Bengaluru Power Cut: ಜುಲೈ 13 ಭಾನುವಾರ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಜುಲೈ 13ರಂದು ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಜುಲೈ 13ರ ಭಾನುವಾರ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸರ್ಜಾಪುರ-ಅತ್ತಿಬೆಲೆ 66 ಕೆವಿ ಪ್ರಸರಣ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ತಾತ್ಕಾಲಿಕ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಸ್ಕಾಂ ಬೆಂಗಳೂರಿನ ವಿದ್ಯುತ್ ಗ್ರಿಡ್ ಅನ್ನು ಮೇಲ್ದರ್ಜೆಗೇರಿಸುವ ಮತ್ತು ದೀರ್ಘಾವಧಿಯಲ್ಲಿ ವಿದ್ಯುತ್ ಪೂರೈಕೆಯನ್ನು ಸುಧಾರಿಸಲು ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಯಡವನಹಳ್ಳಿ, ಇಚ್ಚನಗೂರು, ವಡ್ಡರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಳಗಾರನಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಟೌನ್, ಮಾಯಸಂದ್ರ, ದಾಸನಪುರ, ಬಲ್ಲೂರು, ಕಂಬಿಪುರ, ಚಿಕ್ಕನಹಳ್ಳಿ, ಇಂಡ್ಲಬೆಲೆ, ಹಾರೋಹಳ್ಳಿ, ಆನೇಕಲ್ ಟೌನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಕಾವಲ್ ಹೊಸನಹಳ್ಳಿ, ಹೊಳೇನಹಳ್ಳಿ, ಹೊನಕಹಾಪುರ, ಕಾರಾಪುರ, ಬ್ಯಾಗಡದೇನಹಳ್ಳಿ, ಕಾಡ ಅಗ್ರಹಾರ, ಚಿಕ್ಕಹಾಗಡೆ, ದೊಡ್ಡಹಾಗಡೆ, ಸಾಮನೂರು, ಕಚಮನಹಳ್ಳಿ, ಗುಡ್ಡದಹಳ್ಳಿ, ಅರವಂತಿಗೆಪುರ, ಪಿ.ಗೊಲ್ಲಹಳ್ಳಿ, ತೆಲಗರಹಳ್ಳಿ ಮತ್ತು ವನಕನಹಳ್ಳಿ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಾಹಿತಿ ತಿಳಿಸಿದೆ.
ಗ್ರಾಹಕರಿಗೆ ಪ್ರಮುಖ ಸೂಚನೆಗಳು
* ಮೊಬೈಲ್, ಲ್ಯಾಪ್‌ಟಾಪ್, ತುರ್ತು ದೀಪಗಳಂತಹ ಅಗತ್ಯ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳಿ. * ಯುಪಿಎಸ್‌ನಂತಹ ವಿದ್ಯುತ್ ಬ್ಯಾಕಪ್ ವ್ಯವಸ್ಥೆಗಳು ಸಂಪೂರ್ಣ ಚಾರ್ಜ್ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಿ.
* ಮನೆಯಿಂದ ಕೆಲಸ ಮಾಡುವವರು ತಮ್ಮ ವೇಳಾಪಟ್ಟಿಯನ್ನು ವಿದ್ಯುತ್ ಇಲ್ಲದಿರುವ ಸಮಯಕ್ಕೆ ತಕ್ಕಂತೆ ಯೋಜಿಸಿಕೊಳ್ಳುವುದು ಉತ್ತಮ.
* ವಿದ್ಯುತ್ ಪಂಪ್‌ಗಳನ್ನು ಅವಲಂಬಿಸಿದವರು ಕುಡಿಯುವ ನೀರು, ಅಡುಗೆ ಮತ್ತು ಇತರ ಅಗತ್ಯಗಳಿಗೆ ನೀರನ್ನು ಸಂಗ್ರಹಿಸಿಡಿ. * ವಿದ್ಯುತ್ ಕಡಿತದ ಸಮಯದಲ್ಲಿ ಲಿಫ್ಟ್ ಬಳಕೆಯನ್ನು ತಪ್ಪಿಸಿ, ಏಕೆಂದರೆ ಲಿಫ್ಟ್ ಅರ್ಧಕ್ಕೆ ನಿಂತು ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ.
* ವಾಷಿಂಗ್ ಮೆಷಿನ್, ಗೀಸರ್, ಮೈಕ್ರೋವೇವ್‌ನಂತಹ ಭಾರೀ ವಿದ್ಯುತ್ ಉಪಕರಣಗಳ ಬಳಕೆಯನ್ನು ವಿದ್ಯುತ್ ಪೂರೈಕೆ ಮರುಸ್ಥಾಪನೆ ಆಗುವವರೆಗೆ ಮುಂದೂಡಿ.
* ಹೆಚ್ಚಿನ ಮಾಹಿತಿಗಾಗಿ ಗ್ರಾಹಕರು ಬೆಸ್ಕಾಂನ ಅಧಿಕೃತ ವೆಬ್‌ಸೈಟ್ bescom.karnataka.gov.in ಅಥವಾ @NammaBESCOMಗೆ ಭೇಟಿ ನೀಡಬಹುದು.












Click it and Unblock the Notifications