Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜನವರಿ 13ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ನಾಡಿದ್ದ ಅಂದರೆ ಜನವರಿ 11ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಎಚ್.ಎಸ್.ಆರ್. ವಿಭಾಗದಲ್ಲಿನ ಹಲವು ಪ್ರದೇಶಗಳಲ್ಲಿ ಸೋಮವಾರ (ಜನವರಿ 13) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಸೋಮವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ.
ಇಂದು ಇಲ್ಲೆಲ್ಲ ಕರೆಂಟ್ ಕಟ್: ಇಂದು (ಜನವರಿ 11) ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕೆಳಗೆ ನೀಡಲಾಗಿರುವ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 66/11 KV IISC ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಲ್ಲೇಶ್ವರಂ ವಿಭಾಗದ ಸಿ6 ಉಪ ವಿಭಾಗದಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಶರೀಫ್ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹೀಗೆ ಮುಂಜಾಗ್ರತಾ ಕ್ರಮವಾಗಿ ಕಾಮಗಾರಿ ಇರುವಂತಹ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡುತ್ತಲೇ ಇರುತ್ತದೆ.












Click it and Unblock the Notifications