Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜನವರಿ 11ರಂದು ಕರೆಂಟ್‌ ಕಟ್‌

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ನಾಳೆ ಅಂದರೆ ಜನವರಿ 11ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ನಾಳೆ (ಜನವರಿ 11) ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕೆಲಗೆ ನೀಡಲಾಗಿರುವ ಪ್ರದೇಶಗಳಲ್ಲಿ ದಿನಾಂಕ ಜನವರಿ 11, 2025ರಂದು ಶನಿವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 66/11 KV IISC ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಲ್ಲೇಶ್ವರಂ ವಿಭಾಗದ ಸಿ6 ಉಪ ವಿಭಾಗದಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ತಿಳಿಸಿದೆ.

Power Cut in Bengaluru s These Areas on January 11 Know details

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಶರೀಫ್ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಇಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಇಂದು ಕೂಡ ನಗರದ ಹಲವೆಡೆ ಕರೆಂಟ್‌ ಕಟ್ಟಾಗಲಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ನಗರದ ಹಲವೆಡೆ ಇಂದು (ಜನವರಿ 10) ಬೆಳಗ್ಗೆ 10ರಿಂದ ಸಂಜೆ 3:30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಎಚ್ ಎಚ್‌ವಿ, ಡಿಎಂಜಿ, ಕೃಷ್ಣಾ ಫ್ಯಾಚ್ರಿಕೇಶನ್ಸ್, ಜೆಮಿನಿ ಇಂಡಸ್ಟ್ರೀಸ್ ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಪ್ರಿಸ್ ಐಎಲ್, ಎಂಎಸ್‌ಐಎಲ್, ವಿಪ್ರೋವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ ವೋ, ಏವೆರಿ ಡೆನ್ನಿಸನ್, ಹಿಟಾಚ್ ಇಂಡಸ್ಟ್ರೀಸ್, ಗೀತಾ ಟಿಂಬರ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+