Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜೂನ್ 20ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಜೂನ್ 18ರಂದು ಬುಧವಾರ ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಈ ಕೆಳಕಂಡ ಪ್ರದೇಶಗಳಲ್ಲಿ ಜೂನ್ 20-2025ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿನಗರ 2ನೇ ಬ್ಲಾಕ್, ಕಮಲಾ ನಗರ ಮುಖ್ಯರಸ್ತೆ, ಬೋವಿ ಪಾಳ್ಯ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್‌ನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಯೆಸ್ಹವನ ಅಪಾರ್ಟ್‌ಮೆಂಟ್, ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಜೂನ್ 18ರಲ್ಲಿ ಎಲ್ಲೆಲ್ಲಿ ಕರೆಂಟ್ ಕಟ್: ಈಗಾಗಲೇ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜೂನ್ 18ರ ಬುಧವಾರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕೆಂದು ಪ್ರಕಟಣೆಯಲ್ಲಿ ಮನವಿ ಮಡಿತ್ತು.
ಹಿಂದೂ ಸ್ಮಶಾನ ಪ್ರದೇಶ, ಕನ್ನೂರಹಳ್ಳಿ ರಸ್ತೆ, ಸೋಮಸುಂದರ್ ಲೇಔಟ್, ನಿಸರ್ಗ ಲೇಔಟ್, ಅನ್ನಪೂರ್ಣೇಶ್ವರಿ ನಗರ, ಮಿಲನ್ ಕಲ್ಯಾಣ ಮಂಟಪ, ಕನ್ನೂರಹಳ್ಳಿ ಗಂಗಲು ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿತ್ತು. ಅಲ್ಲದೆ, ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಸ್ಕಾಂ ಮುಂಜಾಗ್ರತಾ ಕ್ರಮವಾಗಿ ಯಾವುದೇ ತೊಂದರೆಯಾಗದಂತೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡುತ್ತಲಿರುತ್ತದೆ.












Click it and Unblock the Notifications