ಯಾನ, ಬಿಕೆ ನಗರ, ಎಲ್ಐಸಿ ಕಾಲೋನಿ, ಪಂಪ ನಗರ, 1ನೇ ಮುಖ್ಯ ರಸ್ತೆ ಯಶವಂತಪುರ, ಎಚ್ಎಂಟಿ ಲೇಔಟ್, ಎಲ್ಸಿಆರ್ ಶಾಲಾ ರಸ್ತೆ, ಗೋಕುಲ 1ನೇ ಹಂತ, ಗುರುಮೂರ್ತಿ ರೆಡ್ಡಿ ಕಾಲೋನಿ.
ಎಸ್‌ಬಿಎಂ ಕಾಲೋನಿ, ಬೃಂದಾವನ ನಗರ, ಎಂಆರ್‌ಜೆ ಕಾಲೋನಿ, ಸಂಜೀವಪ್ಪ ಕಾಲೋನಿ, 3ನೇ ಮುಖ್ಯ ರಸ್ತೆ, ಮತ್ತಿಕೆರೆ 2ನೇ ಮುಖ್ಯ ರಸ್ತೆಯಿಂದ 10ನೇ ಮುಖ್ಯ ರಸ್ತೆ, ವಿಆರ್ ಲೇಔಟ್, ಜೆಪಿ ಪಾರ್ಕ್, ಬೃಂದಾವನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬ್ಯಾಟರಾಯನಪುರ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಎಲ್ & ಟಿ ಅಪಾರ್ಟ್‌ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಶನ್, ಅಮೃತಹಳ್ಳಿ, ಸಹಕಾರನಗರ ಜಿ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್‌ಎಂವಿ ಲೇಔಟ್, ಸಪ್ತಗಿರಿ ಲೇಔಟ್, ಜ್ಞಾನೇಶ್ವರಿ ಲೇಔಟ್, ಗುರುದರ್ಶನ ಲೇಔಟ್, ನಂಜಪ್ಪ ವೃತ್ತ, ಎಲ್ & ಜೆ ಎನ್‌ಕ್ಲೇವ್ ಜಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.












Click it and Unblock the Notifications