Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಜನವರಿ 11ರ ಭಾನುವಾರ ಇರೋದಿಲ್ಲ ಕರೆಂಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಜನವರಿ 11ರ ಭಾನುವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಜನವರಿ 11ರ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. 66/11 ಕೆ.ವಿ ಸೋಲದೇವನಹಳ್ಳಿ (66 ಸ್ಥಾವರ ಪುಟ್ಟೇನಹಳ್ಳಿ) ಪೀಣ್ಯ 1, 2 ಲೈನ್ ಉಪಕೇಂದ್ರ ವ್ಯಾಪ್ತಿಯಲ್ಲಿ ಜನವರಿ 10 ಜನವರಿ 11ರ ಭಾನುವಾರ ಬೆಳ್ಳಗೆ 8ರಿಂದ ಸಂಜೆ 6 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಪವರ್ ಕಟ್?: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ.ಗಣಪತಿ ನಗರ, ಶಾಂತಿನಗರ, ಬ್ರರ್ದಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್. ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ಡದ ಲೈನ್, ಫೀಡರ್, ಕೆ.ಟಿ.ಪುರ, ಐಐಎಚ್ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದ ಎಂದು ಬೆಸ್ಕಾಂ ತಿಳಿಸಿದೆ.
ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ತಿಳಿಸಿದೆ.
ಗ್ರಾಹಕರಿಗೆ ಮಹತ್ವದ ಸಲಹೆ: ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾವಾಗಿ ಮೊಬೈಲ್, ಬ್ಯಾಟರಿ, ಲ್ಯಾಪ್‌ಟ್ಯಾಪ್ ಸೇರಿದಂತೆ ಇನ್ನಿತರೆ ಚಾರ್ಜಿಂಗ್‌ಗೆ ಸಂಬಂಧಿಸಿದ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಹಕರು ಬೆಸ್ಕಾಂ ಸಹಾಯವಾಣಿ 1912ಕ್ಕೆ ರಕೆ ಮಾಡಬಹುದು ಅಂತಲೂ ತಿಳಿಸಿದೆ.












Click it and Unblock the Notifications