Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 16ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿ 16ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
66/11ಕೆ.ವಿ ಬಾಗಮನೆ ಡಬ್ಲೂ.ಟಿ.ಸಿ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆ ಫೆಬ್ರವರಿ 16ರ ಬೆಳಗ್ಗೆ 09ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬೆಂಗಳೂರು ನಗರದ ಹಲವು ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಸಮಯದಲ್ಲಿ ಗ್ರಾಹಕರು ಸಹಕಾರ ನೀಡಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

ಎಲ್ಲೆಲ್ಲಿ ಕರೆಂಟ್ ಕಟ್?: ದೊಡ್ಡನೆಕ್ಕುಂಡಿ ರೈಲ್ವೇ ಬ್ರಿಡ್ಜ್, ಡಬ್ಲುಟಿಸಿ ಬಾಗಮನೆ ಯುಟಿಲಿಟಿ ಬ್ಲಾಕ್, ಡಬ್ಲುಟಿಸಿ ಬಾಗಮನೆ ರಿಯೋ ಆಫೀಸ್ ಬ್ಲಾಕ್ ಪೂರ್ವ ಪಾರ್ಕ್ ವಿಲ್ಲಾಸ್, ಶಿವಗಂಗಾ ಲೇಔಟ್, ಅನುಗ್ರಹ ಮೂನ್ ಸ್ಟೋನ್ ಆಫೀಸ್ ಬಿಲ್ಡಿಂಗ್ ಬಾಗಮನೆ, ಬಾಗಮನೆ ಎಮರಾಲ್ಡ್ ಬಿಲ್ಡಿಂಗ್, ಬಾಗಮನೆ ಅಕ್ವಾ ಮರಿನ್ ಪೆರಿಡಾಟ್ ಬಿಲ್ಡಿಂಗ್, ವೆಂಕಟೇಶ್ವರನಗರ, ವೆಂಕಟೇಶ್ವರಪುರ ಲೇಔಟ್, ಚಿನ್ನಪ್ಪ ಲೇಔಟ್, ಔಟರ್ ರಿಂಗ್ ರೋಡ್, ರಾಮಕೃಷ್ಣ ರೆಡ್ಡಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಶನಿವಾರ ಎಲ್ಲೆಲ್ಲಿ ಕರೆಂಟ್ ಕಟ್?: ಫೆಬ್ರವರಿ 15ರ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಬಸವನಗುಡಿ, ಬನಶಂಕರಿ 3ನೇ ಹಂತ, ನಿಮ್ಹಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂದಿರಾಗಾಂಧಿ, ಜಯನಗರ-1ನೇ, 2ನೇ, 3ನೇ, 4ನೇ, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್‌ನಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದ ಎಂದು ತಿಳಿಸಿದೆ.
ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ವೃತ್ತ, ವಿದ್ಯಾಪೀಠ ವೃತ್ತ, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಅವಲಹಳ್ಳಿ, ಸ್ಟರ್ಲಿಂಗ್ ಅಪಾರ್ಟ್‌ಮೆಂಟ್, ಎನ್‌ಟಿವೈ ಲೇಔಟ್, ತ್ಯಾಗರಾಜನಗರ ಎಲೆಕ್ಟ್ರಾನಿಕ್ಸ್ ಸಿಟಿ ಫೇಸ್-2 ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಶನಿವಾರ ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕಾಡುಗೋಡಿ, ಶಂಕ್ರಪುರ, ಸಿದ್ದಾರ್ಥ ಲೇಔಟ್, ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಮಾರ್ವೆಲ್ ಅಪಾರ್ಟ್‌ಮೆಂಟ್, ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೆನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್‌ಸಿಐ ಗೋಡೌನ್, ವಿಎಸ್‌ಆರ್ ಲೇಔಟ್, ದಿನ್ನೂರು ಪೊಲೀಸ್ ಠಾಣೆ, ಮೈತ್ರಿ ಲೇಔಟ್‌ನಲ್ಲೂ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಭೈರಪ್ಪ ಲೇಔಟ್, ವಿನಾಯಕ ಲೇಔಟ್. ರುಸ್ತುಮ್ಜಿ ಲೇಔಟ್, ಅಂಬೇಡ್ಕರ್ ನಗರ ಗುಟ್ಟಾ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಪ್ರೆಸ್ಟೀಜ್ ಮೇಬೆರಿ ಅಪಾರ್ಟ್‌ಮೆಂಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್‌ವೆಲ್ ರಸ್ತೆ, ಬ್ರೋಕ್ ಸ್ಟ್ರೀಟ್, ಔಟರ್ ಸ್ಟ್ರೀಟ್ ಹಗದೂರು, ವಿನಾಯಕನಗರ, ಬ್ರಿಗೇಡ್ ಕಾಸ್ಪೊಲೀಸ್ ಅಪಾರ್ಟ್‌ಮೆಂಟ್, ಪ್ರಶಾಂತ್ ಲೇಔಟ್, ಕರುಮಾರಿಯಮ್ಮ ದೇವಸ್ಥಾನದ ಬೀದಿ, ಭುವನೇಶ್ವರಿ ರಸ್ತೆ.
ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯ ರಸ್ತೆ ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್, ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಇಸಿಸಿ ರಸ್ತೆ, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯರಸ್ತೆ, ನಾಗರಾಜ್ ಲೇಔಟ್, ದೊಬರಪಾಳ್ಯ, ಸುಮಧುರ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.












Click it and Unblock the Notifications