Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 18ರಂದು ಕರೆಂಟ್‌ ಕಟ್‌

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿ 18ರಂದು ಅಂದರೆ ಮಂಗಳವಾರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

220/66/11 ಕೆ.ವಿ ಎನ್.ಆರ್.ಎಸ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಫೆಬ್ರವರಿ 18ರ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಕೆಳಕಂಡ ಭಾಗಗಳಲ್ಲಿ ಕರೆಂಟ್‌ ಕಟ್ಟಾಗಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಲಾಗಿದೆ.

Power Cut in Bengaluru s These Areas on February 18 Know details

ಎಲ್ಲೆಲ್ಲಿ ಕರೆಂಟ್‌ ಕಟ್‌?: ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್ ಮತ್ತು 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ, ಶಂಕರಮಠ, ಬ್ರೀಗೆಡ್ ಅಪಾರ್ಟ್‌ಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್‌ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

66/11 kV ರಾಜನಕುಂಟೆ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಆಗಲಿದೆ.

66/11ಕೆ.ವಿ ಬಾಣಸವಾಡಿ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೊರಮಾವು ಪಿ & ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ‌ಗ್ರೋವ್, ದೇವಮತ ಶಾಲೆ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್.ಎಸ್.ಬಿ ವಾಟರ್‌ ಟ್ಯಾಂಕ್.

ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ ಗಾರ್ಡನ್, ಸುಂದರಾಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್.

ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯ ರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ.

ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ ‌ಗಾರ್ಡನ್, ಎಂ.ಎ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ.

ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್.ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್ ‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+