Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 4ರ ಬುಧವಾರ ವಿದ್ಯುತ್ ವ್ಯತ್ಯಯ

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಫೆಬ್ರವರಿ 4ರ ಬುಧವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಫೆಬ್ರವರಿ 4ರ ಬುಧವಾರ ಬೆಳ್ಳಿಗೆ 11ರಿಂದ ಸಂಜೆ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾ ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Power Cut in Bengaluru s These Areas on February 4 2026 Wednesday Know details

ಎಲ್ಲೆಲ್ಲಿ ಕರೆಂಟ್‌ ಕಟ್‌?: ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡೆನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಗ್ರಾಹಕರಿಗೆ ಮಹತ್ವದ ಸಲಹೆ: ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್‌, ಬ್ಯಾಟರಿ, ಲ್ಯಾಪ್‌ಟ್ಯಾಪ್‌ ಸೇರಿದಂತೆ ಇನ್ನಿತರೆ ಚಾರ್ಜಿಂಗ್‌ಗೆ ಸಂಬಂಧಿಸಿದ ಸಾಧನಗಳನ್ನು ಮುಂಚಿತವಾಗಿ ಚಾರ್ಜ್‌ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಹಕರು ಬೆಸ್ಕಾಂ ಸಹಾಯವಾಣಿ 1912ಕ್ಕೆ ರಕೆ ಮಾಡಬಹುದು ಅಂತಲೂ ತಿಳಿಸಿದೆ. ಈ ಸಲಹೆಯನ್ನು ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದಿನಿಂದಲೂ ಸಹ ಗ್ರಾಹಕರ ಗಮನಕ್ಕೆ ತರುವ ಉದ್ದೇಶದಿಂದ ವಿದ್ಯುತ್ ಪೂರೈಕೆ ಕಡಿತದ ಒಂದು ದಿನದ ಮುಂಚಿತವಾಗಿಯೇ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+