Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಸಂಜೆ 6 ಗಂಟೆಯವರೆಗೆ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಇಂದು (ಜನವರಿ 11) ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ 66/11 ಕೆ.ವಿ ಸೋಲದೇವನಹಳ್ಳಿ, ಪುಟ್ಟೇನಹಳ್ಳಿ, ಪೀಣ್ಯ 1, 2 ಲೈನ್ ಉಪಕೇಂದ್ರ ವ್ಯಾಪ್ತಿಯಲ್ಲಿ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಹಲವೆಡೆ ಇಂದು (ಜನವರಿ 11) ಬೆಳಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರರ್ದಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದ ಎಂದು ತಿಳಿಸಿದೆ.
ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ಡ ಲೈನ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ.
ಗ್ರಾಹಕರಿಗೆ ಮಹತ್ವದ ಸಲಹೆ: ಅಲ್ಲದೆ, ಯಾವೆಲ್ಲಾ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್, ಲ್ಯಾಪ್‌ಟ್ಯಾಪ್, ಬ್ಯಾಟರಿ ಸೇರಿದಂತೆ ಇನ್ನಿತರೆ ಚಾರ್ಜಿಂಗ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವಂತೆ ಸಲಹೆ ನೀಡಲಾಗಿದೆ. ಗ್ರಾಹಕರು ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಬಹುದು ಅಂತಲೂ ತಿಳಿಸಿದೆ.












Click it and Unblock the Notifications